ದಕ್ಷಿಣ ಕನ್ನಡಕ್ಕೆ ನೂತನ ಜಿಲ್ಲಾಧಿಕಾರಿಯಾಗಿ ಡಾ.ಕುಮಾರ್ ನೇಮಕ
ಮಂಗಳೂರು, ಅಕ್ಟೋಬರ್, 21; ಆಡಳಿತ ಯಂತ್ರ ಚುರುಕುಗೊಳಿಸಲು ಹಲವು ಜಿಲ್ಲೆಗಳ ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಕರ್ನಾಟಕ ಸರ್ಕಾರ ಆದೇಶ ಹೊರಡಿಸಿದೆ. ದಕ್ಷಿಣ ಕನ್ನಡ ಜಿಲ್ಲೆಯ ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ ಅವರನ್ನು ವರ್ಗಾವಣೆಗೊಳಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ ಅವರನ್ನು ಮೈಸೂರು ಜಿಲ್ಲಾಧಿಕಾರಿಯಾಗಿ ತಕ್ಷಣದಿಂದಲೇ ಅಧಿಕಾರವಹಿಸುವಂತೆ ರಾಜ್ಯ ಸರ್ಕಾರ ಆದೇಶ ಮಾಡಿದೆ. ಮೈಸೂರು ಜಿಲ್ಲಾಧಿಕಾರಿ ಗೌತಮ್ ಬಗಾದಿ ಸ್ಥಾನವನ್ನು ಡಾ.ರಾಜೇಂದ್ರ ಕೆ.ವಿ ಅವರು ತುಂಬಲಿದ್ದಾರೆ. ಡಾ.ರಾಜೇಂದ್ರ ಕೆ.ವಿ ಅವರಿಂದ ತೆರವಾದ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಸ್ಥಾನವನ್ನು ತುಂಬಲು ಐಎಎಸ್ ಅಧಿಕಾರಿ, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ಡಾ.ಕುಮಾರ್ ಅವರು ತುಂಬಲಿದ್ದಾರೆ. ಈ ಬಗ್ಗೆ ರಾಜ್ಯ ಸರ್ಕಾರ ಆದೇಶವನ್ನು ಹೊರಡಿಸಿದೆ. ದಕ್ಷಿಣ ಕನ್ನಡ ಜಿಲ್ಲೆಯ 130ನೇ ಜಲ್ಲಾಧಿಕಾರಿಯಾಗಿ ಡಾ.ರಾಜೇಂದ್ರ ಕೆ.ವಿ ಜುಲೈ 30, 2020ರಲ್ಲಿ ಅಧಿಕಾರ ವಹಿಸಿಕೊಂಡಿದ್ದರು. ಬಳಿಕ ಕೋವಿಡ್ ಸಂಕಷ್ಟದ ಕಾಲ, ಜಲಪ್ರಳಯ, ಗಲಭೆಯಂತಹ ಸಂದಿಗ್ಧ ಪರಿಸ್ಥಿತಿಯನ್ನು ಯಶಸ್ವಿಯಾಗಿ ನಿಯಂತ್ರಿಸಿದ ಹೆಗ್ಗಳಿಕೆ ಡಾ.ರಾಜೇಂದ್ರ ಕೆ.ವಿ ಅವರದ್ದಾಗಿದೆ.












Click it and Unblock the Notifications