Get Updates
Get notified of breaking news, exclusive insights, and must-see stories!

ಸ್ಟ್ರಾಂಗ್ ರೂಂನಲ್ಲಿ ಭದ್ರವಾದ ದಕ್ಷಿಣಕನ್ನಡ ಲೋಕಸಭಾ ಕ್ಷೇತ್ರದ ಅಭ್ಯರ್ಥಿಗಳ ಹಣೆಬರಹ

ಮಂಗಳೂರು, ಏಪ್ರಿಲ್ 20 :ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಮತದಾನ ಪ್ರಕ್ರಿಯೆ ಮುಗಿದಿದೆ.ಕಳೆದ ಒಂದು ತಿಂಗಳಿನಿಂದ ಕರಾವಳಿಯಲ್ಲಿ ತಾರಕಕ್ಕೇರಿದ್ದ ಚುನಾವಣಾ ಜ್ವರ ಈಗ ತಣ್ಣಗಾಗಿದೆ. ಈಗ ಎಲ್ಲರ ಚಿತ್ತ ಮತ ಎಣಿಕೆ ಕೇಂದ್ರ ದತ್ತ ಕೇಂದ್ರೀಕರಿಸಿದೆ.

ಲೋಕಸಭಾ ಚುನಾವಣೆ 2019 : ವಿಶೇಷ ಪುಟ | ಗ್ಯಾಲರಿ

ಕ್ಷೇತ್ರದಲ್ಲಿ ಶೇ 77.90 ಮತದಾನ ದಾಖಲಾಗಿದೆ. ಇನ್ನು ಏನಿದ್ದರೂ ಸೋಲು ಗೆಲುವಿನ ಲೆಕ್ಕಾಚಾರ ಕ್ಷೇತ್ರದಲ್ಲಿ ಆರಂಭವಾಗಿದೆ. ಮೇ 23 ರಂದು ಎಲ್ಲಾ ಕುತೂಹಲಗಳಿಗೂ ಉತ್ತರ ದೊರಕಲಿದೆ. ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ 1861 ಮತಗಟ್ಟೆಗಳ ಮತಯಂತ್ರಗಳು ಮಂಗಳೂರು ತಲುಪಿದ್ದು ನಗರ ಹೊರವಲಯದ ಸುರತ್ಕಲ್‍ನ ಎನ್ ಐ ಟಿ ಕೆ ಇಂಜಿನಿಯರಿಂಗ್ ಕಾಲೇಜಿನ ಕಟ್ಟಡದಲ್ಲಿ ಬಿಗಿ ಭದ್ರತೆಯಲ್ಲಿ ಇರಿಸಲಾಗಿದೆ.

EVM shifted to strong rooms in NITK college

ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ಹಾಗೂ ಚುನಾವಣಾ ವೀಕ್ಷಕರಾದ ರಾಜೀವ್ ರತನ್ ಅವರ ಸಮ್ಮುಖದಲ್ಲಿ ಎಲ್ಲಾ ಮತಯಂತ್ರಗಳನ್ನು ಭದ್ರತಾ ಕೊಠಡಿಯಲ್ಲಿರಿಸಿ ಮುದ್ರೆ ಹಾಕಲಾಗಿದೆ.

EVM shifted to strong rooms in NITK college

ದಕ್ಷಿಣ ಕನ್ನಡ ಜಿಲ್ಲೆಯ 8 ವಿಧಾನಸಭಾ ಕ್ಷೇತ್ರಗಳ ಮತಯಂತ್ರಗಳನ್ನು ಅತ್ಯಂತ ಭದ್ರತೆಯಲ್ಲಿ ತಂದಿರಿಸಲಾಗಿದ್ದು, ಎನ್ ಐ ಟಿ ಕೆ ಇಂಜಿನಿಯರಿಂಗ್ ಕಾಲೇಜಿನ ಕಟ್ಟಡಕ್ಕೆ ವಿಶೇಷ ಭದ್ರತಾ ಪಡೆ, ಪೊಲೀಸ್ ತಂಡ ಹಾಗೂ ಸಿಸಿಟಿವಿ ಕಣ್ಗಾವಲು ಹಾಕಲಾಗಿದೆ.ಮತಯಂತ್ರಗಳ ಪರಿಶೀಲನೆಯನ್ನು ಎನ್‍ಐಟಿಕೆಯಲ್ಲಿಂದು ಜಿಲ್ಲಾ ಚುನಾವಣಾಧಿಕಾರಿಗಳ ಅಧ್ಯಕ್ಷತೆಯಲ್ಲಿ ನಡೆಸಲಾಗಿದ್ದು ಅಪರ ಜಿಲ್ಲಾಧಿಕಾರಿ, ಸಹಾಯಕ ಚುನಾವಣಾಧಿಕಾರಿಗಳು ತಹಸೀಲ್ದಾರರು, ರಾಜಕೀಯ ಪಕ್ಷದ ಪ್ರತಿನಿಧಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+