ಮಂಗಳೂರಿನ ಬಜ್ಪೆ ವಿಮಾನ ನಿಲ್ದಾಣದ ರನ್ ವೇಯಲ್ಲಿ ಜಾರಿದ ವಿಮಾನ
ಮಂಗಳೂರು, ಜೂನ್ 30: ಮಂಗಳೂರು ವಿಮಾನನಿಲ್ದಾಣದಲ್ಲಿ ಭಾನುವಾರದಂದು ಸಂಭವನೀಯ ಭಾರೀ ಅನಾಹುತವೊಂದು ಕೂದಲೆಳೆ ಅಂತರದಲ್ಲಿ ತಪ್ಪಿದೆ. ಭೂಸ್ಪರ್ಶ ಆಗುವ ಸಂದರ್ಭದಲ್ಲಿ ರನ್ ವೇ ಹೊರಗೆ ವಿಮಾನ ಜಾರಿದೆ ಎಂದು ಮೂಲಗಳು ತಿಳಿಸಿವೆ. ಇದು ದುಬೈನಿಂದ ಮಂಗಳೂರಿಗೆ ಬರುತ್ತಿದ್ದ ಏರ್ ಇಂಡಿಯಾ ಎಕ್ಸ್‌ಪ್ರೆಸ್ 380 ವಿಮಾನ.
ಲ್ಯಾಂಡ್ ಆಗುವ ಸಂದರ್ಭದಲ್ಲಿ ರನ್ ವೇಯಿಂದ ಹೊರ ಬಂದಿದೆ ವಿಮಾನ. ಆದರೆ ವಿಮಾನದ ಪೈಲಟ್ ನ ಸಮಯಪ್ರಜ್ಞೆಯಿಂದ ಭಾರೀ ಅನಾಹುತವೊಂದು ತಪ್ಪಿದೆ. ವಿಮಾನದಲ್ಲಿ 183 ಪ್ರಯಾಣಿಕರಿದ್ದರು. ವಿಮಾನ ನಿಲ್ದಾಣದ ಸಿಬ್ಬಂದಿಯು ಪ್ರಯಾಣಿಕರನ್ನು ಸುರಕ್ಷಿತವಾಗಿ ಕರೆತಂದಿದ್ದಾರೆ.

ಮಂಗಳೂರಿನ ಬಜಪೆ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಕೆಲ ವರ್ಷಗಳ ಹಿಂದೆ ವಿಮಾನ ಅಪಘಾತವಾಗಿತ್ತು. ಮಂಗಳೂರಿನಲ್ಲಿ ಸಚಿವ ಯು.ಟಿ.ಖಾದರ್ ಮಾತನಾಡಿ, ಇಂಥ ಅವಘಡ ಸಂಭವಿಸದಂತೆ ಸೂಕ್ತ ಎಚ್ಚರಿಕೆಯನ್ನು ವಹಿಸಬೇಕು ಎಂದು ಹೇಳಿದ್ದಾರೆ. ಸದ್ಯಕ್ಕೆ ಯಾವುದೇ ಅನಾಹುತ ಸಂಭವಿಸಿಲ್ಲ ಹಾಗೂ ಪ್ರಯಾಣಿಕರೆಲ್ಲರೂ ಸುರಕ್ಷಿತರಾಗಿದ್ದಾರೆ.












Click it and Unblock the Notifications