ಮಂಗಳೂರಿನ ಕದ್ರಿ ಉದ್ಯಾನವನದಲ್ಲಿ ಮೂರು ದಿನಗಳ ಫಲಪುಷ್ಪ ಪ್ರದರ್ಶನ
ಮಂಗಳೂರು ಜನವರಿ 26: ಮಂಗಳೂರಿನಲ್ಲಿ ಕದ್ರಿ ಉದ್ಯಾನವನ ದಲ್ಲಿ ಆಯೋಜಿಸಲಾಗಿರುವ ಫಲಪುಷ್ಪ ಪ್ರದರ್ಶನವು ಜಿಲ್ಲೆಯ ಉದ್ದಗಲಕ್ಕೂ ಪ್ರವಾಸೋದ್ಯಮವನ್ನು ಉತ್ತೇಜಿಸಲಿದೆ .
ಇದರೊಂದಿಗೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿರುವ ನದಿ, ಸಮುದ್ರವು ಪ್ರವಾಸಿಗರ ತಾಣವಾಗಿಸುವ ಅಗತ್ಯವಿದೆ. ಪ್ರವಾಸೋದ್ಯಮಕ್ಕೆ ಉತ್ತೇಜನ ನೀಡಿದರೆ ಉದ್ಯೋಗಾವಕಾಶಗಳೂ ದೊರಕಲಿವೆ ಎಂದು ದಕ್ಷಿಣ ಕನ್ನಡ ಜಿಲ್ಲಾಉಸ್ತುವಾರಿ ಸಚಿವ ಯು ಟಿ ಖಾದರ್ ತಿಳಿಸಿದ್ದಾರೆ.
ಮಂಗಳೂನ ಕದ್ರಿ ಉದ್ಯಾನವನದಲ್ಲಿ ಗಣರಾಜ್ಯೋತ್ಸವದ ಅಂಗವಾಗಿ ಆಯೋಜಿಸಲಾಗಿರುವ ಫಲಪುಷ್ಪ ಪ್ರದರ್ಶನಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ಗಣರಾಜ್ಯೋತ್ಸವದ ಅಂಗವಾಗಿ ಮಂಗಳೂರಿನ ಕದ್ರಿ ಉದ್ಯಾನವನ ದಲ್ಲಿ ದಕ್ಷಿಣ ಕನ್ನಡ ಜಿಲ್ಲಾಡಳಿತ ತೋಟಗಾರಿಕೆ ಇಲಾಖೆ ಮತ್ತು ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ನ ಸಂಯುಕ್ತ ಆಶ್ರಯದಲ್ಲಿ ಫಲಪುಷ್ಪ ಪ್ರದರ್ಶನ ಆಯೋಜಿಸಲಾಗಿದೆ.

ಮೂರು ದಿನಗಳ ಕಾಲ ನಡೆಯಲಿರು ಈ ಫಲಪುಷ್ಪಪ್ರದರ್ಶನವನ್ನು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು ಕರಾವಳಿಯ ನದಿ ತೀರದ ಪ್ರವಾಸೋದ್ಯಮಕ್ಕೆ ಉತ್ತೇಜನ ನೀಡುವ ದೃಷ್ಠಿಯಿಂದ ಮುಬರುವ ಬಜೆಟ್‌ನಲ್ಲಿ ಈ ಬಗ್ಗೆ ಪ್ರಸ್ತಾವ ಮಾಡಿರುವುದಾಗಿ ಅವರು ಹೇಳಿದರು.

ಈ ಸಂದರ್ಭದಲ್ಲಿ ಮಂಗಳೂರು ದಕ್ಷಿಣ ಕ್ಷೇತ್ರದ ಶಾಸಕ ವೇದವ್ಯಾಸ ಕಾಮತ್, ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜ, ಜಿ.ಪಂ. ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು, ಉಪಾಧ್ಯಕ್ಷೆ ಕಸ್ತೂರಿ ಪಂಜ ಮತ್ತಿತರರು ಉಪಸ್ಥಿತ ರಿದ್ದರು.












Click it and Unblock the Notifications