ಮಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ವಿದ್ಯಾರ್ಥಿಗಳ 'ಸುಸೈಡ್ ಪಾಯಿಂಟ್‌ ಆಗ್ತಿದೆಯೇ ಶಿಕ್ಷಣ ಕಾಶಿ ದಕ್ಷಿಣ ಕನ್ನಡ!?

|
Google Oneindia Kannada News

ಮಂಗಳೂರು, ಅಕ್ಟೋಬರ್.01: ದಕ್ಷಿಣಕನ್ನಡ ಜಿಲ್ಲೆಯಲ್ಲಿ ವಿದ್ಯಾರ್ಥಿಗಳ ಆತ್ಮಹತ್ಯಾ ಸರಣಿ ಮುಂದುವರೆದಿದೆ. ಮಂಗಳೂರಿನಲ್ಲಿ ಮತ್ತೊಬ್ಬ ವಿದ್ಯಾರ್ಥಿ ಆತ್ಮಹತ್ಯೆಗೆ ಶರಣಾಗಿದ್ದಾನೆ. ಈ ಹಿನ್ನೆಲೆಯಲ್ಲಿ ಮಂಗಳೂರು ವಿದ್ಯಾರ್ಥಿಗಳ ಆತ್ಮಹತ್ಯಾ ನಗರವಾಗಿ ಪರಿಣಮಿಸುತ್ತಿದೆಯೇ? ಎಂಬ ಸಂಶಯ ಮೂಡಲಾರಂಭಿಸಿದೆ.

ಹೌದು, ಇತ್ತೀಚೆಗೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹಲವಾರು ಕಾಲೇಜು ವಿದ್ಯಾರ್ಥಿಗಳ ಸರಣಿ ಆತ್ಮಹತ್ಯೆ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಇದು ಜಿಲ್ಲೆಯ ಜನರಲ್ಲಿ ಆತಂಕಕ್ಕೆ ಕಾರಣವಾಗಿದೆ. ಅದರಲ್ಲೂ ಹೊರ ಜಿಲ್ಲೆಗಳಿಂದ ವಿದ್ಯಾರ್ಜನೆಗೆ ಇಲ್ಲಿಗೆ ಬರುವ ವಿದ್ಯಾರ್ಥಿಗಳೇ ಆತ್ಮಹತ್ಯೆಗೆ ಶರಣಾಗುತ್ತಿರುವದು ಗಮನಾರ್ಹ.

ಅಂದಹಾಗೆ ನಗರದ ಹೊರವಲಯದ ವಳಚ್ಚಿಲ್ ಶ್ರೀನಿವಾಸ ಇಂಜಿನಿಯರಿಂಗ್ ಕಾಲೇಜಿನ 3 ನೇ ಸೆಮಿಸ್ಟರ್ ಎಲೆಕ್ಟ್ರಾನಿಕ್ ಮತ್ತು ಕಮ್ಯೂನಿಕೇಶನ್ ವಿಭಾಗದಲ್ಲಿ ವ್ಯಾಸಂಗ ಮಾಡುತ್ತಿದ್ದ ಶರತ್ ಬಾಬು (20) ಭಾನುವಾರ ಆತ್ಮಹತ್ಯೆಗೆ ಶರಣಾಗಿದ್ದಾನೆ.

ಸುಳ್ಯದಲ್ಲಿ ಡೆಂಟಲ್ ಕಾಲೇಜು ವಿದ್ಯಾರ್ಥಿನಿ ನೇಣಿಗೆ ಶರಣುಸುಳ್ಯದಲ್ಲಿ ಡೆಂಟಲ್ ಕಾಲೇಜು ವಿದ್ಯಾರ್ಥಿನಿ ನೇಣಿಗೆ ಶರಣು

ತಾನು ವಾಸವಾಗಿದ್ದ ಮೇರ್ಲಪದವಿನ ಪಿಲಿಪ್ ಎಂಬುವವರ ಪಿಜಿಯ ಕೋಣೆಯಲ್ಲಿ ಶರತ್ ಬಾಬು ನೇಣು ಬಿಗಿದು ಅತ್ಮಹತ್ಮೆ ಮಾಡಿಕೊಂಡಿದ್ದಾನೆ. ಆತ್ಮಹತ್ಯೆಗೆ ನಿಖರ ಕಾರಣಗಳು ತಿಳಿದಿಲ್ಲ. ಬೆಂಗಳೂರು ಮೂಲದವನಾಗಿದ್ದ ಶರತ್ ಕಲಿಕೆಯಲ್ಲಿ ಒಳ್ಳೆ ಆಸಕ್ತಿ ಹೊಂದಿದ್ದನು ಎಂದು ಆತನ ಸಹಪಾಠಿಗಳು ತಿಳಿಸಿದ್ದಾರೆ.

ಈ ಘಟನೆಯ ಕುರಿತು ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇತ್ತೀಚೆಗೆ ಮಂಗಳೂರು ನಗರ ಸೇರಿದಂತೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಿದ್ಯಾರ್ಥಿಗಳ ಆತ್ಮಹತ್ಯೆ ಪ್ರಕರಣಗಳು ಹೆಚ್ಚುತ್ತಿದ್ದು, ಈ ಹಿನ್ನೆಲೆಯಲ್ಲಿ ಕಾಲೇಜು ಆಡಳಿತ ಮಂಡಳಿಗಳು ಹಾಗೂ ವಿದ್ಯಾರ್ಥಿಗಳ ಪೋಷಕರು ಈ ಸರಣಿ ಆತ್ಮಹತ್ಯಾ ಪ್ರಕರಣಗಳಿಂದ ಆತಂಕಿತರಾಗಿದ್ದಾರೆ.

ಈ ನಿಟ್ಟಿನಲ್ಲಿ ಗಂಭೀರವಾಗಿ ಚಿಂತಿಸುವ ಅಗತ್ಯತೆ ಇದೆ. ಈ ಘಟನೆಗಳನ್ನು ತಡೆಗಟ್ಟಲು ಕ್ರಮಕ್ಕೆ ಮುಂದಾಗದಿದ್ದಲ್ಲಿ ಶಿಕ್ಷಣ ಕಾಶಿ ಎಂದು ಗುರುತಿಸಲಾಗುವ ದಕ್ಷಿಣ ಕನ್ನಡ ಜಿಲ್ಲೆ ವಿದ್ಯಾರ್ಥಿಗಳ ಆತ್ಮಹತ್ಯೆಯ ಜಿಲ್ಲೆಯಾಗಿ ಮಾರ್ಪಡುವ ದಿನಗಳು ದೂರವಿಲ್ಲ ಎಂದು ವಿಶ್ಲೇಷಿಸಲಾಗುತ್ತಿದೆ. ಮುಂದೆ ಓದಿ...

 ಡೆಂಟಲ್ ಕಾಲೇಜು ವಿದ್ಯಾರ್ಥಿನಿ ನೇಣಿಗೆ ಶರಣು

ಡೆಂಟಲ್ ಕಾಲೇಜು ವಿದ್ಯಾರ್ಥಿನಿ ನೇಣಿಗೆ ಶರಣು

ಕಳೆದ ಸೆಪ್ಟೆಂಬರ್.27 ರಂದು ವೈದ್ಯಕೀಯ ವಿದ್ಯಾರ್ಥಿನಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಸುಳ್ಯದಲ್ಲಿ ನಡೆದಿತ್ತು. ಇಲ್ಲಿನ ಪ್ರತಿಷ್ಠಿತ ಕೆವಿಜಿ ಡೆಂಟಲ್ ಕಾಲೇಜಿನ ಕೇರಳ ಮೂಲದ ವಿದ್ಯಾರ್ಥಿನಿ ನೇಹಾ ಎ.ಥಾಮಸ್ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ.

ಕೆವಿಜಿ ಡೆಂಟಲ್ ಕಾಲೇಜಿನಲ್ಲಿ ಪ್ರಥಮ ವರ್ಷದ ವಿದ್ಯಾರ್ಥಿನಿಯಾಗಿರುವ ನೇಹಾ ಸುಳ್ಯದ ಮನೆ ಬಾಡಿಗೆಗೆ ಪಡೆದು ವಾಸವಾಗಿದ್ದರು.

 ಮಂಗಳೂರಿನಲ್ಲಿ ಕ್ಷುಲ್ಲಕ ಕಾರಣಕ್ಕೆ ನೇಣಿಗೆ ಕೊರಳೊಡ್ಡಿದ ವಿದ್ಯಾರ್ಥಿ ಮಂಗಳೂರಿನಲ್ಲಿ ಕ್ಷುಲ್ಲಕ ಕಾರಣಕ್ಕೆ ನೇಣಿಗೆ ಕೊರಳೊಡ್ಡಿದ ವಿದ್ಯಾರ್ಥಿ

 ಕ್ಷುಲ್ಲಕ ಕಾರಣಕ್ಕೆ ನೇಣಿಗೆ ಕೊರಳೊಡ್ಡಿದ ವಿದ್ಯಾರ್ಥಿ

ಕ್ಷುಲ್ಲಕ ಕಾರಣಕ್ಕೆ ನೇಣಿಗೆ ಕೊರಳೊಡ್ಡಿದ ವಿದ್ಯಾರ್ಥಿ

ಸೆಪ್ಟೆಂಬರ್ 26 ರಂದು ಕಾಲೇಜಿನಲ್ಲಿ ನೀಡಿದ ಅತಿಯಾದ ಶಿಕ್ಷೆಗೆ ಮನನೊಂದ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆಗೆ ಶರಣಾದ ಘಟನೆ ಮಂಗಳೂರಿನಲ್ಲಿ ತಡವಾಗಿ ಬೆಳಕಿಗೆ ಬಂದಿತ್ತು. ಪ್ರತಿಷ್ಠಿತ ಎಕ್ಸ್ ಪರ್ಟ್ ಕಾಲೇಜಿನ ವಿದ್ಯಾರ್ಥಿ ನೆವಿಲ್ ಫೆರ್ನಾಂಡೀಸ್ ಆತ್ಮಹತ್ಯೆ ಮಾಡಿಕೊಂಡಿರುವ ಬಾಲಕ.

ಮೊದಲನೇ ವರ್ಷದ ಪಿಯುಸಿಯಲ್ಲಿ ವ್ಯಾಸಂಗ ಮಾಡುತ್ತಿದ್ದ ಗೋವಾ ಮೂಲದ ನೆವಿಲ್ ಫೆರ್ನಾಂಡೀಸ್ ಕಾಲೇಜಿನಲ್ಲಿ ಸಹಪಾಠಿ ವಿದ್ಯಾರ್ಥಿನಿಯೊಂದಿಗೆ ಮಾತನಾಡಿದ್ದಕ್ಕೆ ಕಾಲೇಜಿನಿಂದ ಸಸ್ಪೆಂಡ್ ಮಾಡಲಾಗಿತ್ತು. ನೆವಿಲ್ ಜತೆ ವಿದ್ಯಾರ್ಥಿನಿಯನ್ನೂ ಕಾಲೇಜು ಆಡಳಿತ ಮಂಡಳಿ ಸಸ್ಪೆಂಡ್ ಮಾಡಿತ್ತು.

ಇದರಿಂದ ಮನನೊಂದ ವಿದ್ಯಾರ್ಥಿ ಅವಮಾನ ತಾಳಲಾರದೇ ಉರ್ವಾದಲ್ಲಿರುವ ತನ್ನ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಹೇಳಲಾಗಿದೆ.

 ಮಂಗಳೂರಿನಲ್ಲಿ ಬೆಳಕಿಗೆ ಬಂತು ವೃದ್ಧನೊಬ್ಬನ ಕಾಮ ಪುರಾಣ ಮಂಗಳೂರಿನಲ್ಲಿ ಬೆಳಕಿಗೆ ಬಂತು ವೃದ್ಧನೊಬ್ಬನ ಕಾಮ ಪುರಾಣ

 ನೇಣು ಬಿಗಿದು ವಿದ್ಯಾರ್ಥಿನಿ ಆತ್ಮಹತ್ಯೆ

ನೇಣು ಬಿಗಿದು ವಿದ್ಯಾರ್ಥಿನಿ ಆತ್ಮಹತ್ಯೆ

ಸೆಪ್ಟೆಂಬರ್. 24 ರಂದು ಪುತ್ತೂರಿನ ಕೊಂಬೆಟ್ಟು ಸರಕಾರಿ ಪದವಿ ಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ಜೀವಿತಾ ಆತ್ಮಹತ್ಯೆಗೆ ಶರಣಾಗಿದ್ದಳು . ಕೊಡಗು ಜಿಲ್ಲೆಯ ಸೋಮವಾರಪೇಟೆಯ ನಿವಾಸಿಯಾಗಿರುವ ಜೀವಿತಾ ಪುತ್ತೂರಿನ ನರಿಮೊಗರುನಲ್ಲಿರುವ ಸರಕಾರಿ ಬಾಲಕಿಯರ ಹಾಸ್ಟೆಲ್ ನಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಳು.

 ಹಾಸ್ಟೆಲ್ ಕೊಠಡಿಯಲ್ಲಿ ಆತ್ಮಹತ್ಯೆ ಪ್ರಕರಣ

ಹಾಸ್ಟೆಲ್ ಕೊಠಡಿಯಲ್ಲಿ ಆತ್ಮಹತ್ಯೆ ಪ್ರಕರಣ

ಸೆಪ್ಟೆಂಬರ್. 12 ರಂದು ಮೂಡಬಿದ್ರೆಯ ಪ್ರತಿಷ್ಠಿತ ಆಳ್ವಾಸ್ ಕಾಲೇಜು ವಿದ್ಯಾರ್ಥಿನಿ ಕಾಲೇಜಿನ ಹಾಸ್ಟೆಲ್ ಕೊಠಡಿಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಳು. ಬೆಂಗಳೂರಿನ ಆನೇಕಲ್ ನಿವಾಸಿ ವಿನುತಾ ಕಾಲೇಜಿನ ಹಾಸ್ಟೆಲ್ ನ ಕೊಠಡಿಯಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಳು.

ಆಗಸ್ಟ್.04 ರಂದು ಪುತ್ತೂರಿನ ಬೆಟ್ಟಂಪಾಡಿಯಲ್ಲಿ ಎಸ್ ಎಸ್ಎಲ್ ಸಿ ವಿದ್ಯಾರ್ಥಿ ರಾಮಣ್ಣಕುಮಾರ್ (16) ಆತ್ಮಹತ್ಯೆಗೆ ಮಾಡಿಕೊಂಡಿದ್ದ.

 ತನಿಖೆ ನಡೆಯಬೇಕಿದೆ

ತನಿಖೆ ನಡೆಯಬೇಕಿದೆ

ವಿದ್ಯಾರ್ಥಿಗಳ ಈ ಸರಣಿ ಆತ್ಮಹತ್ಯಾ ಪ್ರಕರಣ ಜನರನ್ನು ಚಿಂತೆಗೀಡುಮಾಡಿದೆ. ಅದರಲ್ಲೂ ಮಂಗಳೂರು ಸೇರಿದಂತೆ ಜಿಲ್ಲೆಯ ಇತರ ಪ್ರತಿಷ್ಠಿತ ವಿದ್ಯಾಸಂಸ್ಥೆಗಳಿಗೆ ವಿದ್ಯಾರ್ಜನೆಗೆ ಮಕ್ಕಳನ್ನು ಕಳುಹಿಸಿಕೊಟ್ಟ ಇತರ ಜಿಲ್ಲೆಯ ಮಕ್ಕಳ ಪೋಷಕರು ವಿದ್ಯಾರ್ಥಿಗಳ ಈ ಸರಣಿ ಆತ್ಮಹತ್ಯಾ ಪ್ರಕರಣಗಳಿಂದ ಆತಂಕಕ್ಕೀಡಾಗಿದ್ದಾರೆ.

ಜಿಲ್ಲಾಡಳಿತ ಕೂಡ ವಿದ್ಯಾರ್ಥಿಗಳ ಆತ್ಮಹತ್ಯೆ ಪ್ರಕರಣಗಳಿಂದ ಕಂಗೆಟ್ಟಿದೆ. ಈ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಆತ್ಮಹತ್ಯೆ ಪ್ರಕರಣಗಳ ಸಮಗ್ರ ತನಿಖೆಗೆ ಒತ್ತಾಯ ಕೇಳಿಬರುತ್ತಿದೆ. ವಿದ್ಯಾರ್ಥಿಗಳು ಕ್ಷುಲ್ಲಕ ವಿಚಾರಗಳಿಗೆ ಆತ್ಮಹತ್ಯೆ ಮಾಡಿಕೊಳ್ಳುತ್ತಿರುವ ಹಿಂದಿನ ಕಾರಣಗಳ ಬಗ್ಗೆ ತನಿಖೆ ನಡೆಯಬೇಕಿದೆ.

English summary
It is observed that in recent days highest number of students committing suicide in Mangaluru. Since on week 6 students committed suicide in Dakshina kannada district.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X