ಕಾಸರಗೋಡು: ರಸ್ತೆ ಅಪಘಾತದಲ್ಲಿ ಎಸ್ಎಫ್ಐ ಸದಸ್ಯ ಸಾವು

ಕಾಸರಗೋಡು, ಫೆಬ್ರವರಿ 18 : ಕಾರು ಹಾಗೂ ಲಾರಿ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಕಾಲೇಜು ವಿದ್ಯಾರ್ಥಿ ಮೃತಟ್ಟಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ಶನಿವಾರ ಕಾಸರಗೋಡು ಹೊರವಲಯದ ನಯಮ್ಮರ ಮೂಲೆಯಲ್ಲಿ ನಡೆದಿದೆ.

ಮೃತಪಟ್ಟವರನ್ನು ಎಸ್ ಎಫ್ ಐ ವಿದ್ಯಾರ್ಥಿ ಸಂಘಟನೆಯ ಜಿಲ್ಲಾ ಕಾರ್ಯಾಕಾರಿ ಸಮಿತಿ ಸದಸ್ಯ ನುಳ್ಳಿಪ್ಪಾಡಿ ಚೆನ್ನಿಕೆರೆಯ ಅಹ್ಮದ್ ಅಫ್ಜಲ್ (23) ಎಂದು ಗುರುತಿಸಲಾಗಿದೆ.

Engineering Student Dies Two Injured in Car-Lorry Collision at Kasargod

ಕಾರಿನಲ್ಲಿದ್ದ ಪೆರಿಯಾಟಡ್ಕ ಪನಯಾಲ್ ನ ವಿನೋದ್ ( 24) ಮತ್ತು ಪುತ್ತಿಗೆ ಮೇಲಂಗರದ ನಾಸಿರುದ್ದೀನ್ (26) ಇವರಿಗೆ ಗಂಭೀರ ಗಾಯಗಳಾಗಿವೆ.

ಇವರು ಕಾಲೇಜಿಗೆ ಮರಳುತ್ತಿದ್ದಾಗ ಮಂಗಳೂರು ಕಡೆಗೆ ತೆರಳುತ್ತಿದ್ದ ಸರಕು ಲಾರಿ ಡಿಕ್ಕಿ ಹೊಡೆದಿದೆ. ಕಾರಿನಲ್ಲಿ ಸಿಲುಕಿದ್ದ ಮೂವರನ್ನು ಸ್ಥಳೀಯರು ಹೊರತೆಗೆದು ಆಸ್ಪತ್ರೆಗೆ ತಲಪಿಸಿದರೂ ಅಪ್ಜಲ್ ಮಾರ್ಗ ಮಧ್ಯದಲ್ಲಿಯೇ ಮೃತಪಟ್ಟಿದ್ದಾರೆ.

ಮೃತದೇಹವನ್ನು ಕಾಸರಗೋಡು ಜನರಲ್ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಿ ಮೃತ ದೇಹವನ್ನು ಕುಟುಂಬಕ್ಕೆ ಹಸ್ತಾಂತರಿಸಲಾಯಿತು. ಈ ಬಗ್ಗೆ ವಿದ್ಯಾನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+