• search
  • Live TV
ಮಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ರಾಜ್ಯದಲ್ಲಿ ಬಿಜೆಪಿ ಸರ್ಕಾರ ಬಂದಾಗಲೆಲ್ಲ ಗೋಲಿಬಾರ್ ಎಂದ ಸಿದ್ದರಾಮಯ್ಯ

|

ಮಂಗಳೂರು, ಡಿಸೆಂಬರ್.23: ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದಾಗಲೆಲ್ಲ ಗೋಲಿಬಾರ್ ನಡೆಸಲಾಗುತ್ತದೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ. ಬಿಜೆಪಿ ನೇತೃತ್ವದ ಸರ್ಕಾರ ಶಾಂತಿ ಕದಡುವ ಕೆಲಸ ಮಡುತ್ತಿದೆ ಎಂದು ಆರೋಪಿಸಿದ್ದಾರೆ.

ಮಂಗಳೂರಿನಲ್ಲಿ ನಡೆದ ಗೋಲಿಬಾರ್ ನಲ್ಲಿ ಮೃತಪಟ್ಟ ಜಲೀಲ್ ಹಾಗೂ ನೌಸಿನ್ ನಿವಾಸಕ್ಕೆ ಭೇಟಿ ನೀಡಿದ ಸಿದ್ದರಾಮಯ್ಯ, ಮೃತ ಸಂಬಂಧಿಕರಿಗೆ ಸಾಂತ್ವನ ಹೇಳಿದರು. ಕಾಂಗ್ರೆಸ್ ಪಕ್ಷದ ವತಿಯಿಂದ ಮೃತರ ಕುಟುಂಬಕ್ಕೆ ಪರಿಹಾರದ ಚೆಕ್ ವಿತರಿಸಲಾಯಿತು.

ಧರ್ಮ ವಿರೋಧಿ ಕಾಯ್ದೆ ಜಾರಿಗೊಳಿಸಲು ಬಿಡುವುದಿಲ್ಲ ಎಂದ ಮೌಲಾನಾ

ಇನ್ನು, ಮಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಬಿಜೆಪಿ ವಿರುದ್ಧ ಕಿಡಿ ಕಾರಿದರು. ಕಳೆದ ಮೂರು ದಿನಗಳ ಹಿಂದೆಯೇ ಮಂಗಳೂರಿಗೆ ನಾನು ಭೇಟಿ ನೀಡಬೇಕಿತ್ತು. ಆದರೆ, ರಾಜ್ಯ ಸರ್ಕಾರ ಅದಕ್ಕೆ ತಡೆ ನೀಡಿತು. ಈ ಸಂಬಂಧ ನನಗೆ ನೋಟಿಸ್ ನೀಡಲಾಗಿತ್ತು ಎಂದು ವಾಗ್ದಾಳಿ ನಡೆಸಿದರು.

ಅನಗತ್ಯವಾಗಿ ನಿಷೇಧಾಜ್ಞೆ ಜಾರಿಗೊಳಿಸಿದ್ದು ಯಾಕೆ?

ಅನಗತ್ಯವಾಗಿ ನಿಷೇಧಾಜ್ಞೆ ಜಾರಿಗೊಳಿಸಿದ್ದು ಯಾಕೆ?

ಪೌರತ್ವ ತಿದ್ದುಪಡಿ ಕಾಯ್ದೆ ಹಾಗೂ ರಾಷ್ಟ್ರೀಯ ನಾಗರಿಕ ನೋಂದಣಿ ವಿರುದ್ಧ ರಾಜ್ಯದಲ್ಲಿ ಶಾಂತಿಯುತ ಪ್ರತಿಭಟನೆಗೆ ಮುಂದಾಗಿದ್ದರು. ರಾಜ್ಯ ಸರ್ಕಾರ ಅನಗತ್ಯವಾಗಿ ನಿಷೇಧಾಜ್ಞೆ ಜಾರಿಗೊಳಿಸಲಾಯಿತು. ರಾಜ್ಯಾದ್ಯಂತ ಪ್ರತಿಭಟನೆ ನಡೆಯುತ್ತಿದ್ದು, ಮಂಗಳೂರಿನಲ್ಲಿ ಗೋಲಿಬಾರ್ ನಡೆಸಲಾಗಿದೆ. ಅದರ ಅಗತ್ಯವಿತ್ತೆ ಎಂದು ಸಿದ್ದರಾಮಯ್ಯ ಪ್ರಶ್ನೆ ಮಾಡಿದ್ದಾರೆ.

"ಬಿಜೆಪಿ ಸರ್ಕಾರ ಅಸ್ವಿತ್ವಕ್ಕೆ ಬಂದರೆ ಗೋಲಿಬಾರ್ ಆಗುತ್ತೆ"

ಮಂಗಳೂರಿನ ನಡೆದ ಗೋಲಿಬಾರ್ ಪ್ರಕರಣಕ್ಕೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ನಮ್ಮ ಸರ್ಕಾರದ ಅವಧಿಯಲ್ಲಿ ಇಂಥ ಒಂದೇ ಒಂದು ಘಟನೆಯೂ ನಡೆದಿರಲಿಲ್ಲ. ಆದರೆ, ಬಿಜೆಪಿ ಸರ್ಕಾರ ಅಸ್ತಿತ್ವಕ್ಕೆ ಬರುವುದೇ ತಡ, ಮಂಗಳೂರಿನಲ್ಲಿ ಗೋಲಿಬಾರ್ ನಡೆಸಲಾಗಿದೆ ಎಂದು ಕಿಡಿ ಕಾರಿದರು.

ಬೆಂಗಳೂರಿನಲ್ಲೂ ಪೌರತ್ವ ತಿದ್ದುಪಡಿ ವಿರುದ್ಧ ಧಿಕ್ಕಾರದ ಕೂಗು

ಶೋಭಾ ಕರಂದ್ಲಾಜೆ ಏನು ಮಂಗಳೂರು ಪ್ರತಿನಿಧಿಯೇ?

ಶೋಭಾ ಕರಂದ್ಲಾಜೆ ಏನು ಮಂಗಳೂರು ಪ್ರತಿನಿಧಿಯೇ?

ಡಿಸೆಂಬರ್.20ರಂದು ನಾನು ಮಂಗಳೂರಿಗೆ ಭೇಟಿ ನೀಡದಂತೆ ನೋಟಿಸ್ ನೀಡಿದರು. ಆದರೆ, ಸಿಎಂ, ಡಿಸಿಎಂ, ಗೃಹ ಸಚಿವರೆಲ್ಲ ಮಂಗಳೂರಿಗೆ ಭೇಟಿ ನೀಡಿದರು. ಅಷ್ಟಲ್ಲದೇ ಸಿಎಂ ತಮ್ಮ ಜೊತೆಯಲ್ಲೇ ಸಂಸದೆ ಶೋಭಾ ಕರಂದ್ಲಾಜೆ ಅವರನ್ನು ಮಂಗಳೂರಿಗೆ ಕರೆದುಕೊಂಡು ಬಂದಿದ್ದರು. ಶೋಭಾ ಕರಂದ್ಲಾಜೆ ಏನು ಮಂಗಳೂರಿನ ಜನಪ್ರತಿನಿಧಿಯೇ ಎಂದು ಸಿದ್ದರಾಮಯ್ಯ ಪ್ರಶ್ನೆ ಮಾಡಿದ್ದಾರೆ.

"ನ್ಯಾಯಾಂಗ ತನಿಖೆಯಿಂದ ಮಾತ್ರ ನ್ಯಾಯ ಸಿಗಲು ಸಾಧ್ಯ"

ಸಿಐಡಿ ತನಿಖೆಯಿಂದ ಗೋಲಿಬಾರ್ ಪ್ರಕರಣದ ಹಿಂದಿರುವ ನಿಜವಾದ ಅಪರಾಧಿಗಳು ಹೊರಬರುತ್ತಾರೆ ಎಂಬ ನಂಬಿಕೆ ನನಗಿಲ್ಲ. ಮುಖ್ಯಮಂತ್ರಿ ಬಿಎಸ್ ವೈ ಅವರೇ ಪೊಲೀಸರ ತಪ್ಪಿಲ್ಲ ಎಂದು ತನಿಖೆಗೆ ಮೊದಲೇ ಸರ್ಟಿಫಿಕೇಟ್ ಕೊಟ್ಟಿದ್ದಾರೆ, ಮುಖ್ಯಮಂತ್ರಿಗಳೇನು ಘಟನೆಯ ಪ್ರತ್ಯಕ್ಷದರ್ಶಿಯೇ ಎಂದು ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ. ಸಿಐಡಿ ತನಿಖೆಗೆ ಒಪ್ಪಿಸಿ ಪ್ರಕರಣ ಮುಚ್ಚಿಹಾಕಲು ಪ್ರಯತ್ನಿಸಲಾಗುತ್ತಿದೆ. ಅದಕ್ಕೆ ನಾನು ನ್ಯಾಯಾಂಗ ತನಿಖೆಗೆ ಒತ್ತಾಯಿಸಿದ್ದೆ. ಗೋಲಿಬಾರ್‌ನಲ್ಲಿ ಸಾವಿಗೀಡಾದ ಇಬ್ಬರು ಅಮಾಯಕರ ಬಲಿದಾನಕ್ಕೆ ನ್ಯಾಯ ಸಿಗಬೇಕು ಎಂದಾದರೆ ಹೈಕೋರ್ಟ್‌ನ ಹಾಲಿ ನ್ಯಾಯಮೂರ್ತಿಗಳಿಂದ ಪ್ರಕರಣದ ತನಿಖೆ ಆಗಲೇಬೇಕು ಎಂದು ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.

English summary
Citizenship Amendment Act: Ex-CM Siddaramaiah Attacked On State BJP Government For Mangalore Golibar.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X