ಮಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಆಸ್ಕರ್ ನಿಧನ ಸುಳ್ಳು ಸುದ್ದಿ; ಮಂಗಳೂರು ಡಿಸಿಪಿ ಸ್ಪಷ್ಟನೆ

By ಮಂಗಳೂರು ಪ್ರತಿನಿಧಿ
|
Google Oneindia Kannada News

ಮಂಗಳೂರು, ಜುಲೈ 22; ಕಾಂಗ್ರೆಸ್ ಹಿರಿಯ ಮುಖಂಡ ಆಸ್ಕರ್ ಫರ್ನಾಂಡೀಸ್ ನಿಧನ ಎಂಬ ಸುಳ್ಳು ಸುದ್ದಿ ಹರಿದಾಡುತ್ತಿದೆ. ಈ ಬಗ್ಗೆ ಮಂಗಳೂರು ಡಿಸಿಪಿ ಹರಿರಾಂ ಶಂಕರ್ ಸ್ಪಷ್ಟನೆ ನೀಡಿದ್ದಾರೆ.

ಮಂಗಳೂರಿನ ಯೆನಪೋಯ ಆಸ್ಪತ್ರೆಯಲ್ಲಿ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿರುವ ಆಸ್ಕರ್ ಫರ್ನಾಂಡೀಸ್ ನಿಧನ ಎಂಬ ಸುಳ್ಳು ಸುದ್ದಿ ಸಾಮಾಜಿಕ ಜಾಲತಾಣದಲ್ಲಿ ಗುರುವಾರ ರಾತ್ರಿ ಹರಿದಾಡುತ್ತಿದೆ.

ಆಸ್ಕರ್ ಫರ್ನಾಂಡೀಸ್ ಗಂಭೀರ ಹಿನ್ನಲೆ; ಕಾಂಗ್ರೆಸ್ ಮಹತ್ವದ ಸಭೆ ರದ್ದುಆಸ್ಕರ್ ಫರ್ನಾಂಡೀಸ್ ಗಂಭೀರ ಹಿನ್ನಲೆ; ಕಾಂಗ್ರೆಸ್ ಮಹತ್ವದ ಸಭೆ ರದ್ದು

ಈ ಬಗ್ಗೆ ಡಿಸಿಪಿ ಹರಿರಾಂ ಶಂಕರ್ ಸ್ಪಷ್ಟನೆ ನೀಡಿದ್ದಾರೆ. "ಆಸ್ಕರ್ ಫರ್ನಾಂಡೀಸ್ ಆರೋಗ್ಯದ ಬಗ್ಗೆ ಸುಳ್ಳು ಸಂದೇಶ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಆಸ್ಕರ್ ಫರ್ನಾಂಡೀಸ್ ತೀವ್ರ ನಿಗಾ ಘಟಕದಲ್ಲಿ‌ ಚಿಕಿತ್ಸೆ ಪಡೆಯುತ್ತಿದ್ದಾರೆ. ಸುಳ್ಳು ಸುದ್ದಿಗೆ ಕಿವಿಗೊಡಬಾರದು" ಎಂದು ಮನವಿ ಮಾಡಿದ್ದಾರೆ.

ಆಸ್ಕರ್ ಫರ್ನಾಂಡೀಸ್ ಆರೋಗ್ಯ ವಿಚಾರಿಸಿದ ಜನಾರ್ದನ ಪೂಜಾರಿ ಆಸ್ಕರ್ ಫರ್ನಾಂಡೀಸ್ ಆರೋಗ್ಯ ವಿಚಾರಿಸಿದ ಜನಾರ್ದನ ಪೂಜಾರಿ

Fake News On Oscar Fernandes Health Police Clarification

ಗುರುವಾರ ಸಂಜೆ ಮಂಗಳೂರಿಗೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್ ಆಗಮಿಸಿದ್ದರು. ಆಸ್ಕರ್ ಫರ್ನಾಂಡೀಸ್ ಆರೋಗ್ಯ ವಿಚಾರಿಸಿದ್ದರು. ಆಸ್ಕರ್ ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ. ಯಾವುದೇ ಉನ್ನತ ಚಿಕಿತ್ಸೆಯ ಅಗತ್ಯವಿಲ್ಲ ಎಂದು ಹೇಳಿದ್ದರು.

ಮಾಜಿ‌ ಸಚಿವ ಆಸ್ಕರ್ ಫರ್ನಾಂಡೀಸ್ ಆರೋಗ್ಯ ಸ್ಥಿತಿ ಗಂಭೀರ; ಆಸ್ಪತ್ರೆಗೆ ದಾಖಲುಮಾಜಿ‌ ಸಚಿವ ಆಸ್ಕರ್ ಫರ್ನಾಂಡೀಸ್ ಆರೋಗ್ಯ ಸ್ಥಿತಿ ಗಂಭೀರ; ಆಸ್ಪತ್ರೆಗೆ ದಾಖಲು

ಆದರೆ ರಾತ್ರ ಆಸ್ಕರ್ ಫರ್ನಾಂಡೀಸ್ ಆರೋಗ್ಯದ ಬಗ್ಗೆ ಸುಳ್ಳುಸುದ್ದಿ ಹರಿದಾಡಲು ಆರಂಭವಾಗಿದೆ. ಸುಳ್ಳು ಸುದ್ದಿ ಪ್ರಕಟಿಸಿದವರ ವಿರುದ್ಧ ಕ್ರಮ ಕೈಗೊಳ್ಳಬೇಕೆಂಬ ಒತ್ತಾಯ ಕೇಳಿ ಬಂದಿದೆ‌.

ಆರೋಗ್ಯ ವಿಚಾರಿಸಿದ ನಾಯಕರು; ಆಸ್ಕರ್ ಫರ್ನಾಂಡೀಸ್ ಆರೋಗ್ಯ ಸ್ಥಿತಿ ಗಂಭೀರವಾಗಿದೆ. ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಮತ್ತು ಸಂಸದ ರಾಹುಲ್ ಗಾಂಧಿ ಆಸ್ಕರ್ ಕುಟುಂಬ ಸದಸ್ಯರಿಗೆ ದೂರವಾಣಿ ಕರೆ ಮಾಡಿ ಆರೋಗ್ಯದ ಬಗ್ಗೆ ಮಾಹಿತಿ ಪಡೆದಿದ್ದಾರೆ ಮತ್ತು ಧೈರ್ಯ ತುಂಬಿದ್ದಾರೆ.

ಕಾಂಗ್ರೆಸ್ ಹಿರಿಯ ನಾಯಕ ಆಸ್ಕರ್ ಫರ್ನಾಂಡೀಸ್ ಭಾನುವಾರ ಬೆಳಗ್ಗೆ ಯೋಗ ಮಾಡುವ ಸಂದರ್ಭ‌ ನಿಯಂತ್ರಣ ತಪ್ಪಿ ಜಾರಿ ಬಿದ್ದಿದ್ದರು. ಅದೇ ದಿನ ಸಂಜೆ ಡಯಾಲಿಸಿಸ್‌ಗೆಂದು ಮಂಗಳೂರಿನ ಯೆನೆಪೊಯ ಆಸ್ಪತ್ರೆಗೆ ತೆರಳಿದ್ದರು.

ಈ ಸಂದರ್ಭ ಪರೀಕ್ಷೆ ನಡೆಸಿದಾಗ ತಲೆಯ ಒಳಭಾಗಕ್ಕೆ ಪೆಟ್ಟು ಬಿದ್ದಿದ್ದು, ಮೆದುಳಿನಲ್ಲಿ ರಕ್ತ ಹೆಪ್ಪುಗಟ್ಟಿದೆ ಎಂದು ವೈದ್ಯರು ಮಾಹಿತಿ ನೀಡಿದ್ದರು. ಐಸಿಯುನಲ್ಲಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ.

English summary
Congress leader Oscar Fernandes is under medical care in ICU in Yenepoya hospital, Mangaluru. Don't share fake message on whatsapp said police.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X