• search
  • Live TV
ಮಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಮೂಡುಬಿದಿರೆ : ಆಳ್ವಾಸ್ ಕಾಲೇಜಿನ ಹಾಸ್ಟೆಲ್‌ನಲ್ಲಿ ವಿದ್ಯಾರ್ಥಿಗಳ ಮೇಲೆ ಹಲ್ಲೆ

|

ಮೂಡುಬಿದಿರೆ, ಮಾರ್ಚ್ 18 : ಮೂಡುಬಿದಿರೆಯ ಪ್ರತಿಷ್ಠಿತ ಆಳ್ವಾಸ್ ಕಾಲೇಜು ಮತ್ತೆ ಸುದ್ದಿಯಲ್ಲಿದೆ. ಕಾಲೇಜಿನ ಹಾಸ್ಟೆಲ್ ನಲ್ಲಿದ್ದ ವಿದ್ಯಾರ್ಥಿಗಳಿಗೆ ಕಾಲೇಜು ಸಿಬ್ಬಂದಿಗಳು ಸೇರಿ ಯದ್ವಾತದ್ವಾ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ.

ಶನಿವಾರ ರಾತ್ರಿ ಕಾಲೇಜಿನ ಪುಷ್ಪಗಿರಿ ಹಾಸ್ಟೆಲ್ ನಲ್ಲಿ ಈ ಘಟನೆ ನಡೆದಿದ್ದು, ಕಾಲೇಜಿನ ಸಿಬ್ಬಂದಿಗಳ ಈ ಕೃತ್ಯ ವಿರೋಧಿಸಿ ವಿದ್ಯಾರ್ಥಿಗಳು ಪ್ರತಿಭಟನೆ ಆರಂಭಿಸಿದ್ದಾರೆ. ಕೆಲವು ವಿದ್ಯಾರ್ಥಿಗಳಿಗೆ ಪರೀಕ್ಷೆಗಳು ಮುಗಿದ ಹಿನ್ನೆಲೆಯಲ್ಲಿ ಹಾಸ್ಟೆಲ್ ನಲ್ಲಿ ಸಂಭ್ರಮಾಚರಣೆ ನಡೆಸುತ್ತಿದ್ದರು.

ಕಾವ್ಯ ಪೂಜಾರಿ ಆತ್ಮಹತ್ಯೆ ಬೆನ್ನಿಗೆ ಆಳ್ವಾಸ್ ವಿರುದ್ಧ ಸಮರ

ಆದರೆ, ಈ ಸಂಭ್ರಮಾಚರಣೆಗೆ ಕಾಲೇಜಿನ ವಾರ್ಡನ್ ಮತ್ತು ಸಿಬ್ಬಂದಿ ಆಕ್ಷೇಪ ವ್ಯಕ್ತಪಡಿಸಿದ್ದರು ಎಂದು ತಿಳಿದುಬಂದಿದೆ. ಕೆಲ ವಿದ್ಯಾರ್ಥಿಗಳು ಹೇಳುವ ಪ್ರಕಾರ, ಊಟದ ವಿಚಾರದಲ್ಲಿ ವಿದ್ಯಾರ್ಥಿಗಳು ಸಿಬ್ಬಂದಿಯನ್ನು ಪ್ರಶ್ನೆ ಮಾಡಿದ್ದಾರೆ.

ಇದನ್ನು ನೆಪವಾಗಿ ಇಟ್ಟುಕೊಂಡು ವಾರ್ಡನ್ ಮತ್ತು ಇತರೇ ಕಾಲೇಜು ಸಿಬ್ಬಂದಿ ಸೇರಿ ರಾತ್ರಿ ವಿದ್ಯಾರ್ಥಿಗಳ ಮೇಲೆ ಹಲ್ಲೆ ನಡೆಸಿದ್ದಾರೆ. 20ಕ್ಕಿಂತಲು ಹೆಚ್ಚು ವಿದ್ಯಾರ್ಥಿಗಳ ಮೇಲೆ ಹಲ್ಲೆ ನಡೆಸಲಾಗಿದೆ ಎಂದು ಆರೋಪಿಸಲಾಗಿದೆ.

ಕಾಲೇಜು ಸಿಬ್ಬಂದಿಗಳು ಸೇರಿ ಥಳಿಸುವ ವಿಡಿಯೋವನ್ನು ವಿದ್ಯಾರ್ಥಿಗಳು ಸ್ವತಃ ಮೊಬೈಲಿನಲ್ಲಿ ಚಿತ್ರೀಕರಿಸಿ, ಮಾಧ್ಯಮಗಳಿಗೆ ನೀಡಿದ್ದಾರೆ‌. ಘಟನೆ ಬಗ್ಗೆ ವಿದ್ಯಾರ್ಥಿಗಳ ಪೋಷಕರು ಮೂಡುಬಿದಿರೆ ಪೊಲೀಸರಿಗೆ ದೂರು ನೀಡಿದ್ದಾರೆ.

ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

English summary
More than 20 students injured in fight between Alvas college students and hostel employees. The incident took place in Pushpagiri hostel of Alvas college on March 17, 2018.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
We use cookies to ensure that we give you the best experience on our website. This includes cookies from third party social media websites and ad networks. Such third party cookies may track your use on Oneindia sites for better rendering. Our partners use cookies to ensure we show you advertising that is relevant to you. If you continue without changing your settings, we'll assume that you are happy to receive all cookies on Oneindia website. However, you can change your cookie settings at any time. Learn more