ಮಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಮಂಗಳೂರು: ಕೋಟ್ಯಾಂತರ ರೂ. ಮೌಲ್ಯದ ಅಕ್ರಮ ಚಿನ್ನ ವಶ, 4 ಬಂಧನ

|
Google Oneindia Kannada News

ಮಂಗಳೂರು, ಫೆಬ್ರವರಿ 12: ಮಂಗಳೂರಿನ ಕಸ್ಟಮ್ಸ್ ವಿಭಾಗದ ಡಿ.ಆರ್.ಐ ಅಧಿಕಾರಿಗಳು ಮಹತ್ವದ ಕಾರ್ಯಚರಣೆ ನಡೆಸಿ ಭಾರೀ ಪ್ರಮಾಣದ ಅಕ್ರಮ ಚಿನ್ನ ಸಾಗಾಟ ಯತ್ನವನ್ನು ವಿಫಲಗೊಳಿಸಿದ್ದಾರೆ.

ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಹಾಗೂ ಮಂಗಳೂರು ರೈಲ್ವೇ ನಿಲ್ದಾಣದಲ್ಲಿ ಕಾರ್ಯಾಚರಣೆ ನಡೆಸಿದ ಅಧಿಕಾರಿಗಳು ಅಕ್ರಮ ಚಿನ್ನ ಸಾಗಾಟ ಪ್ರಕರಣಕ್ಕೆ ಸಂಬಂಧಿಸಿದಂತೆ 4 ಮಂದಿ ಆರೋಪಿಗಳನ್ನು ಬಂಧಿಸಿ ಬರೋಬ್ಬರಿ 4 ಕೆಜಿ ಅಕ್ರಮ ಚಿನ್ನವನ್ನು ವಶಪಡಿಸಿಕೊಂಡಿದ್ದಾರೆ.

ಮಂಗಳೂರು ವಿಮಾನದ ಮೂಲಕ ಭಾರೀ ಚಿನ್ನದ ಸ್ಮಗ್ಲಿಂಗ್ ನಡೆಯುತ್ತಿರುವ ಬಗ್ಗೆ ಖಚಿತ ಮಾಹಿತಿ ಕಸ್ಟಮ್ಸ್ ವಿಭಾಗದ ಡಿ.ಆರ್.ಐ ಅಧಿಕಾರಿಗಳಿಗೆ ಬಂದು ತಲುಪಿತ್ತು. ಹೀಗಾಗಿ ಅಧಿಕಾರಿಗಳು ಮಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿಯುವ ಪ್ರಯಾಣಿಕರ ಚಲನವಲನದ ಮೇಲೆ ಹದ್ದಿನ ಕಣ್ಣಿಟ್ಟಿದ್ದರು.

DRI officials seizes gold worth more than Rs 1 crore in Mangaluru

ಇದೇ ಸಂದರ್ಭದಲ್ಲಿ ದುಬೈನಿಂದ ಸ್ಪೈಸ್ ಜೆಟ್ ವಿಮಾನದ ಮೂಲಕ ಮಂಗಳೂರಿಗೆ ಬಂದಿಳಿದ ಕಾಸರಗೋಡು ಮೂಲದ ಹಸನ್ ಹಾಗೂ ಸಮೀರಾ ದಂಪತಿಯ ವರ್ತನೆಯ ಬಗ್ಗೆ ಸಂದೇಹ ವ್ಯಕ್ತಪಡಿಸಿದ ಡಿ.ಆರ್.ಐ ಅಧಿಕಾರಿಗಳು ಅವರನ್ನು ತನಿಖೆಗೆ ಒಳಪಡಿಸಿದ್ದಾರೆ.

ಈ ಸಂದರ್ಭದಲ್ಲಿ ಹಸನ್ ಹಾಗೂ ಸಮೀರಾ ತಮ್ಮಮ ಸೊಂಟದಲ್ಲಿ ಬೆಲ್ಟ್ ನಂತಹ ವಸ್ತುವನ್ನು ಸುತ್ತಿಕೊಂಡಿರುವುದು ಅಧಿಕಾರಿಗಳ ಕಣ್ಣಿಗೆ ಬಿದ್ದಿದೆ. ಈ ಬೆಲ್ಟನ್ನು ತೆಗೆದು ಪರಿಶೀಲನೆ ನಡೆಸಿದಾಗ ಅದರಲ್ಲಿ ಕಂದು ಬಣ್ಣದ ರಬ್ಬರ್ ನಂತಹ ವಸ್ತು ಇರುವುದು ಕಂಡು ಬಂದಿದೆ. ಈ ಕುರಿತು ಅನುಮಾನ ವ್ಯಕ್ತಪಡಿಸಿದ ಅಧಿಕಾರಿಗಳು ಆ ಕಂದು ಬಣ್ಣದ ವಸ್ತುವನ್ನು ಪರೀಕ್ಷೆಗೆ ಒಳಪಡಿಸಿದಾಗ ಅದರಲ್ಲಿ ಚಿನ್ನವನ್ನು ಮಿಶ್ರಣ ಮಾಡಿರುವ ಲೇಪ ಪತ್ತೆಯಾಗಿದೆ .

DRI officials seizes gold worth more than Rs 1 crore in Mangaluru

ಈ ಹಿನ್ನೆಲೆಯಲ್ಲಿ ಹಸನ್ ಹಾಗೂ ಸಮೀರಾ ಅವರನ್ನು ಬಂಧಿಸಿ ಅವರಿಂದ 2 ಕೆ.ಜಿ ಚಿನ್ನವನ್ನು ಡಿ.ಆರ್.ಐ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ . ವಶಪಡಿಸಿ ಕೊಂಡ ಚಿನ್ನದ ಒಟ್ಟು ಮೌಲ್ಯ 66 ಲಕ್ಷ ರೂಪಾಯಿ ಎಂದು ಅಂದಾಜಿಸಲಾಗಿದೆ.

ಮತ್ತೊಂದು ಪ್ರಕರಣದಲ್ಲಿ ರೈಲ್ವೆ ಮೂಲಕ ಅಕ್ರಮ ಚಿನ್ನ ಸಾಗಾಟವಾಗುತ್ತಿರುವ ಬಗ್ಗೆ ಮಾಹಿತಿ ಕಲೆ ಹಾಕಿದ್ದ ಡಿ.ಆರ್.ಐ ಅಧಿಕಾರಿಗಳ ತಂಡ ಮಂಗಳೂರು ಮೂಲಕ ಹಾದು ಹೋಗುವ ರೈಲುಗಳ ಪ್ರಯಾಣಿಕರ ಮೇಲೆ ನಿಗಾ ವಹಿಸಿತ್ತು. ಮಂಗಳೂರು ಮೂಲಕ ಹಾದು ಹೋಗುವ ಮರು ಸಾಗರ್ ಎಕ್ಸ್‌ಪ್ರೆಸ್‌ ರೈಲಿನಲ್ಲಿ ಪ್ರಯಾಣಿಕರನ್ನು ಅಧಿಕಾರಿಗಳು ಪರಿಶೀಲನೆಗೆ ಒಳಪಡಿಸಿದ್ದಾರೆ.

ಈ ಸಂದರ್ಭದಲ್ಲಿ ಕೇರಳದ ಕೋಯಿಕೋಡ್ ಗೆ ಪ್ರಯಾಣಿಸುತ್ತಿದ್ದ ಮೊಯುದ್ದೀನ್ ಹಾಗೂ ಶಂಶುದ್ದೀನ್ ಎಂಬವರಿಂದ 16 ಚಿನ್ನದ ಬಿಸ್ಕೆಟ್ ಗಳನ್ನು ವಶಪಡಿಸಿಕೊಂಡಿದ್ದಾರೆ. ಈ ಚಿನ್ನದ ಬಿಸ್ಕೆಟ್ ಗಳನ್ನು ಈ ಇಬ್ಬರು ದುಬೈನಿಂದ ನೇಪಾಳದ ಮೂಲಕ ಭಾರತಕ್ಕೆ ತಂದಿದ್ದರು ಎಂದು ಹೇಳಲಾಗಿದೆ.

DRI officials seizes gold worth more than Rs 1 crore in Mangaluru

ಮುಂಬಯಿಯ ಪನ್ವೇಲ್ ನಲ್ಲಿ ಮರು ಸಾಗರ್ ಎಕ್ಸ್‌ಪ್ರೆಸ್‌ ರೈಲು ಏರಿದ ಈ ಇಬ್ಬರು ಕೇರಳದ ಕೋಯಿಕೋಡ್ ಗೆ ಅಕ್ರಮವಾಗಿ ಚಿನ್ನ ಸಾಗಿಸುತ್ತಿದ್ದರು ಎಂದು ಹೇಳಲಾಗಿದೆ. ಈ ಇಬ್ಬರಿಂದ 1.8 ಕೆಜಿ ತೂಕದ ಚಿನ್ನ ವಶಪಡಿಸಿಕೊಳ್ಳಲಾಗಿದ್ದು , ವಶಪಡಿಸಿಕೊಂಡ ಚಿನ್ನದ ಒಟ್ಟು ಮೌಲ್ಯ 56 ಲಕ್ಷ ರೂಪಾಯಿ ಎಂದು ಅಂದಾಜಿಸಲಾಗಿದೆ.

ಈ ಎರಡೂ ಪ್ರಕರಣಗಳಿಗೆ ಸಂಬಂಧಿಸಿದಂತೆ 4 ಮಂದಿ ಆರೋಪಿಗಳನ್ನು ಡಿ.ಆರ್.ಐ ಅಧಿಕಾರಿಗಳು ಬಂಧಿಸಿ ಒಟ್ಟು 1 ಕೋಟಿ ರೂಪಾಯಿಗೂ ಅಧಿಕ ಮೌಲ್ಯದ ಅಕ್ರಮ ಚಿನ್ನವನ್ನು ವಶಪಡಿಸಿಕೊಂಡಿದ್ದಾರೆ.

English summary
In two separate incidents DRI Mangaluru seized 4 kg of gold valued at more than Rs 1 crore at Mangaluru International Airport and Mangaluru Junction Railway Station.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X