ಆಸ್ಕರ್ ಫರ್ನಾಂಡೀಸ್ ಆರೋಗ್ಯ ವಿಚಾರಿಸಿದ ಜನಾರ್ದನ ಪೂಜಾರಿ
ಮಂಗಳೂರು, ಜುಲೈ 21: ಕಾಂಗ್ರೆಸ್ ಹಿರಿಯ ಮುಖಂಡ ಆಸ್ಕರ್ ಫರ್ನಾಂಡೀಸ್ ಆಸ್ಪತ್ರೆಗೆ ದಾಖಲಾಗಿದ್ದು, ಈ ಹಿನ್ನಲೆಯಲ್ಲಿ ಆಸ್ಕರ್ರವರ ಆರೋಗ್ಯ ವಿಚಾರಣೆ ಮಾಡಲು ಆಸ್ಪತ್ರೆಗೆ ಕಾಂಗ್ರೆಸ್ ಮುಖಂಡರ ದಂಡೇ ಹರಿದು ಬರುತ್ತಿದೆ.
ಅನಾರೋಗ್ಯದ ಮಧ್ಯೆಯೂ ಆಪ್ತನ ಆರೋಗ್ಯ ವಿಚಾರಿಸಲು ಮಾಜಿ ಕೇಂದ್ರ ಸಚಿವ ಜನಾರ್ದನ ಪೂಜಾರಿ ಮಂಗಳೂರಿನ ಯೆನೆಪೋಯಾ ಆಸ್ಪತ್ರೆಗೆ ಭೇಟಿ ನೀಡಿದ್ದಾರೆ.
ಹಲವು ತಿಂಗಳ ಬಳಿಕ ಸಾರ್ವಜನಿಕವಾಗಿ ಕಾಣಿಸಿಕೊಂಡ ಜನಾರ್ದನ ಪೂಜಾರಿ, ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿರುವ ಆಸ್ಕರ್ ಫರ್ನಾಂಡಿಸ್ರನ್ನು ನೋಡಿ, ಆರೋಗ್ಯ ವಿಚಾರಣೆ ಮಾಡಿ ಕುಟುಂಬಸ್ಥರಿಗೆ ಧೈರ್ಯ ತುಂಬಿದ್ದಾರೆ.

ಆಸ್ಪತ್ರೆಗೆ ಭೇಟಿ ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಕಾಂಗ್ರೆಸ್ ಮುಖಂಡ ಜನಾರ್ದನ ಪೂಜಾರಿ, ಆಸ್ಕರ್ ಬಗ್ಗೆ ಮಾತನಾಡುತ್ತಾ ಗದ್ಗದಿತರಾಗಿದ್ದಾರೆ.
ಆಸ್ಕರ್ ಫರ್ನಾಂಡೀಸ್ ಆರೋಗ್ಯ ವಿಚಾರಿಸಿ ಜನಾರ್ದನ ಪೂಜಾರಿ ಕಣ್ಣೀರಿಟ್ಟ ಅವರು, ಆಸ್ಕರ್ ಆರೋಗ್ಯವಾಗಿ ಬರುತ್ತಾರೆ ದೇವರು ಅವರಿಗೆ ಸಹಾಯ ಮಾಡುತ್ತಾರೆ. ಶೀಘ್ರ ಗುಣಮುಖರಾಗಲೆಂದು ನಾನೂ ದೇವರಲ್ಲಿ ಪ್ರಾರ್ಥಿಸುತ್ತೇನೆ ಅಂತಾ ಜನಾರ್ದನ ಪೂಜಾರಿ ಹೇಳಿದ್ದಾರೆ.
-
ನಿಮ್ಮ ಮನೆ ದಿಕ್ಕು ಸರಿಯೇ? ರಾಶಿ ಪ್ರಕಾರ ವಾಸ್ತು ಸೂಚನೆಗಳು ಇಲ್ಲಿವೆ -
ಸರ್ಕಾರಿ ಕಚೇರಿಗಳಲ್ಲಿ ಇನ್ಮುಂದೆ ಕರಿದ ತಿಂಡಿ, ಟೀ-ಕಾಫಿ ಬ್ಯಾನ್: ಸಿರಿಧಾನ್ಯಗಳಿಗೆ ಆದ್ಯತೆ ನೀಡುವಂತೆ ಆರೋಗ್ಯ ಇಲಾಖೆ ಸೂಚನೆ -
Karnataka Rains: ರಾಜ್ಯಾದ್ಯಂತ ಏಪ್ರಿಲ್ 20ರ ತನಕ ಮಳೆ, 6 ಜಿಲ್ಲೆಗಳಿಗೆ ಉಷ್ಣ ಅಲೆ ಮುನ್ಸೂಚನೆ -
ಬನಶಂಕರಿ ಜಾತ್ರೆಯ ಭಕ್ತರಿಗೆ ಶುಭ ಸುದ್ದಿ: ಎಕ್ಸ್ಪ್ರೆಸ್ ರೈಲುಗಳ ನಿಲುಗಡೆಗೆ ಆದೇಶ -
CET ರ್ಯಾಂಕಿಂಗ್ಗೆ ಪಿಯುಸಿಯ ಯಾವ ಅಂಕ ಪರಿಗಣನೆ? ಪರೀಕ್ಷೆ-1 ಅಥವಾ ಪರೀಕ್ಷೆ-2? ಇಲ್ಲಿದೆ ಮಹತ್ವದ ಸ್ಪಷ್ಟನೆ -
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್












Click it and Unblock the Notifications