ಮಂಗಳೂರಿನಲ್ಲಿ ಅಗ್ನಿ ಅವಘಡ: ಹೊತ್ತಿ ಉರಿದ ಫಿಶ್ ಆಯಿಲ್ ಫ್ಯಾಕ್ಟರಿ
ಮಂಗಳೂರು, ಮಾರ್ಚ್ 28: ಮಂಗಳೂರು ಹೊರವಲಯದ ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ಫಿಶ್ ಆಯಿಲ್ ಕಾರ್ಖಾನೆ ಹೊತ್ತಿ ಉರಿದಿದೆ.
ಮಂಗಳೂರಿನ ಯು ಎಂ ಮೊಹಮ್ಮದ್ ಎಂಬವರಿಗೆ ಸೇರಿದ ಶಿಹಾರ ಎಂಟರ್‌ಪ್ರೈಸಸ್‌ನಲ್ಲಿ ಈ ಘಟನೆ ನಡೆದಿದ್ದು, ಸಂಪೂರ್ಣ ಫ್ಯಾಕ್ಟರಿ ಹೊತ್ತಿ ಉರಿದಿದೆ. ಶಿಹಾರ ಎಂಟರ್‌ಪ್ರೈಸಸ್‌ನಲ್ಲಿ ಕೋಳಿ ವೆಸ್ಟ್ ಹಾಗೂ ಫಿಶ್ ವೆಸ್ಟ್‌ನಿಂದ ಆಯಿಲ್ ಉತ್ಪಾದಿಸಲಾಗುತ್ತದೆ. ಹತ್ತಾರು ಕಾರ್ಮಿಕರು ಇಲ್ಲಿ ಕೆಲಸ ಮಾಡುತ್ತಿದ್ದು, ಕಾರ್ಖಾನೆಯಲ್ಲಿ ವ್ಯವಸ್ಥಿತವಾಗಿ ಕೆಲಸ ನಡೆದುಕೊಂಡು ಹೋಗುತ್ತಿತ್ತು.

ನಿನ್ನೆ ತಡರಾತ್ರಿ( ಮಾರ್ಚ್ 27)ರಂದು ಗೋಡೌನ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ನೋಡ ನೋಡುತ್ತಿದ್ದಂತೆ ಸಂಪೂರ್ಣ ಫ್ಯಾಕ್ಟರಿ ಹೊತ್ತಿ ಉರಿದಿದ್ದು, ಸಂಪೂರ್ಣ ಕಾರ್ಖಾನೆ ಬೆಂಕಿಗಾಹುತಿಯಾಗಿದೆ. ಬೆಂಕಿ ದುರಂತ ವಿಚಾರ ತಿಳಿಯುತ್ತಿದ್ದಂತೆ ಅಗ್ನಿಶಾಮಕ ದಳ ಸಿಬ್ಬಂದಿ ಸ್ಥಳಕ್ಕೆ ದೌಡಾಯಿಸಿದ್ದು, ಸತತ ಕಾರ್ಯಾಚರಣೆ ನಡೆಸಿ ಬೆಂಕಿ ಆರಿಸಿದ್ದಾರೆ. ಅದೃಷ್ಟವಶಾತ್ ಅಗ್ನಿ ದುರಂತದಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಹೊತ್ತಿಕೊಂಡಿರಬಹುದು ಎಂದು ಅಂದಾಜಿಸಲಾಗಿದೆ.
ಮಂಗಳೂರಿನಲ್ಲಿ ಗಾಂಜಾ ಸಾಗಟ: ಆರೋಪಿ ನಿಶಾಂತ್ ಶೆಟ್ಟಿ ಅರೆಸ್ಟ್
ಮಂಗಳೂರು: ಮಂಗಳೂರಿನಲ್ಲಿ ನಿಷೇಧಿತ ಮಾದಕ ವಸ್ತು ಮಾರಾಟ ಮಾಡುತ್ತಿದ್ದಆರೋಪಿಯನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದು 6.325 ಕೆಜಿ ಗಾಂಜಾವನ್ನು ವಶಪಡಿಸಿಕೊಂಡಿದ್ದಾರೆ. ವಾಮಂಜೂರು ಸಮೀಪದ ಕುಡುಪು ಪೆದಮಲೆಯ ನಿಶಾಂತ್ ಶೆಟ್ಟಿ (36) ಬಂಧಿತ ಆರೋಪಿ.
ಆರೋಪಿ ಮಾದಕ ವಸ್ತುವನ್ನು ಸಾರ್ವಜನಿಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ಮಾರಾಟ ಮಾಡುತ್ತಿದ್ದ ಬಗ್ಗೆ ಮಾಹಿತಿ ಪಡೆದ ಸಿಸಿಬಿ ಪೊಲೀಸರು ತೊಕ್ಕೊಟ್ಟು ಒಳಪೇಟೆಯ ಕೃಷ್ಣನಗರ ಪರಿಸರದಲ್ಲಿ ಗೂಡ್ಸ್ ಟೆಂಪೋವೊಂದರಲ್ಲಿ ಗಾಂಜಾ ಸಾಗಿಸಿ ಮಾರಾಟ ಮಾಡುತ್ತಿದ್ದಾಗ ದಾಳಿ ನಡೆಸಿ ಬಂಧಿಸಿದ್ದಾರೆ.
ಆರೋಪಿಯಿಂದ ಗೂಡ್ಸ್ ಟೆಂಪೋ. 1.50 ಲಕ್ಷ ರೂ.ಮೌಲ್ಯದ 6 ಕೆಜಿ 325 ಗ್ರಾಂ ಗಾಂಜಾ, 2 ಮೊಬೈಲ್ ಫೋನ್‌ಗಳು, ಡಿಜಿಟಲ್ ತೂಕ ಮಾಪಕ ಮತ್ತಿತರ ವಸ್ತುಗಳನ್ನು ವಶಕ್ಕೆ ಪಡೆದಿದ್ದಾರೆ. ಆರೋಪಿಯಿಂದ ವಶಪಡಿಸಿಕೊಂಡ ವಸ್ತುಗಳ ಮೌಲ್ಯ 9,11,500 ರೂಪಾಯಿ ಎಂದು ಅಂದಾಜಿಸಲಾಗಿದೆ.












Click it and Unblock the Notifications