ಮಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

Breaking: ಫಾಜಿಲ್ ಹತ್ಯೆ; ಕುಟುಂಬಸ್ಥರಿಗೆ ಮೃತದೇಹ ಹಸ್ತಾಂತರ

|
Google Oneindia Kannada News

ಮಂಗಳೂರು, ಜುಲೈ 29: ಸುಳ್ಯದ ಬೆಳ್ಳಾರೆಯಲ್ಲಿ ಪ್ರವೀಣ ನೆಟ್ಟಾರ ಹತ್ಯೆಯ ಬೆನ್ನಲ್ಲೇ ಮತ್ತೊಬ್ಬ ಯುವಕ ಫಾಜಿಲ್​ ಮಂಗಲಪೇಟೆ ಹತ್ಯೆಯಾಗಿದ್ದು ಜಿಲ್ಲೆಯಲ್ಲಿ ಪರಿಸ್ಥಿತಿಯನ್ನು ಉದ್ವಿಗ್ನಗೊಳಿಸಿದೆ.

ಮೃತ ಫಾಜಿಲ್ ಅವರ ಮರಣೋತ್ತರ ಪರೀಕ್ಷೆ ನಡೆಸಿ ಅವರ ಮೃತದೇಹವನ್ನು ಕುಟುಂಬಕ್ಕೆ ಹಸ್ತಾಂತರಿಸಲಾಯಿತು.

ಮಂಗಳೂರು ಹೊರವಲಯದಲ್ಲಿರುವ ಸುರತ್ಕಲ್‌ನಲ್ಲಿ ಗುರುವಾರ ಸಂಜೆ ದುಷ್ಕರ್ಮಿಗಳು ಫಾಜಿಲ್​ ಮಂಗಲಪೇಟೆ (23) ಎನ್ನುವ ಯುವಕನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದ್ದಾರೆ. ಪರಿಸ್ಥಿತಿ ಉದ್ವಿಗ್ನವಾಗಿರುವ ಕಾರಣ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.

Fazil murder case: Post mortem performed and Fazil body was handed over to family

ಪಣಂಬೂರು, ಬಜ್ಪೆ, ಮುಲ್ಕಿ, ಸುರತ್ಕಲ್ ಪೊಲೀಸ್ ಠಾಣೆ ವ್ಯಾಪ್ತಿಯ ಎಲ್ಲ ಶಿಕ್ಷಣ ಸಂಸ್ಥೆಗಳಿಗೆ, ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಕೆ.ವಿ.ರಾಜೇಂದ್ರ ಸುರತ್ಕಲ್ ಆದೇಶ ಹೊರಡಿಸಿದ್ದಾರೆ.

ಮಂಗಳೂರು ನಗರ ವ್ಯಾಪ್ತಿಯಲ್ಲಿ ಸೆಕ್ಷನ್ 144 ಜಾರಿಗೊಳಿಸಲಾಗಿದೆ. ಮದ್ಯ ನಿಷೇಧ ಹೇರಲಾಗಿದೆ. ಸೂಕ್ಷ್ಮ ಪ್ರದೇಶಗಳಲ್ಲಿ ಭಾರಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ.

ಮುನ್ನೆಚ್ಚರಿಕೆಯಾಗಿ ಜಿಲ್ಲೆಯಲ್ಲಿ 19 ಚೆಕ್‌ಪೋಸ್ಟ್‌ಗಳನ್ನು ಆಯುಕ್ತರು ಸ್ಥಾಪಿಸಿದ್ದಾರೆ.

ಫಾಜಿಲ್ ಹತ್ಯೆಯ ಕುರಿತಂತೆ ಸಾಮಾಜಿಕ ಜಾಲತಾಣಗಳಲ್ಲಿ, ವ್ಯಾಟ್ಸಾಪ್‌ಗಳಲ್ಲಿ ಬರುವ ಗಾಳಿ ಸುದ್ದಿಗಳಿಗೆ ಕಿವಿಗೊಡಬೇಡಿ ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತ ಎನ್.ಶಶಿಕುಮಾರ್ ಮನವಿ ಮಾಡಿದ್ದಾರೆ.

ಫಾಜಿಲ್‌ನನ್ನು ಯಾಕೆ ಹತ್ಯೆ ಮಾಡಲಾಗಿದೆ ಎಂದು ಇನ್ನೂ ಗೊತ್ತಾಗಿಲ್ಲ. ಕೊಲೆ ಮಾಡಿದ ಆರೋಪಿಗಳನ್ನು ಶೀಘ್ರದಲ್ಲೇ ಬಂಧಿಸುತ್ತೇವೆ. ಕೊಲೆಯ ಬಗ್ಗೆ ಬರುವ ಗಾಳಿ ಸುದ್ದಿ, ವದಂತಿಗಳು ಸಾರ್ವಜನಿಕರು ಪ್ರತಿಕ್ರಿಯೆ ನೀಡಬಾರದು. ಶಾಂತಿ ಸುವ್ಯವಸ್ಥೆ ಕಾಪಾಡಲು ಪೊಲೀಸರ ಜೊತೆ ಸಹಕಾರ ನೀಡಬೇಕು ಎಂದು ಮನವಿ ಮಾಡಿದ್ದಾರೆ.

ನಿಷೇಧಾಜ್ಞೆ ಹೇರಿರುವ ಸೂಕ್ಷ್ಮ ಪ್ರದೇಶಗಳಲ್ಲಿರುವ ಮಸೀದಿಗಳಲ್ಲಿ ಶುಕ್ರವಾರದ ಪ್ರಾರ್ಥನೆ ಮಾಡಬೇಡಿ ಎಂದು ಮುಸ್ಲಿಂ ಮುಖಂಡರ ಬಳಿ ಪೊಲೀಸರು ಮನವಿ ಮಾಡಿದ್ದಾರೆ. ಮನೆಗಳಲ್ಲಿ ಅಥವಾ ನಿಷೇಧಾಜ್ಞೆ ಇಲ್ಲದ ಸ್ಥಳಗಳಲ್ಲಿ ಇರುವ ಮಸೀದಿಗಳಲ್ಲಿ ಪ್ರಾರ್ಥನೆ ಮಾಡುವಂತೆ ಸೂಚನೆ ನೀಡಿದ್ದಾರೆ.

Recommended Video

ಫಾಜಿಲ್ ಹತ್ಯೆ ನಂತರ ಮಂಗಳೂರಿನಲ್ಲಿ ಹೈ ಅಲರ್ಟ್ !! | OneIndia Kannada

English summary
Fazil murder case: Post mortem performed and Fazil body was handed over to family. Liquor ban has been imposed. know more.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X