ಮಂಗಳೂರು: ಹಾಸ್ಟೆಲ್ ನಲ್ಲಿ ನೇಣಿಗೆ ಶರಣಾದ ಇಂಜಿನಿಯರಿಂಗ್ ವಿದ್ಯಾರ್ಥಿನಿ
ಮಂಗಳೂರು, ಜೂನ್ 01 : ನಗರದ ವಳಚ್ಚಿಲ್ ಶ್ರೀನಿವಾಸ್ ಇಂಜಿನಿಯರಿಂಗ್ ಕಾಲೇಜು ವಿದ್ಯಾರ್ಥಿನಿಯೊಬ್ಬಳು ಗುರುವಾರ ಹಾಸ್ಟೆಲ್ ಕೊಠಡಿಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.
ವಳಚ್ಚಿಲ್ ನ ಶ್ರೀನಿವಾಸ್ ಇನ್ಸ್ ಟ್ಯೂಟ್ ಆಫ್ ಟೆಕ್ನಾಲಜಿ ಕಾಲೇಜಿನಲ್ಲಿ ಬಿಇ ಪ್ರಥಮ ವರ್ಷದಲ್ಲಿ ವ್ಯಾಸಂಗ ಮಾಡುತ್ತಿರುವ ಚಿಕ್ಕಮಗಳೂರು ಮೂಲದ ಚಂದ್ರೇಗೌಡ ಎನ್ನುವರ ಪುತ್ರಿ ಸುಚೇತನ ಎ ಸಿ (18) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ.

ಇಂದು (ಗುರುವಾರ) ಪ್ರಥಮ ಬಿಇ ಪರೀಕ್ಷಾ ಫಲಿತಾಂಶ ಪ್ರಕಟಗೊಂಡಿದ್ದು ಇದರಲ್ಲಿ ಸುಚೇತನ ಫೇಲ್ ಆಗಿದ್ದಾಳೆ ಎನ್ನಲಾಗಿದೆ.
ಇದರಿಂದ ಮನನೊಂದು ಹಾಸ್ಟೆಲ್ ನ ತಮ್ಮ ಕೊಠಡಿಯಲ್ಲಿ ಗುರುವಾರ ಮಧ್ಯಾಹ್ನ ಶಾಲ್ ಸಹಾಯದಿಂದ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಡಿದ್ದಾಳೆ ಎಂದು ಶಂಕಿಸಲಾಗಿದೆ. ಈ ಬಗ್ಗೆ ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಲಾಗಿದೆ.












Click it and Unblock the Notifications