• search
  • Live TV
ಮಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಆಸ್ಕರ್ ಫರ್ನಾಂಡೀಸ್ ಆರೋಗ್ಯ ವಿಚಾರಿಸಿದ ಜನಾರ್ದನ ಪೂಜಾರಿ

By ಮಂಗಳೂರು ಪ್ರತಿನಿಧಿ
|
Google Oneindia Kannada News

ಮಂಗಳೂರು, ಜುಲೈ 21: ಕಾಂಗ್ರೆಸ್ ಹಿರಿಯ ಮುಖಂಡ ಆಸ್ಕರ್ ಫರ್ನಾಂಡೀಸ್ ಆಸ್ಪತ್ರೆಗೆ ದಾಖಲಾಗಿದ್ದು, ಈ ಹಿನ್ನಲೆಯಲ್ಲಿ ಆಸ್ಕರ್‌ರವರ ಆರೋಗ್ಯ ವಿಚಾರಣೆ ಮಾಡಲು ಆಸ್ಪತ್ರೆಗೆ ಕಾಂಗ್ರೆಸ್ ಮುಖಂಡರ ದಂಡೇ ಹರಿದು ಬರುತ್ತಿದೆ.

ಅನಾರೋಗ್ಯದ ಮಧ್ಯೆಯೂ ಆಪ್ತನ ಆರೋಗ್ಯ ವಿಚಾರಿಸಲು ಮಾಜಿ ಕೇಂದ್ರ ಸಚಿವ ಜನಾರ್ದನ ಪೂಜಾರಿ ಮಂಗಳೂರಿನ ಯೆನೆಪೋಯಾ ಆಸ್ಪತ್ರೆಗೆ ಭೇಟಿ ನೀಡಿದ್ದಾರೆ.

ಹಲವು ತಿಂಗಳ ಬಳಿಕ ಸಾರ್ವಜನಿಕವಾಗಿ ಕಾಣಿಸಿಕೊಂಡ ಜನಾರ್ದನ ಪೂಜಾರಿ, ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿರುವ ಆಸ್ಕರ್ ಫರ್ನಾಂಡಿಸ್‌ರನ್ನು ನೋಡಿ, ಆರೋಗ್ಯ ವಿಚಾರಣೆ ಮಾಡಿ ಕುಟುಂಬಸ್ಥರಿಗೆ ಧೈರ್ಯ ತುಂಬಿದ್ದಾರೆ.

ಆಸ್ಪತ್ರೆಗೆ ಭೇಟಿ ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಕಾಂಗ್ರೆಸ್ ಮುಖಂಡ ಜನಾರ್ದನ ಪೂಜಾರಿ, ಆಸ್ಕರ್ ಬಗ್ಗೆ ಮಾತನಾಡುತ್ತಾ ಗದ್ಗದಿತರಾಗಿದ್ದಾರೆ.

ಆಸ್ಕರ್ ಫರ್ನಾಂಡೀಸ್ ಆರೋಗ್ಯ ವಿಚಾರಿಸಿ ಜನಾರ್ದನ ಪೂಜಾರಿ ಕಣ್ಣೀರಿಟ್ಟ ಅವರು, ಆಸ್ಕರ್ ಆರೋಗ್ಯವಾಗಿ ಬರುತ್ತಾರೆ ದೇವರು ಅವರಿಗೆ ಸಹಾಯ ಮಾಡುತ್ತಾರೆ. ಶೀಘ್ರ ಗುಣಮುಖರಾಗಲೆಂದು ನಾನೂ ದೇವರಲ್ಲಿ ಪ್ರಾರ್ಥಿಸುತ್ತೇನೆ ಅಂತಾ ಜನಾರ್ದನ ಪೂಜಾರಿ ಹೇಳಿದ್ದಾರೆ.

English summary
Former Union Minister Janardhan Poojary has visited the Yenepoya Hospital in Mangalore to inquire Oscar Fernandes health.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X