ಮಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ದಕ್ಷಿಣ ಕನ್ನಡದ ನಕ್ಸಲ್ ಪೀಡಿತ ಮತಗಟ್ಟೆಗಳ ಮೇಲೆ ಹದ್ದಿನ ಕಣ್ಣು

|
Google Oneindia Kannada News

ಮಂಗಳೂರು ಮೇ 10: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮೇ 12 ರಂದು ಮತದಾನ ಸುಸೂತ್ರವಾಗಿ ನಡೆಯಲು ಬೇಕಾದ ಅಗತ್ಯ ಭಧ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ರವಿಕಾಂತೇ ಗೌಡ ತಿಳಿಸಿದ್ದಾರೆ .

ಜಿಲ್ಲೆಯಲ್ಲಿ ಮತದಾರರು ನಿರ್ಭೀತಿಯಿಂದ ಮತ ಚಲಾವಣೆ ಮಾಡಿ ಎಂದು ಡಾ. ರವಿಕಾಂತೇ ಗೌಡ ಕರೆನೀಡಿದ್ದು, ಚುನಾವಣೆಗೆ ಇನ್ನು ಎರಡೇ ದಿನಗಳು ಬಾಕಿಯಿರುವ ಹಿನ್ನಲೆಯಲ್ಲಿ ಪೋಲಿಸ್ ಇಲಾಖೆ ಜಿಲ್ಲೆಯ ಅತ್ಯಂತ ಸೂಕ್ಷ್ಮ ಮತಗಟ್ಟೆಗಳ ಮೇಲೆ ಕಣ್ಣಿರಿಸಿದ್ದು ಭದ್ರತೆಗೆ ಎಲ್ಲಾ ಕ್ರಮಗಳನ್ನು ಕೈ ಗೊಂಡಿದೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮತದಾನ ಶಾಂತಿ ಮತ್ತು ಸುಸೂತ್ರವಾಗಿ ನಡೆಯಲು ಬೇಕಾದ ಎಲ್ಲಾ ಕ್ರಮಗಳನ್ನು ಇಲಾಖೆ ಕೈಗೊಂಡಿದೆ. ಜಿಲ್ಲೆಯ ಗಡಿ ಭಾಗಗಳಲ್ಲಿ 23 ಚೆಕ್ ಪೋಸ್ಟ್ ಗಳನ್ನು ತೆರೆಯಲಾಗಿದ್ದು, ಅಲ್ಲಿ ಸಿಸಿಟಿವಿಗಳ ಕಣ್ಗಾವಲು, ಕೇಂದ್ರೀಯ ಭದ್ರತಾ ಪಡೆಗಳ ಯೋಧರನ್ನು ನಿಯೋಜಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.

For smooth polling tight security arrangement done in Dakshina Kannada: SP

ಜಿಲ್ಲೆ ಆಗಮಿಸುವ ಎಲ್ಲಾ ವಾಹನ ಹಾಗೂ ಅಪರಿಚಿತ ವ್ಯಕ್ತಿಗಳ ಚಲನಾವಲನಗಳ ಮೇಲೆ ನಿಗಾ ಇರಿಸಲಾಗಿದೆ. ನಕ್ಸಲ್ ಪೀಡಿತ ಪ್ರದೇಶಗಳಲ್ಲಿರುವ 64 ಮತಗಟ್ಟೆಗಳು ಸೇರಿದಂತೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಒಟ್ಟು 980 ಮತಗಟ್ಟೆಗಳಿವೆ. ಇವುಗಳ ಭದ್ರತೆಗೆ 3000 ಪೋಲಿಸರನ್ಉ ನಿಯೋಜನೆ ಮಾಡಲಾಗಿದೆ ಎಂದು ಅವರು ಸ್ಪಷ್ಟಪಡಿಸಿದರು.

ಇದಲ್ಲದೇ 1400 ಕೇಂದ್ರೀಯ ಭದ್ರತಾ ಪಡೆಗಳ ಸಿಬ್ಬಂದಿ ಹಾಗೂ ಅಧಿಕಾರಿಗಳು ಸೇರಿದಂತೆ ಒಂದು ರಾಪಿಡ್ ಆ್ಯಕ್ಷನ್ ಫೋರ್ಸ್, ಹಾಗೂ ಮೂರು ಕೆಎಸ್ಆರ್ಪಿ ತುಕಡಿಗಳ ನಿಯೋಜನೆ ಮಾಡಲಾಗಿದೆ ಎಂದು ಮಾಹಿತಿ ನೀಡಿದರು.

ನಕ್ಸಲ್ ಪೀಡಿತ ಪ್ರದೇಶಗಳ ಮತ ಕೇಂದ್ರಗಳನ್ನು ಖುದ್ದಾಗಿ ಪರಿಶೀಲನೆ ಮಾಡಲಾಗಿದ್ದು, ನಕ್ಷಲ್ ನಿಗ್ರಹ ಪಡೆ ಸತತವಾಗಿ ಅರಣ್ಯದಲ್ಲಿ ಕೂಬಿಂಗ್ ಮಾಡಿ ಈ ಪ್ರದೇಶದ ಜನರಿಗೆ ವಿಶ್ವಾಸ ತುಂಬುವ ಕಾರ್ಯ ಮಾಡುತ್ತಿದ್ದಾರೆ ಎಂದು ಅವರು ಹೇಳಿದರು.

ನೀತಿ ಸಂಹಿತೆ ಜಾರಿಯಾದ ಬಳಿಕ ಜಿಲ್ಲೆಯಲ್ಲಿ 4 ಕ್ರಿಮಿನಲ್ ಸೇರಿದಂತೆ ಒಟ್ಟು 10 ಪ್ರಕರಣ ದಾಖಲಾಗಿದೆ. 21 ಅಬಕಾರಿ ಪ್ರಕರಣ ದಾಖಲಿಸಲಾಗಿದೆ. ದಾಖಲೆ ರಹಿತ 4 ಲಕ್ಷ ರೂಪಾಯಿಗಳನ್ನು 6.8 ಕೆ.ಜಿ ಗಾಂಜಾ, 1222 ಸೀರೆಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ಅವರು ಹೇಳಿದರು.

English summary
Karnataka assembly elections 2018: Speaking to media persons in Mangaluru Dakshina Kannada District Superintendent of police Dr. BR Ravikanthe Gowda said that all the necessary precautionary measure has been taken in the Dakshina kannada districts for smooth polling day.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X