ಮಗಳ ಮೇಲೆ ನಿರಂತರ ಅತ್ಯಾಚಾರ, ಆರೋಪಿ ತಂದೆ ಬಂಧನ

ಮಂಗಳೂರು ಜೂನ್ 27: ಅಪ್ರಾಪ್ತ ವಯಸ್ಸಿನ ಮಗಳ ಮೇಲೆ ಕಾಮುಕ ಅಪ್ಪನೊಬ್ಬ ಅತ್ಯಾಚಾರ ನಡೆಸಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲ್ಲೂಕಿನ ಪಿಲಾತಬೆಟ್ಟು ಗ್ರಾಮದಲ್ಲಿ ಬೆಳಕಿಗೆ ಬಂದಿದೆ.

ಮಗಳ ಮೇಲೆ ಅತ್ಯಾಚಾರ ನಡೆಸಿ ಆಕೆಯನ್ನು ಗರ್ಭವತಿಯನ್ನಾಗಿಸಿದ ಆರೋಪಿ ತಂದೆಯನ್ನು ಪೊಲೀಸರು ಬಂಧಿಸಿದ್ದಾರೆ. ಅಪ್ರಾಪ್ತ ಬಾಲಕಿ ಪುಂಜಾಲಕಟ್ಟೆ ಠಾಣೆಯಲ್ಲಿ ಈ ಕುರಿತು ದೂರು ನೀಡಿದ್ದು, ಪೋಸ್ಕೊ ಪ್ರಕರಣದಡಿಯಲ್ಲಿ ದೂರು ದಾಖಲಾಗಿದೆ. ಈ ಪ್ರಕರಣದ ತನಿಖೆ ನಡೆಸಿದ ಪೊಲೀಸರು ಆರೋಪಿಯನ್ನು ನಿನ್ನೆ ರಾತ್ರಿ ಬಂಧಿಸಿದ್ದಾರೆ.

father arrested for raping his own daughter in Bantwal

ಸಂತ್ರಸ್ತ ಬಾಲಕಿಯು ತಂದೆ, ತಾಯಿ, ತಮ್ಮ ಹಾಗೂ ತಂಗಿಯೊಂದಿಗೆ ಪಿಲಾತಬೆಟ್ಟು ಮನೆಯಲ್ಲಿ ವಾಸವಾಗಿದ್ದಾಳೆ. ಕಳೆದ ಫೆಬ್ರವರಿ ತಿಂಗಳಿನಲ್ಲಿ ಮನೆಯಲ್ಲಿ ಎಲ್ಲರೂ ನಿದ್ದೆಗೆ ಜಾರಿದ ಬಳಿಕ ನಡುರಾತ್ರಿ ತಂದೆ ಮಗಳ ಮೇಲೆ ಅತ್ಯಾಚಾರವೆಸಗಿದ್ದ. ನಿದ್ದೆಯಲ್ಲಿದ್ದ ಬಾಲಕಿ ಎಚ್ಚರಗೊಂಡು ಭಯದಿಂದ ಬೊಬ್ಬೆ ಹಾಕಿದಾಗ ಆಕೆಯ ಬಾಯಿಯನ್ನು ಕೈಯಿಂದ ಒತ್ತಿ ಹಿಡಿದು ಬೊಬ್ಬೆ ಹಾಕದಂತೆ ತಡೆದು ಬಲತ್ಕಾರವಾಗಿ ದೈಹಿಕ ಸಂಪರ್ಕ ಸಾಧಿಸಿದ್ದಲ್ಲದೆ ಆನಂತರವೂ ಹಲವು ಬಾರಿ ಮಗಳನ್ನು ಬೆದರಿಸಿ ಆಕೆ ಮೇಲೆ ಬಲವಂತದ ದೈಹಿಕ ಸಂಪರ್ಕ ನಡೆಸಿದ್ದ ಎಂದು ಆರೋಪಿಸಲಾಗಿದೆ. ಈಗ ಬಾಲಕಿ ಗರ್ಭ ಧರಿಸಿದ್ದು, ಆಕೆಯ ದೂರಿನನ್ವಯ ಆರೋಪಿ ತಂದೆಯನ್ನು ಪೊಲೀಸರು ಬಂಧಿಸಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+