ಮಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

'ನೀತಿ ಸಂಹಿತೆಯ ಹೆಸರಿನಲ್ಲಿ ಅಧಿಕಾರಿಗಳು ದರ್ಬಾರ್ ನಡೆಸುತ್ತಿದ್ದಾರೆ'

|
Google Oneindia Kannada News

ಮಂಗಳೂರು, ಮಾರ್ಚ್ 13:ಚುನಾವಣಾ ನೀತಿ ಸಂಹಿತೆಯ ಹೆಸರಿನಲ್ಲಿ ಅಧಿಕಾರಿಗಳು ದರ್ಬಾರ್ ನಡೆಸಲು ಅವಕಾಶ ನೀಡುವುದಿಲ್ಲ ಎಂದು ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜಾ ಕಿಡಿಕಾರಿದ್ದಾರೆ.

 ದಕ್ಷಿಣ ಕನ್ನಡದಲ್ಲಿ ಸಮರ್ಥ ಅಭ್ಯರ್ಥಿಗಳ ಆಯ್ಕೆಗೆ ಕಾಂಗ್ರೆಸ್ ನಲ್ಲಿ ಕಸರತ್ತು ದಕ್ಷಿಣ ಕನ್ನಡದಲ್ಲಿ ಸಮರ್ಥ ಅಭ್ಯರ್ಥಿಗಳ ಆಯ್ಕೆಗೆ ಕಾಂಗ್ರೆಸ್ ನಲ್ಲಿ ಕಸರತ್ತು

ಮಂಗಳೂರಿನಲ್ಲಿ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನೀತಿ ಸಂಹಿತೆಯ ಹೆಸರಿನಲ್ಲಿ ಕೆಲವು ಅಧಿಕಾರಿಗಳು ಜನ ಸಾಮಾನ್ಯರ ಕಾರ್ಯಕ್ರಮಗಳಿಗೆ ಅಡ್ಡಿಪಡಿಸುತಿದ್ದಾರೆ. ಅಧಿಕಾರಿಗಳು ತಮ್ಮ ಮಿತಿಯೊಳಗೆ ಕಾರ್ಯನಿರ್ವಹಿಸಬೇಕು ಎಂದು ಆಕ್ರೋಶ ವ್ಯಕ್ತಪಡಿಸಿದರು.

ಸಂಸದ ನಳಿನ್ ಕುಮಾರ್ ಕಟೀಲ್ ಟ್ವೀಟ್ ಗೆ ಐವನ್ ಡಿಸೋಜಾ ಕಿಡಿಸಂಸದ ನಳಿನ್ ಕುಮಾರ್ ಕಟೀಲ್ ಟ್ವೀಟ್ ಗೆ ಐವನ್ ಡಿಸೋಜಾ ಕಿಡಿ

ಜಿಲ್ಲೆಯಲ್ಲಿ ನಡೆಯುವ ಸಾಮಾಜಿಕ, ಧಾರ್ಮಿಕ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಅನುಮತಿ ನೀಡಲು ಅಲೆದಾಡಿಸುವುದು, ರಾಜಕಾರಣಿಗಳು, ಜನಪ್ರತಿನಿಧಿಗಳನ್ನು ವೇದಿಕೆಗೆ ಕರೆಯಬಾರದು ಎಂದು ಒತ್ತಾಯಿಸುವುದು, ಆಮಂತ್ರಣ ಪತ್ರಿಕೆಯಲ್ಲಿ ಹೆಸರು ಹಾಕಬಾರದು ಎಂದು ಸೂಚಿಸುವುದು, ಮದುವೆ ಆಮಂತ್ರಣ ಪತ್ರಿಕೆ ಮುದ್ರಿಸಲು ಅಡ್ಡಿಪಡಿಸುತ್ತಿರುವ ಹಲವಾರು ದೂರುಗಳು ಬಂದಿವೆ ಎಂದು ಡಿಸೋಜಾ ಆರೋಪಿಸಿದರು.

Election officers misusing code of conduct:Ivan Dsouza

ಚುನಾವಣೆ ಎಂಬುದು ತುರ್ತುಪರಿಸ್ಥಿತಿ ಎಂಬಂತೆ ಅಧಿಕಾರಿಗಳು ಬಿಂಬಿಸುವುದು ಸರಿಯಲ್ಲ. ಚುನಾವಣೆ ಎಂಬುದು ಸಾರ್ವತ್ರಿಕ ಹಬ್ಬವಾಗಿದೆ. ಜನರು ತಮ್ಮ ಪಾತ್ರ ಏನು ಎಂಬುದನ್ನು ಪರಸ್ಪರ ಸಂವಹನ ನಡೆಸುವ ಮುಕ್ತ ಅವಕಾಶ ಇರಬೇಕು. ನೀತಿ ಸಂಹಿತೆಯ ಹೆಸರಿನಲ್ಲಿ ಜನರ ಶೋಷಣೆ ಮಾಡುವುದನ್ನು ಸಹಿಸಲು ಸಾಧ್ಯವಿಲ್ಲ ಎಂದು ಡಿಸೋಜಾ ತಿಳಿಸಿದರು.

English summary
MLC Ivan D'souza said in Mangaluru press meet election officers of Dakshina kannada has miss using election code of conduct.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X