ಮಂಗಳೂರು ನೂತನ ಪೊಲೀಸ್ ಕಮಿಷನರ್ ಡಾ ಹರ್ಷ ನೇಮಕ

ಮಂಗಳೂರು ಆಗಸ್ಟ್ 6: ಮಂಗಳೂರಿನ ನೂತನ ಪೊಲೀಸ್ ಕಮಿಷನರ್ ಆಗಿ ಡಾ.ಪಿ.ಎಸ್. ಹರ್ಷ ಅವರನ್ನು ನಿಯುಕ್ತಿ ಮಾಡಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ. ಈ ಮೊದಲು ಡಾ. ಸುಬ್ರಹ್ಮಣ್ಯೇಶ್ವರ್ ರಾವ್ ಅವರನ್ನು ಮಂಗಳೂರಿನ ನೂತನ ಪೊಲೀಸ್ ಕಮಿಷನರ್ ಅಗಿ ನಿಯುಕ್ತಗೊಳಿಸಲಾಗಿತ್ತು.

ಕೆಲ ದಿನಗಳ ಹಿಂದೆ ಮಂಗಳೂರು ಪೊಲೀಸ್ ಕಮಿಷನರ್ ಆಗಿದ್ದ ಸಂದೀಪ್ ಪಾಟೀಲ್ ಅವರನ್ನು ವರ್ಗಾವಣೆ ಮಾಡಿ ರಾಜ್ಯ ಸರಕಾರ ಆದೇಶಿಸಿ ಅವರ ಜಾಗಕ್ಕೆ ರಾಜ್ಯ ಗುಪ್ತಚರ ವಿಭಾಗದ ಡಿಐಜಿ ಡಾ. ಸುಬ್ರಹ್ಮಣ್ಯೇಶ್ವರ್ ರಾವ್ ಅವರನ್ನು ಮಂಗಳೂರಿನ ನೂತನ ಪೊಲೀಸ್ ಕಮಿಷನರ್ ಆಗಿ ನಿಯುಕ್ತಿಗೊಳಿಸಿತ್ತು. ಕೆಲವು ತಾಂತ್ರಿಕ ಕಾರಣಗಳಿಂದ ಡಾ. ಸುಬ್ರಹ್ಮಣ್ಯೇಶ್ವರ್ ರಾವ್ ಅವರ ಬದಲು ಈಗ ಡಾ. ಪಿ.ಎಸ್. ಹರ್ಷ ಅವರನ್ನು ಮಂಗಳೂರು ಪೊಲೀಸ್ ಕಮಿಷನರ್ ಆಗಿ ನೇಮಿಸಲಾಗಿದೆ.

Dr P S Harsha Appointed As New Mangaluru Police Commissioner

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಡಾ. ಪಿ.ಎಸ್. ಹರ್ಷ ಕರ್ತವ್ಯ ನಿರ್ವಹಿಸಿದ ಅನುಭವ ಹೊಂದಿದ್ದಾರೆ. ಅವರು ಪುತ್ತೂರು ಎಎಸ್ ಪಿಯಾಗಿ ಕರ್ತವ್ಯ ಆರಂಭಿಸಿದ್ದರು, ನಂತರ ಡಾ. ಹರ್ಷ ಅವರು 2017-18ರಲ್ಲಿ ವಾರ್ತಾ ಇಲಾಖೆಯ ಆಯುಕ್ತರಾಗಿದ್ದರು. ಅದಲ್ಲದೇ ಮಂಗಳೂರು ನಗರ ಕಾನೂನು ಮತ್ತು ಸುವ್ಯವಸ್ಥೆ ಡಿಸಿಪಿ ಡಾ ಅರುಣಾಮ್ಶ್ಯೂಗಿರಿ ಅವರನ್ನು ನೇಮಕ ಮಾಡಿ ರಾಜ್ಯ ಸಕರಾರ ಆದೇಶ ಹೊರಡಿಸಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+