• search
  • Live TV
ಮಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಮಂಗಳೂರು ರಥಸಪ್ತಮಿ ಉತ್ಸವ: ಭಕ್ತಿಭಾವದಿಂದ ಮಿಂದೆದ್ದ ಭಕ್ತಕೋಟಿ

By Balaraj Tantry
|

ಮಂಗಳೂರು, ಜ 24: ರಥಸಪ್ತಮಿ ಶುಭಾವಸರದ ವೇಳೆ ಸಂಜೆ ಗೋಧೂಳಿಯ ಸಮಯದಲ್ಲಿ ನಗರದ ರಥಬೀದಿಯಲ್ಲಿ ಶ್ರೀ ವೆಂಕಟರಮಣ ದೇವಸ್ಥಾನದ ಶ್ರೀವೀರ ವೆಂಕಟೇಶ ದೇವರ ಬ್ರಹ್ಮರಥೋತ್ಸವ 'ಕೊಡಿಯಾಲ್ ತೇರು' ಬುಧವಾರ (ಜ 24) ಸಂಜೆ ಜರುಗಿತು.

ಸಂಜೆ 5.30ರ ವೇಳೆಗೆ ಚಿನ್ನದ ಪಲ್ಲಕ್ಕಿಯೇರಿ ದೇವಳದಿಂದ ರಥದೆಡೆಗೆ ವೀರ ವೆಂಕಟೇಶ ದೇವರ ಆಗಮನದ ಬಳಿಕ ಸಾಂಪ್ರದಾಯಿಕ ರಥ ಪ್ರದಕ್ಷಿಣೆ ನಡೆಯಿತು. ಪಲ್ಲಕ್ಕಿಯನ್ನು ಏಕ ಹಸ್ತದಿಂದ ಏರಿಸಿ ಸಂಭ್ರಮಿಸಲಾಯಿತು.

ಬ್ಯಾಂಡ್ ವಾದ್ಯಗಳ ಅಬ್ಬರ, ಮಂಗಲ ವಾದ್ಯಗಳ ನಿನಾದ , ತಾಳ ಸಂಕೀರ್ತನೆಯ ಹಿನ್ನೆಲೆಯಲ್ಲಿ ಸೇರಿದ ಸಹಸ್ರಾರು ಭಜಕರ ಹರ್ಷೋದ್ಗಾರಗಳ ನಡುವೆ ಸಂಜೆ 6.05 ರ ವೇಳೆಗೆ ಶ್ರೀದೇವರ ರಥಾರೋಹಣ ನಡೆಯಿತು.

ಈ ಸಂದರ್ಭದಲ್ಲಿ ಭಾವಾವೇಶಕ್ಕೆ ಒಳಗಾದ ಭಕ್ತರು ವೀರವೆಂಕಟೇಶಾ ವೇದವ್ಯಾಸಾ ಗೋವಿಂದೋ' ಎಂದು ಜಯಘೋಷಗೈದರು. ರಥಾರೂಢ ವೀರ ವೆಂಕಟೇಶನಿಗೆ ಮಹಾಮಂಗಳಾರತಿ ಬೆಳಗಿ ಪ್ರಾರ್ಥನೆ ಸಲ್ಲಿಸಿದರು.

ಈ ಬಾರಿಯ ಕೊಡಿಯಾಲ್ ತೇರು ಸಂಭ್ರಮಕ್ಕೆ ಕಾಶೀಮಠಾಧೀಶ ಸಂಯಮೀಂದ್ರ ತೀರ್ಥ ಸ್ವಾಮೀಜಿಯವರ ಉಪಸ್ಥಿತಿ ವಿಶೇಷ ರಂಗೇರಿಸಿತು. ರಥಾರೂಡ ಶ್ರೀವೀರ ವೆಂಕಟೇಶ ದೇವರಿಗೆ ನೂತನ ವಾಗಿ ನಿರ್ಮಿಸಲಾದ ಸ್ವರ್ಣ ಪ್ರಭಾವಳಿ ಹಾಗೂ ಸ್ವರ್ಣ ಯಾಲಕ್ಕಿ ಮಾಲೆಯನ್ನು ಶ್ರೀಗಳವರ ದಿವ್ಯ ಹಸ್ತಗಳಿಂದ ದೇವರಿಗೆ ಸಮರ್ಪಿಸಲಾಯಿತು.

ಶ್ರೀ ವೆಂಕಟರಮಣ ದೇವಳವೂ ಶ್ರೀ ಸಂಸ್ಥಾನದ ಅಧೀನದಲ್ಲಿದ್ದು ಗುರುವರ್ಯರ ಅಮೃತ ಹಸ್ತಗಳಿಂದ ಮಹಾಪೂಜೆ, ಮಹಾಪ್ರಸಾದ ಪಡೆದ ಧನ್ಯತೆ ಮಂಗಳೂರು ದೇವಳದ ಭಜಕರದ್ದಾಗಿದೆ. ಬಳಿಕ ಸಹಸ್ರ ಅಬಾಲ ವೃದ್ಧ ಪುರುಷರು ರಥವನ್ನು ಎಳೆಯುವುದರಮೂಲಕ ಸೇವೆ ಸಲ್ಲಿಸಿದರು .

ಸಮಾಜದ ಪರವಾಗಿ ಶ್ರೀ ದೇವಳದ ಆಡಳಿತ ಮೊಕ್ತೇಸರ ಪದ್ಮನಾಭ ಪೈ ಸಹಿತ ಮೊಕ್ತೇಸರರು ಮಹಾಪ್ರಸಾದವನ್ನು ಸ್ವೀಕರಿಸಿದರು. ದಾನಿ ಮುಂಡ್ಕೂರು ರಾಮದಾಸ ಕಾಮತ್ ಸಹಿತ ಗಣ್ಯರಿಗೆ ಈ ಸಂದರ್ಭದಲ್ಲಿ ಪ್ರಸಾದ ನೀಡಲಾಯಿತು.

ಸಂಸದ ನಳಿನ್ ಕುಮಾರ್ ಕಟೀಲ್, ರಾಜ್ಯ ವಿಧಾನಸಭಾ ಮಾಜಿ ಉಪಸಭಾಪತಿ ಎನ್.ಯೋಗೀಶ್ ಭಟ್ ಮತ್ತಿತರ ಗಣ್ಯರು ಈ ಸಂಧರ್ಭದಲ್ಲಿ ಹಾಜರಿದ್ದರು. ಮಹೋತ್ಸವದ ಅಂಗವಾಗಿ ಶ್ರೀದೇವರಿಗೆ ದೇವಳದಲ್ಲಿ ವಿಶೇಷ ಗಂಗಾಭಿಷೇಕ, ಪುಳಕಾಭಿಷೇಕ ಸಹಿತ ಸಹಸ್ರಧಾರಾ ಸೇವೆ ಸಹಿತ ಧಾರ್ಮಿಕ ವಿದಿವಿಧಾನಗಳು ನಡೆದವು. ಸಂಜೆ ಮಹಾಯಜ್ಞ ಮಂಟಪದಲ್ಲಿ ಪೂರ್ಣಾಹುತಿ ನಡೆಯಿತು.

ಸಂಜೆ ರಥದಲ್ಲಿ ಸಮಾಜ ಬಾಂಧವರು ಮಹಾಪ್ರಸಾದ ಸ್ವೀಕರಿಸಿದರು. ಇದಕ್ಕೂ ಮೊದಲು ರಥದ ಚಕ್ರಕ್ಕೆ ಕಾಯಿಗಳನ್ನು ಒಡೆಯುವ, ಸೇರಿದವರು ರಥವನ್ನು ಕರ ಸೇವೆಯ ಮೂಲಕ ಒಂದಿಷ್ಟು ಮುಂದಿಡುವ ಕ್ರಿಯೆಗಳು ನಡೆದವು.

ದೇಶವಿದೇಶಗಳಿಂದ ರಥೋತ್ಸವ ಸಂಭ್ರಮಕ್ಕೆಂದೇ ಆಗಮಿಸಿದ್ದ ಜನತೆ ಕೊಡಿಯಾಲ್ ತೇರಿನ ವೈಭವವನ್ನು ಕಣ್ತುಂಬಿಕೊಂಡರು. ಇದೇ ವೇಳೆ ಮಹಾ ಸಮಾರಾಧನೆಯಲ್ಲಿ 50 ಸಹಸ್ರಕ್ಕೂ ಅಧಿಕ ಭಕ್ತರು ಅನ್ನಪ್ರಸಾದ ಸ್ವೀಕರಿಸಿದರು. ರಥಬೀದಿಯಲ್ಲಿ ನಡೆದ ಮೆರವಣಿಗೆಯ ವೇಳೆ ಕಿಕ್ಕಿರಿದು ಭಕ್ತರು ಪಾಲ್ಗೊಂಡಿದ್ದರು. (ಚಿತ್ರ : ಮಂಜು ನೀರೇಶ್ವಾಲ್ಯ)

ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

English summary
On eve of Ratha Sapthami (Jan 24) grand rathotsava concluded in Venkataramana temple at Car Street, Mangaluru.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
We use cookies to ensure that we give you the best experience on our website. This includes cookies from third party social media websites and ad networks. Such third party cookies may track your use on Oneindia sites for better rendering. Our partners use cookies to ensure we show you advertising that is relevant to you. If you continue without changing your settings, we'll assume that you are happy to receive all cookies on Oneindia website. However, you can change your cookie settings at any time. Learn more