Dr B Yashovarma: ಎಸ್‌ಡಿಎಂ ಕಾಲೇಜು ಮಾಜಿ ಪ್ರಾಂಶುಪಾಲ ಯಶೋವರ್ಮಾ ನಿಧನ
ಮಂಗಳೂರು,ಮೇ 23 : ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ ಪತ್ನಿ ಡಾ. ಹೇಮಾವತಿ ಹೆಗ್ಗಡೆಯವರ ಸಹೋದರ ಡಾ. ಬಿ ಯಶೋವರ್ಮಾ (66) ಭಾನುವಾರ ನಿಧನರಾಗಿದ್ದಾರೆ. ಧರ್ಮಸ್ಥಳದ ಮಂಜುನಾಥೇಶ್ವರ ಕಾಲೇಜಿನ ಪ್ರಾಂಶುಪಾಲರಾಗಿ ಕಾರ್ಯನಿರ್ವಹಿಸಿದ್ದರು.
ಡಾ. ಬಿ ಯಶೋವರ್ಮ ಧರ್ಮಸ್ಥಳದ ಮಂಜುನಾಥೇಶ್ವರ ಕಾಲೇಜಿನ ಮಾಜಿ ಪ್ರಾಂಶುಪಾಲರಾಗಿದ್ದರು. ಯಶೋವರ್ಮ ಅವರು ಕಳೆದ ಕೆಲವು ತಿಂಗಳಿನಿಂದ ಅನಾರೋಗ್ಯದ ಹಿನ್ನಲೆಯಲ್ಲಿ ಸಿಂಗಾಪುರದಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆ ಫಲಕಾರಿಯಾಗದೇ ಭಾನುವಾರ ಮಧ್ಯರಾತ್ರಿ ನಿಧರಾಗಿದ್ದಾರೆ.
ಡಾ. ಬಿ. ಯಶೋವರ್ಮ ಉಜಿರೆಯ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ ಪ್ರಾಂಶುಪಾಲರಾಗಿ ದೀರ್ಘಕಾಲ ಸೇವೆ ಸಲ್ಲಿಸಿದ್ದರು ಮತ್ತು ಎಸ್‌ಡಿಎಂಸಿ ಉಜಿರೆ ಸೇರಿದಂತೆ ಎಸ್‌ಡಿಎಂಇ ಸೊಸೈಟಿ ಮತ್ತು ಸೊಸೈಟಿಯಿಂದ ನಿರ್ವಹಿಸಲ್ಪಡುವ 56 ಸಂಸ್ಥೆಗಳ ಮುಖ್ಯಸ್ಥರಾಗಿದ್ದಾರೆ.

Recommended Video
1986ರಲ್ಲಿ ಸೈಕಾಲಜಿಯಲ್ಲಿ ಪಿಎಚ್ ಡಿ ಪದವಿ ಪಡೆದಿದ್ದ ಅವರು ಸಸ್ಯಶಾಸ್ತ್ರದ ಬಗ್ಗೆ ತೀವ್ರ ಉತ್ಸಾಹಿಯಾಗಿದ್ದರು. ಅವರ ಹೆಸರಿನಲ್ಲಿ ಅನೇಕ ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಪ್ರಕಟಣೆಗಳೂ ಬಂದಿವೆ. ಬೆಳ್ತಂಗಡಿ ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷರಾಗಿ ಹಲವು ಸಮ್ಮೇಳನಗಳನ್ನು ಯಶಸ್ವಿಯಾಗಿ ನಡೆಸಿದ್ದರು.












Click it and Unblock the Notifications