ಕೇಂದ್ರ ಮಾಜಿ ಸಚಿವ ಧನಂಜಯ ಕುಮಾರ್ ಇನ್ನಿಲ್ಲ

ಮಂಗಳೂರು, ಮಾರ್ಚ್ 04: ಮಾಜಿ ಸಚಿವ ಧನಂಜಯ ಕುಮಾರ್ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಇಂದು ಸೋಮವಾರ ನಿಧನರಾದರು.
ಕೋಮಾ ಸ್ಥಿತಿಗೆ ತಲುಪಿದ ಮಾಜಿ ಕೇಂದ್ರ ಸಚಿವ ವಿ.ಧನಂಜಯ ಕುಮಾರ್
ಕಳೆದ ಕೆಲ ವರ್ಷಗಳಿಂದ ಕಿಡ್ನಿ ಸಮಸ್ಯೆಯಿಂದ ಬಳಲುತ್ತಿದ್ದ ವಿ. ಧನಂಜಯ ಕುಮಾರ್ ಅವರನ್ನು ಕೆಲ ತಿಂಗಳುಗಳಿಂದ ಮಂಗಳೂರಿನ ಖಾಸಗಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿರಿಸಿ ಚಿಕಿತ್ಸೆ ನೀಡಲಾಗುತ್ತಿತ್ತು.
ಧನಂಜಯ ಕುಮಾರ್ ಅವರಿಗೆ 67 ವರ್ಷ ವಯಸ್ಸಾಗಿತ್ತು. ನಾಳೆ ಮಂಗಳವಾರ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ವೇಣೂರಿನಲ್ಲಿ ಅಂತ್ಯಕ್ರಿಯೆ ನೆರವೇರಲಿದೆ. ಅಟಲ್ ಬಿಹಾರಿ ವಾಜಪೇಯಿ ಸರ್ಕಾರದಲ್ಲಿ ರಾಜ್ಯ ಹಣಕಾಸು, ರಾಜ್ಯ ಪ್ರವಾಸೋದ್ಯಮ ಸಚಿವರಾಗಿ ಕಾರ್ಯನಿರ್ವಹಿಸಿದ್ದ ಧನಂಜಯಕುಮಾರ್, ಕಳೆದ ಕೆಲ ವರ್ಷಗಳಿಂದ ರಾಜಕೀಯ ನೇಪಥ್ಯಕ್ಕೆ ಸರಿದಿದ್ದರು.
ಬಿಜೆಪಿಯಿಂದ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಿ 4 ಬಾರಿ ಸತತವಾಗಿ ಗೆಲುವು ಸಾಧಿಸಿದ್ದ ಧನಂಜಯ ಕುಮಾರ್, ಕಳೆದ ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ಕಾಂಗ್ರೆಸ್ ಸೇರಿ ಸದ್ದು ಮಾಡಿದ್ದರು.