ಮಂಗಳೂರು: ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ ಅರಣ್ಯ ಅಧಿಕಾರಿ

ಮಂಗಳೂರು, ಸೆಪ್ಟೆಂಬರ್ 28 : ಇಲ್ಲಿನ ರಕ್ಷಿತಾರಣ್ಯದಲ್ಲಿ ಮರ ಕಡಿದ ಆರೋಪದ ಮೇಲೆ ವ್ಯಕ್ತಿಯೊಬ್ಬನಿಗೆ ಅರಣ್ಯ ಇಲಾಖೆ ಅಧಿಕಾರಿಗಳು ಚಿತ್ರ ಹಿಂಸೆ ನೀಡಿ ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ಬೆಳ್ತಂಗಡಿಯಲ್ಲಿ ನಡೆದಿದೆ.

ಬೆಳ್ತಂಗಡಿ ತಾಲೂಕಿನ ಪುದುವೆಟ್ಟು ಕಾಡಿನಲ್ಲಿ ಸ್ಥಳಿಯ ನಿವಾಸಿ ಕಮಲ್ ದಸ್ ಎಂಬವರು ಮರ ಕಡಿದಿದ್ದಾರೆ ಎಂದು ಆರೋಪಿಸಲಾಗಿದೆ. ಈ ಹಿನ್ನೆಲೆಯಲ್ಲಿ ಕಮಲ್ ದಾಸ್ ಅವರನ್ನು ಅರಣ್ಯ ಇಲಾಖೆ ಅಧಿಕಾರಿಗಳು ವಶಕ್ಕೆ ಪಡೆದಿದ್ದು, ವಿಚಾರಣೆ ವೇಳೆ ಅರಣ್ಯ ಇಲಾಖೆ ಅಧಿಕಾರಿ ಕೀರ್ತನ್ ಎಂಬವರು ಆರೋಪಿ ಕಮಲ್ ದಾಸ್ ಅವರನ್ನು ಕಟ್ಟಿ ಹಾಕಿ ಚಿತ್ರಹಿಂಸೆ ನೀಡಿ ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ .

Forest Officals thrash men for cutting tree at forest area at Belthangady

ಕೀರ್ತನ್ ಅವರು ಕಮಲ ದಾಸ್ ಅವರನ್ನು ಕಟ್ಟಿಹಾಕಿ ಹಿಂಬದಿಗೆ ಲಾಠಿಯಿಂದ ಮನ ಬಂದಂತೆ ಥಳಿಸಿದ್ದಾರೆ ಎಂದು ದೂರಲಾಗಿದೆ. ಪರಿಣಾಮ ಕಮಲ್ ದಾಸರು ತೀವ್ರವಾಗಿ ಗಾಯಗೊಂಡಿದ್ದಾರೆ.

ಈ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ವಿರುದ್ಧ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದು, ಹಲ್ಲೆ ನಡೆಸಿದ ಅಧಿಕಾರಿ ಕೀರ್ತನ್ ವಿರುದ್ಧ ಕಠಿಣ ಕ್ರಮ ಜರುಗಿಸುವಂತೆ ಒತ್ತಾಯಿಸಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+