ನಳಿನ್ ಕುಮಾರ್ ಕಟೀಲ್ ಆರೋಪಕ್ಕೆ ತಿರುಗೇಟು ಕೊಟ್ಟ ಮಾಜಿ ಶಾಸಕ ಲೋಬೊ
ಮಂಗಳೂರು, ಫೆಬ್ರವರಿ 19: ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಸಂಸದ ನಳಿನ್ ಕುಮಾರ್ ಕಟೀಲ್ ಕಳೆದ 10 ವರ್ಷದಲ್ಲಿ ಜಿಲ್ಲೆಯ ಅಭಿವೃದ್ಧಿಗೆ ಏನೇನೂ ಕೊಡುಗೆ ನೀಡಿಲ್ಲ. ಹೊಸ ಯೋಜನೆ ಬಿಡಿ, ಹಳೆಯ ಯೋಜನೆಗಳಿಗೆ ಪುನರುಜ್ಜೀವನ ನೀಡಲೂ ವಿಫಲರಾಗಿದ್ದಾರೆ ಎಂದು ಮಾಜಿ ಶಾಸಕ ಜೆ ಆರ್ ಲೋಬೊ ಆರೋಪಿಸಿದ್ದಾರೆ.
ಮಂಗಳೂರಿನಲ್ಲಿ ಮಾದ್ಯಮ ಗೋಷ್ಠಿಯಲ್ಲಿ ಮಾತನಾಡಿದ ಅವರು ತೊಕ್ಕೊಟ್ಟು ಮತ್ತು ಪಂಪ್ ವೆಲ್ ಮೇಲ್ಸೇತುವೆ ಕಾಮಗಾರಿ ವಿಳಂಬಕ್ಕೆ ಸಚಿವ ಯು.ಟಿ. ಖಾದರ್ ಮತ್ತು ಮಾಜಿ ಶಾಸಕ ಜೆ.ಆರ್.ಲೋಬೊ ಅವರ ಸ್ವಸಮುದಾಯದ ಮೇಲಿನ ಪ್ರೀತಿಯೇ ಕಾರಣ ಎಂದು ನಳಿನ್ ಕುಮಾರ್ ಕಟೀಲ್ ಮಾಡಿರುವ ಆರೋಪಕ್ಕೆ ಪ್ರತಿಕ್ರಿಯಿಸಿದರು.

ನಿಮ್ಮ ವೈಫಲ್ಯಕ್ಕೆ ನಮ್ಮ ಕಾಲೆಳೆಯಲು ಬರಬೇಡಿ ಎಂದು ನಳಿನ್ ಕುಮಾರ್ ಕಟೀಲ್ ಗೆ ತಿರುಗೇಟು ಕೊಟ್ಟ ಲೋಬೊ, ನಳಿನ ಕುಮಾರ್ ಕಟೀಲ್ ತಮ್ಮ ವೈಫಲ್ಯಗಳನ್ನು ಮರೆಮಾಚಲು ಮತ್ತು ಮುಂದಿನ ಚುನಾವಣೆಯ ದೃಷ್ಟಿಕೋನದಿಂದ ಸಮುದಾಯಗಳ ಮಧ್ಯೆ ವಿಷಬೀಜ ಬಿತ್ತಲು ನೋಡುತ್ತಿದ್ದಾರೆ. ನೇರ ರಾಜಕೀಯ ಮಾಡುವ ಬದಲು ಮತ-ಧರ್ಮದ ಆಧಾರದ ಮೇಲೆ ರಾಜಕಾರಣ ಮಾಡಲು ಹೊರಟಿದ್ದಾರೆ ಎಂದು ಲೋಬೊ ಕಿಡಿಕಾರಿದರು.












Click it and Unblock the Notifications