ಮಂಗಳೂರಿನ ಕದ್ರಿ ಉದ್ಯಾನವನದಲ್ಲಿ ಜನವರಿ 26ರಿಂದ ಫಲಪುಷ್ಪ ಪ್ರದರ್ಶನ
ಮಂಗಳೂರು, ಜನವರಿ 24:ಮಂಗಳೂರಿನ ಕದ್ರಿ ಉದ್ಯಾನವನದಲ್ಲಿ ಜನವರಿ 26ರಿಂದ 3 ದಿನಗಳ ಕಾಲ ಫಲಪುಷ್ಪ ಪ್ರದರ್ಶನ ಆಯೋಜಿಸಲಾಗಿದೆ . ದಕ್ಷಿಣ ಕನ್ನಡ ಜಿಲ್ಲಾಡಳಿತ , ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಹಾಗೂ ತೋಟಗಾರಿಕೆ ಇಲಾಖೆಯ ಸಂಯುಕ್ತ ಆಶ್ರಯದಲ್ಲಿ ಫಲಪುಷ್ಪ ಪ್ರದರ್ಶನ ಏರ್ಪಡಿಸಲಾಗಿದೆ.
ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ.ಖಾದರ್ ಫಲಪುಷ್ಪ ಪ್ರದರ್ಶನವನ್ನು ಮತ್ತು ಹೂ ವಿನ್ಯಾಸ ಮಾದರಿಯನ್ನು ವಿಧಾನ ಪರಿಷತ್ ಸಭಾಪತಿ ಕೆ.ಪ್ರತಾಪ ಚಂದ್ರ ಶೆಟ್ಟಿ ಉದ್ಘಾಟಿಸಲಿದ್ದಾರೆ.

ಗಣರಾಜ್ಯೋತ್ಸವದ ಅಂಗವಾಗಿ ಆಯೋಜಿಸಲಾಗುವ ಈ ಫಲ ಪುಷ್ಪಪ್ರದರ್ಶನ ಪ್ರತೀ ದಿನ ಬೆಳಗ್ಗೆ 8 ರಿಂದ ರಾತ್ರಿ 8ರವರೆಗೆ ಸಾರ್ವಜನಿಕರಿಗಾಗಿ ತೆರೆದಿರಲಿದೆ. ಪ್ರದರ್ಶನ ವೀಕ್ಷಿಸಲು ಹಿರಿಯರಿಗೆ 20 ರೂಪಾಯಿ ಮತ್ತು ಮಕ್ಕಳಿಗೆ 10 ರೂಪಾಯಿ ಪ್ರವೇಶ ಶುಲ್ಕ ನಿಗದಿಪಡಿಸಲಾಗಿದೆ.
ಶಾಲಾ ಸಮವಸ್ತ್ರ ಧರಿಸಿದ ವಿದ್ಯಾರ್ಥಿಗಳಿಗೆ, ವಿಕಲಚೇತನರಿಗೆ, ಭಿನ್ನಸಾಮರ್ಥ್ಯದ ಮಕ್ಕಳಿಗೆ ಉಚಿತ ಪ್ರವೇಶ ಕಲ್ಪಿಸಲು ನಿರ್ಧರಿಸಲಾಗಿದೆ.

ಫಲಪುಷ್ಪ ಪ್ರದರ್ಶನದಲ್ಲಿ ಬಣ್ಣ ಬಣ್ಣದ ಕಾನೇರ್ಷನ್ ಮತ್ತು ಗುಲಾಬಿ ಹೂವಿನಿಂದ ಅಲಂಕರಿಸಿದ 'ಸಮುದ್ರದಲ್ಲಿ ತೇಲುವ ಹಡಗು' ಹಾಗೂ ಇನ್ನಿತರ ಮಾದರಿಗಳು ಆಕೃತಿಗಳನ್ನು ಕಾಣಬಹುದಾಗಿದೆ. ಅಲ್ಲದೆ ತೋಟಗಾರಿಕೆ ಇಲಾಖಾ ವತಿಯಿಂದ ಬೆಳೆಸಲಾಗಿರುವ ವಿವಿಧ ಜಾತಿಯ ಆಕರ್ಷಕ ಹೂಗಳ ಟೋಪಿಯಾರಿ ಹಾಗೂ ವಿವಿಧ ಹಣ್ಣು ಮತ್ತು ತರಕಾರಿಗಳ, ಅಂಥೂರಿಯಂ, ಆರ್ಕಿಡ್ ಗಿಡಗಳು ಇನ್ನಿತರೆ ಆಕರ್ಷಣೀಯವಾದ ಗಿಡಗಳನ್ನು ಪ್ರದರ್ಶನಕ್ಕೆ ಇಡಲಾಗುವುದು.












Click it and Unblock the Notifications