Breaking: ಫಾಜಿಲ್ ಹತ್ಯೆ ಪ್ರಕರಣ, 6 ಆರೋಪಿಗಳ ಬಂಧನ

ಮಂಗಳೂರು, ಆಗಸ್ಟ್ 02: ಮಂಗಳೂರಿನ ಸುರತ್ಕಲ್‌ನಲ್ಲಿ ಯುವಕ ಮಹಮ್ಮದ್ ಫಾಜಿಲ್ ಮಂಗಲಪೇಟೆ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರಿನಲ್ಲಿ 6 ಮಂದಿಯನ್ನು ಬಂಧಿಸಲಾಗಿದೆ ಎಂದು ಪೊಲಿಸರು ತಿಳಿಸಿದ್ದಾರೆ.

ಫಾಜಿಲ್ ಹತ್ಯೆ ಹಿಂದೆ ಸುಹಾಸ್ ಶೆಟ್ಟಿ ಗ್ಯಾಂಗ್ ಕೈವಾಡ ಇದೆಯೆಂದು ಸೋಮವಾರ ಹಿರಿಯ ಪೊಲೀಸ್ ಅಧಿಕಾರಿಗಳು ಶಂಕಿಸಿದ್ದರು. ಇದಕ್ಕೆ ಪೂರಕವೆಂಬಂತೆ ಈಗ ಬಂಧಿತ ಆರು ಮಂದಿಯೂ ಸುಹಾಸ್ ಶೆಟ್ಟಿ ಗ್ಯಾಂಗ್‌ಗೆ ಸೇರಿದವರಾಗಿದ್ದಾರೆ.

ಬಂಧಿತ ಆರೋಪಿಗಳ ಮೇಲೆ ಈ ಹಿಂದೆಯೂ ಅಪರಾಧ ಪ್ರಕರಣಗಳು ದಾಖಲಾಗಿವೆ. ಆರೋಪಿಗಳನ್ನು ಸುರತ್ಕಲ್ ಠಾಣೆಗೆ ಕರೆದೊಯ್ಯಲಾಗಿದೆ. ಕೊಲೆಯ ಉದ್ದೇಶವನ್ನು ತಿಳಿದುಕೊಳ್ಳಲು ಆರೋಪಿಗಳ ಹೆಚ್ಚಿನ ವಿಚಾರಣೆ ನಡೆಸಲಾಗುತ್ತಿದೆ.

 Fazil case 6 accused arrested all belongs to Suhas Shetty gang

ಭಾನುವಾರವಷ್ಟೇ ಮಹಮ್ಮದ್ ಫಾಜಿಲ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೊದಲ ಬಂಧನವಾಗಿತ್ತು. ಆರೋಪಿ ಅಜಿತ್ ಕ್ರಾಸ್ತ ಎಂಬುವವನನ್ನು ಪೊಲೀಸರು ಬಂಧಿಸಿದ್ದರು. ಆರೋಪಿಗಳು ಹತ್ಯೆ ಮಾಡಲು ಅಜಿತ್ ಕಾರಿನಲ್ಲಿ ಆಗಮಿಸಿದ್ದರು ಎಂಬುದು ಸದ್ಯದ ಮಾಹಿತಿ.

ಬಂಧಿತ ಅಜಿತ್ ಕ್ರಾಸ್ತ ನೀಡಿದ ಸುಳಿವಿನ ಆಧಾರದಲ್ಲಿ ಆರೋಪಿಗಳನ್ನು ಬಂಧಿಸಲಾಗುತ್ತಿದೆ. ಫಾಜಿಲ್ ಹತ್ಯೆಗೆ ಬಿಳಿ ಹುಂಡೈ ಕಾರನ್ನು ಬಳಸಲಾಗಿತ್ತು. ಫಾಜಿಲ್ ಹತ್ಯೆಗೆ ಬಳಸಿದ್ದ ಕಾರು ಸಂಚಾರ ನಡೆಸುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿತ್ತು. ಆರೋಪಿ ಅಜಿತ್ ಕ್ರಾಸ್ತಾ ಈ ಹುಂಡೈ ಕಾರಿನ ಮಾಲೀಕರು.

ಫಾಜಿಲ್ ಹತ್ಯೆಯ ತನಿಖೆಯನ್ನು ಮಂಗಳೂರು ಪೊಲೀಸ್‌ ಕಮಿಷನರೇಟ್‌ನ ಎಸಿಪಿ ಮಹೇಶ್‌ ಕುಮಾರ್‌ ನಡೆಸುತ್ತಿದ್ದಾರೆ.

 Fazil case 6 accused arrested all belongs to Suhas Shetty gang

"ಹತ್ಯೆಯಾದವರು ಯಾವ ಧರ್ಮದವರಾಗಿರಲಿ ಪೊಲೀಸ್ ತನಿಖೆ ಒಂದೇ ರೀತಿ ನಡೆಯುತ್ತದೆ. ದಕ್ಷಿಣ ಕನ್ನಡ ಜಿಲ್ಲೆಯ ಸರಣಿ ಹತ್ಯೆಯ ತನಿಖೆ ಸಂಪೂರ್ಣವಾದ ಬಳಿಕ ಆರೋಪಿಗಳು ಸಂಘಟನೆಗಳಲ್ಲಿ ಗುರುತಿಸಿಕೊಂಡಿದ್ದಾರೆಯೇ ಎಂಬುದನ್ನು ಚಾರ್ಜ್ ಶೀಟ್‌ನಲ್ಲಿ‌ ತಿಳಿಸಿ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗುತ್ತದೆ" ಎಂದು ಡಿಜಿ ಪ್ರವೀಣ್ ಸೂದ್ ಹೇಳಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+