ಕುಕ್ಕೆ ಸುಬ್ರಹ್ಮಣ್ಯಕ್ಕೆ ಬರುವ ಭಕ್ತರಿಗೆ ಡ್ರೆಸ್ ಕೋಡ್ ಕಡ್ಡಾಯಕ್ಕೆ ಮನವಿ
ಮಂಗಳೂರು, ಜನವರಿ 16: ದಕ್ಷಿಣ ಭಾರತದ ಪ್ರಮುಖ ದೇವಾಲಯಗಳಲ್ಲಿ ಒಂದಾದ ದಕ್ಷಿಣ ಕನ್ನಡದ ಸುಳ್ಯ ತಾಲೂಕಿನ ಕುಕ್ಕೆ ಸುಬ್ರಹ್ಮಣ್ಯ ದೇವಾಲಯಕ್ಕೆ ಬರುವ ಭಕ್ತರಿಗೆ ವಸ್ತ್ರ ಸಂಹಿತೆ ಕಡ್ಡಾಯ ಮಾಡಬೇಕೆಂದು ವಿಶ್ವ ಹಿಂದೂ ಪರಿಷತ್ ಮತ್ತು ಭಜರಂಗದಳ ಕುಕ್ಕೆ ಸುಬ್ರಹ್ಮಣ್ಯ ದೇವಳದ ಕಾರ್ಯನಿರ್ವಾಹಣ ಅಧಿಕಾರಿಗೆ ಮನವಿ ಮಾಡಿದ್ದಾರೆ.
Recommended Video
ದಕ್ಷಿಣ ಕನ್ನಡ ಪ್ರವಾಸಿಗರ ಸ್ವರ್ಗ, ಒಂದು ಕಡೆ ಭೋರ್ಗರೆಯುವ ಸಮುದ್ರ, ಇನ್ನೊಂದು ಕಡೆ ಪಶ್ಚಿಮ ಘಟ್ಟಗಳ ಸಾಲು. ಇವುಗಳ ನಡುವೆ ರಾರಾಜಿಸುತ್ತಿರುವ ಹಲವು ದೇವಾಲಯಗಳು. ಈ ದೇವಾಲಯಗಳ ಪೈಕಿ ರಾಜ್ಯದಲ್ಲಿಯೇ ಅತ್ಯಂತ ಶ್ರೀಮಂತ ದೇವಾಲಯವೆನಿಸಿಕೊಂಡಿರುವ ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಾಲಯವು ಕೂಡ ಒಂದು.

ಈ ದೇವಾಲಯಕ್ಕೆ ಪ್ರತಿನಿತ್ಯ ಸಾವಿರಾರು ಭಕ್ತರು, ಪ್ರವಾಸಿಗರು, ಆಗಮಿಸುತ್ತಾರೆ. ಹೀಗಾಗಿ ದೇವಾಲಯಕ್ಕೆ ಬರುವ ಭಕ್ತರಿಗೆ ವಸ್ತ್ರ ಸಂಹಿತೆ ಕಡ್ಡಾಯ ಮಾಡಬೇಕೆಂದು ಹಿಂದೂ ಪರ ಸಂಘಟನೆಗಳು ಅಧಿಕಾರಿಗಳಿಗೆ ಮನವಿ ಮಾಡಿಕೊಂಡಿದೆ.

ಬೇರೆ ಬೇರೆ ಜಿಲ್ಲೆ, ರಾಜ್ಯಗಳಿಂದ ಬರುವ ಭಕ್ತರು ಕುಕ್ಕೆ ದೇವಾಲಯಕ್ಕೆ ಬರುವ ಸಮಯದಲ್ಲಿ ಸರಿಯಾದ ವಸ್ತ್ರ ಸಂಹಿತೆ ಮಾಡದ ಹಿನ್ನಲೆಯಲ್ಲಿ ಹಿಂದೂ ಪರ ಸಂಘಟನೆಗಳು ಈ ವಸ್ತ್ರ ಸಂಹಿತೆ ಮಾಡಬೇಕೆಂದು ಆಗ್ರಹಿಸಿದೆ.












Click it and Unblock the Notifications