ತುಳುನಾಡಿನ ಬಾವುಟದ ಬಣ್ಣವನ್ನು ಚಪ್ಪಲಿಗೆ ಎಡಿಟ್ ಮಾಡಿದ್ದ ವಿದ್ಯಾರ್ಥಿ ಬಂಧನ
ಮಂಗಳೂರು, ಜೂನ್ 19: ತುಳುನಾಡಿನ ಬಾವುಟದ ಬಣ್ಣವನ್ನು ಚಪ್ಪಲಿಗೆ ಎಡಿಟ್ ಮಾಡಿದ್ದ ಬೆಂಗಳೂರಿನ ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿಯನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ.
ಬೆಂಗಳೂರಿನ ಶ್ರೀರಾಂಪುರ ನಿವಾಸಿ ಸೂರ್ಯ ಎನ್.ಕೆ. ಬಂಧಿತ ಆರೋಪಿಯಾಗಿದ್ದು, ಕಳೆದ ಕೆಲ ದಿನಗಳ ಹಿಂದೆ ಟ್ರೋಲ್ ಪೇಜ್ ಒಂದರಲ್ಲಿ ಬಂಧಿತ ಆರೋಪಿ ತುಳುನಾಡಿನ ಬಾವುಟವಾದ ಸೂರ್ಯ- ಚಂದ್ರ ಮತ್ತು ಕೇಪುಲ ಕೆಂಪುಬಣ್ಣವನ್ನು ಚಪ್ಪಲಿಗೆ ಎಡಿಟ್ ಮಾಡಿ, ಅಶ್ಲೀಲ ಬರಹದ ಕಮೆಂಟ್ನ್ನು ಪೋಸ್ಟ್ ಮಾಡಿದ್ದ.
ಈ ಕಮೆಂಟ್ಗೆ ತುಳುವರಿಂದ ಭಾರೀ ವಿರೋಧ ವ್ಯಕ್ತವಾಗಿತ್ತು. ತುಳುನಾಡಿನ ಜನರ ಧಾರ್ಮಿಕ ಭಾವನೆಗಳಿಗೆ ಧಕ್ಕೆಯಾಗಿರುವ ಬಗ್ಗೆ ಸಾಕಷ್ಟು ಜನ ಆಕ್ರೋಶ ವ್ಯಕ್ತಪಡಿಸಿದ್ದರು.

ಈ ಬಗ್ಗೆ ಮಂಗಳೂರಿನ ಕಾರ್ಪೋರೇಟರ್ ಶಶಿಧರ್ ಹೆಗ್ಡೆ, ಮಂಗಳೂರು ನಗರ ಪೊಲೀಸ್ ಕಮೀಷನರ್ ಎನ್.ಶಶಿಕುಮಾರ್ರನ್ನು ಭೇಟಿಯಾಗಿ ಆರೋಪಿಯ ವಿರುದ್ಧ ಕ್ರಮಕ್ಕೆ ದೂರು ನೀಡಿದ್ದರು.

ಈ ಹಿನ್ನಲೆಯಲ್ಲಿ ಕಾರ್ಯಾಚರಣೆ ಮಾಡಿದ ಮಂಗಳೂರು ಬರ್ಕೆ ಠಾಣಾ ಪೊಲೀಸರ ತಂಡ ಆರೋಪಿಯನ್ನು ಶ್ರೀರಾಂಪುರದ ಆತನ ಮನೆಯಿಂದ ವಶಪಡಿಸಿಕೊಂಡು ಮಂಗಳೂರಿಗೆ ಕರೆದುಕೊಂಡು ಬಂದಿದ್ದಾರೆ. ಆನಂತರ ನ್ಯಾಯಾಲಯ ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ. ಆರೋಪಿಯ ವಿರುದ್ಧ 40/ 2021, ಕಲಂ 153(A) 505(2) ಐಪಿಸಿ ಸೆಕ್ಷನ್ ಅಡಿಯಲ್ಲಿ ಪ್ರಕರಣ ದಾಖಲಾಗಿದೆ.
Recommended Video
-
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
March 29 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
New Railway Line: ಗದಗ-ಹೊಟಗಿ ರೈಲು ಡಬ್ಲಿಂಗ್ ಪೂರ್ಣ, ಮಹಾರಾಷ್ಟ್ರವರೆಗೂ ಸಂಚಾರ ಸುಧಾರಣೆ -
"ಜೈಲಲ್ಲಿ ನಮಗೆ ಮೊಬೈಲ್ ಕೊಟ್ಟಿದ್ದು ಡಿಜಿಪಿ ಅಲೋಕ್ ಕುಮಾರ್" ಎಂದ ಕೈದಿಗಳು, ವಿಡಿಯೋ ವೈರಲ್ -
Bengaluru: 19 ಸಾವಿರಕ್ಕೆ 2BHK ಮನೆ ಸಿಕ್ಕಿದ್ದೇಗೆ? 4 ವರ್ಷದಲ್ಲಿ 3 ಮನೆ ಬದಲಾಯಿಸಿದ ದಂಪತಿ ಹೇಳಿದ ಬಾಡಿಗೆ ಸೀಕ್ರೆಟ್ Viral -
ಆರ್ಸಿಬಿ ಗೆಲ್ಲಿಸಿದ ಕೊಹ್ಲಿ ಕಂಡು ಗ್ಯಾಲರಿಯಲ್ಲೇ ಕುಣಿದು ಕುಪ್ಪಳಿಸಿದ ಅನನ್ಯಾ ಬಿರ್ಲಾ: ಭಾರೀ ವೈರಲ್ -
ದುಬೈನ ಬುರ್ಜ್ ಖಲೀಫಾ ಎದುರು ತಾಯಿಯ ಸಂಭ್ರಮ: ಅಮ್ಮನ ಆಸೆ ಈಡೇರಿಸಿದ ಮಗಳ Video Viral -
NWKRTC: ದಾಂಡೇಲಿ-ಬೆಂಗಳೂರು ಮಧ್ಯೆ ಪಲ್ಲಕ್ಕಿ ವೈಭವ: ಬಸ್ಗಳ ಸಂಚಾರಕ್ಕೆ ಗ್ರೀನ್ ಸಿಗ್ನಲ್, ಡಿಟೇಲ್ಸ್












Click it and Unblock the Notifications