ಕುಕ್ಕೆ ಸುಬ್ರಮಣ್ಯದಲ್ಲಿ ಮಡೆಸ್ನಾನದ ಬದಲಿಗೆ ಎಡೆಸ್ನಾನ
ಮಂಗಳೂರು, ಡಿಸೆಂಬರ್ 16 : ಕುಕ್ಕೆ ಸುಬ್ರಮಣ್ಯದಲ್ಲಿ ಚಂಪಾ ಷಷ್ಠಿ ಮಹೋತ್ಸವಕ್ಕೆ ಚಾಲನೆ ಸಿಕ್ಕಿದೆ. ಮಂಗಳವಾರ ಮಡೆಸ್ನಾನದ ಬದಲು ಎಡೆಸ್ನಾನ ಸೇವೆ ಮಾಡಲು ಭಕ್ತಾದಿಗಳಿಗೆ ಅವಕಾಶ ನೀಡಲಾಗಿತ್ತು. 130ಕ್ಕೂ ಅಧಿಕ ಭಕ್ತರು ಮಡೆಸ್ನಾನದಲ್ಲಿ ಪಾಲ್ಗೊಂಡಿದ್ದರು.
ಕುಕ್ಕೆ ಸುಬ್ರಮಣ್ಯದಲ್ಲಿ ಮಂಗಳವಾರದಿಂದ ಮೂರು ದಿನಗಳ ಕಾಲ 'ಎಡೆಸ್ನಾನ' ನಡೆಸಲು ಧಾರ್ಮಿಕ ದತ್ತಿ ಇಲಾಖೆ ಅವಕಾಶ ಕಲ್ಪಿಸಿದೆ. ಮಡೆ-ಮಡೆಸ್ನಾನವನ್ನು ಆಚರಿಸುದಕ್ಕೆ ಕೆಲವು ಸ್ವಾಮೀಜಿಗಳು, ಪ್ರಗತಿಪರ ಚಿಂತಕರಿಂದ ಆಕ್ಷೇಪ ಕೇಳಿಬಂದಿತ್ತು. [ಮಡೆಸ್ನಾನಕ್ಕೆ ಪರ್ಯಾಯ ವ್ಯವಸ್ಥೆ ಏನು? ಹೀಗೂ ಮಾಡಬಹುದು]

ಮಡೆ-ಮಡೆಸ್ನಾನ ಪದ್ಧತಿಯನ್ನು ರದ್ದುಪಡಿಸುವಂತೆ ಕೋರಿ ಹೈಕೋರ್ಟ್‌ಗೆ ಶ್ರೀ ವೀರಭದ್ರ ಚೆನ್ನಮಲ್ಲ ಸ್ವಾಮೀಜಿ ಮತ್ತು ಇತರರು ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದಾರೆ. ಮಡೆ-ಮಡೆಸ್ನಾನಕ್ಕೆ ಪರ್ಯಾಯವಾಗಿ ಎಡೆಸ್ನಾನ ಅಂದರೆ, ದೇವರ ನೈವೇದ್ಯ ಇರಿಸಲಾದ ಎಲೆಗಳ ಮೇಲೆ ಉರುಳು ಸೇವೆ ಕೈಗೊಳ್ಳಲು ಅವಕಾಶ ಕಲ್ಪಿಸುವುದಾಗಿ ಸರ್ಕಾರದ ವತಿಯಿಂದ ನ್ಯಾಯಾಲಯಕ್ಕೆ ಪ್ರಮಾಣ ಪತ್ರ ಸಲ್ಲಿಸಲಾಗಿತ್ತು. [ಎಂಜಲೆಲೆಯ ಮೇಲೆ ಉರುಳಲು ಸಿದ್ಧ ಎನ್ನುತ್ತಿದ್ದಾರೆ ಮಲೆಕುಡಿಯರು]
ಸರ್ಕಾರ ಸಲ್ಲಿಸಿದ್ದ ಪ್ರಮಾಣ ಪತ್ರವನ್ನು ನ್ಯಾಯಾಲಯ ಮಾನ್ಯ ಮಾಡಿದ್ದು, ದೇವಸ್ಥಾನದಲ್ಲಿ ಯಾವುದೇ ಪಂಕ್ತಿ ಬೇಧವನ್ನು ಧರ್ಮ, ಮತ, ಜಾತಿ ಹಾಗೂ ಲಿಂಗ ತಾರತಮ್ಯದ ಆಧಾರದಲ್ಲಿ ಉತ್ತೇಜಿಸತಕ್ಕದ್ದಲ್ಲ ಅಥವಾ ಅನುಮತಿಸತಕ್ಕದ್ದಲ್ಲ ಎಂಬ ಷರತ್ತಿನೊಂದಿಗೆ ಮಡೆ-ಮಡೆಸ್ನಾದ ಬದಲಿಗೆ ಎಡೆಸ್ನಾನ ಸೇವೆಗೆ ಒಪ್ಪಿಗೆ ನೀಡಿದೆ ಎಂದು ಜಿಲ್ಲಾಧಿಕಾರಿ ಎ.ಬಿ.ಇಬ್ರಾಹಿಂ ಅವರು ತಿಳಿಸಿದ್ದಾರೆ. [ದೇವಾಲಯದ ಆನ್ ಲೈನ್ ಸೇವೆ ಬುಕ್ ಮಾಡುವುದು ಹೇಗೆ?]
ಮಂಗಳವಾರದಿಂದ ಎಡೆಸ್ನಾನ ಆರಂಭವಾಗಿದ್ದು, ದೇವಾಲಯದಲ್ಲಿ ನಡೆದ ಮಹಾಪೂಜೆಯ ನಂತರ ಪ್ರಸಾದವನ್ನು ಗೋವುಗಳಿಗೆ ತಿನ್ನಲು ಕೊಟ್ಟು, ನಂತರ ಆ ಬಾಳೆ ಎಲೆಗಳ ಮೇಲೆ ಭಕ್ತರು ಹೊರಾಂಗಣದಲ್ಲಿ ಉರುಳು ಸೇವೆ ನಡೆಸಲು ಅವಕಾಶ ನೀಡಲಾಗಿದೆ.
-
Weekly Horoscope: ನಾಲ್ಕು ರಾಶಿಯವರಿಗೆ ಅದೃಷ್ಟ ಹೊತ್ತು ತರುವ ವಾರ ಇದು: ಹೇಗಿದೆ ನೋಡಿ ನಿಮ್ಮ ವಾರ ಭವಿಷ್ಯ -
PUC Revaluation: ಸ್ಕ್ಯಾನ್ ಪ್ರತಿ ಪಡೆದವರ ಉತ್ತರ ಪತ್ರಿಕೆ ಮರುಮೌಲ್ಯಮಾಪನ; ಶುಲ್ಕ, ಪ್ರಮುಖ ದಿನಾಂಕಗಳು -
Bengaluru Property: ಬೆಂಗಳೂರು ಮೆಟ್ರೋದ ಈ ಮಾರ್ಗಗಳಲ್ಲಿ ಭೂಮಿ, ಪ್ರಾಪರ್ಟಿ ಬೆಲೆ ಶೇ 20% ರಿಂದ ಶೇ 30% ಹೆಚ್ಚಳ -
Gold Price Drop: ವಾರದ ಮೊದಲ ದಿನವೇ ಚಿನ್ನ-ಬೆಳ್ಳಿ ದರ ಭರ್ಜರಿ ಕುಸಿತ, ಇಂದಿನ ದರಪಟ್ಟಿ -
Career Break: ಅಲಾರಂ ಇಲ್ಲದ ಜೀವನ ಬೇಕು ಎಂದು ಗೂಗಲ್ ಕೆಲಸ ಬಿಟ್ಟ ಯುವ ಟೆಕ್ಕಿ, ನೆಟ್ಟಿಗರ ಮೆಚ್ಚುಗೆ -
E-Khata: ಜನ ಸೇವಕ ಯೋಜನೆ: ಮನೆಯಲ್ಲೇ ಕುಳಿತು ಇ - ಖಾತಾ ಪಡೆಯಿರಿ, ಈ 5 ದಾಖಲೆಗಳಿದ್ದರೆ ಸಾಕು -
Gold Rings: ಅಕ್ಷಯ ತೃತೀಯಕ್ಕೆ ಖರೀದಿಸಬಹುದಾದ ಆಕರ್ಷಕ ವಿನ್ಯಾಸದ 5 ಚಿನ್ನದ ಉಂಗುರಗಳು -
ಮಂಡ್ಯದಲ್ಲಿ 500 ಎಕರೆ ಆಟೋ ಕೈಗಾರಿಕಾ ಹಬ್: ಎಂಬಿ ಪಾಟೀಲ, ಎಚ್ಡಿ ಕುಮಾರಸ್ವಾಮಿ ಮಹತ್ವದ ಚರ್ಚೆ -
April 13 Horoscope: 12 ರಾಶಿಗಳಿಗೆ ಇಂದು ಪ್ರೇಮ, ಹಣಕಾಸು, ಉದ್ಯೋಗದಲ್ಲಿ ಏನು ಹೇಳುತ್ತದೆ ನಿಮ್ಮ ರಾಶಿ? -
Bengaluru power cut: ಬೆಂಗಳೂರಿನ ಹಲವೆಡೆ ಹೆಚ್ಚಾಯ್ತು ದಿಢೀರ್ ಪವರ್ ಕಟ್, ಹೈರಾಣಾದ ಜನ: ಬೆಸ್ಕಾಂ ಕೊಟ್ಟ ಉತ್ತರ ಇಲ್ಲಿದೆ -
School Holiday: ರಾಜ್ಯದಲ್ಲಿ 2026-27ನೇ ಸಾಲಿನ ಶೈಕ್ಷಣಿಕ ವೇಳಾಪಟ್ಟಿ ಪ್ರಕಟ: ದಸರಾ, ಬೇಸಿಗೆ ರಜೆ, ಕೆಲಸದ ದಿನಗಳ ವಿವರ -
PUC ವಿದ್ಯಾರ್ಥಿಗಳಿಗೆ ಗುಡ್ನ್ಯೂಸ್: ಇದೇ ವರ್ಷದಿಂದಲೇ ಸಿಗಲಿವೆ ಉಚಿತ ಪಠ್ಯ ಪುಸ್ತಕ












Click it and Unblock the Notifications