ಮಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಕುಳಾಯಿಯಲ್ಲಿ ಮೀನುಗಾರಿಕಾ ಜಟ್ಟಿ ಸೇರಿದಂತೆ ವಿವಿಧ ಕಾಮಗಾರಿಗಳಿಗೆ ಚಾಲನೆ

|
Google Oneindia Kannada News

ಮಂಗಳೂರು, ಮಾರ್ಚ್ 06: ಮಂಗಳೂರು ಹೊರವಲಯದ ಕುಳಾಯಿ ಎಂಬಲ್ಲಿ ಸಾಗರಮಾಲಾ ಯೋಜನೆಯಡಿ ನಿರ್ಮಾಣವಾಗಲಿರುವ ಮೀನುಗಾರಿಕಾ ಜಟ್ಟಿ ಯೋಜನೆಗೆ ಮಂಗಳವಾರ (ಮಾರ್ಚ್.05) ಚಾಲನೆ ನೀಡಲಾಯಿತು. ಕಾಮಗಾರಿಗೆ ಕೇಂದ್ರ ಸಚಿವ ನಿತಿನ್ ಗಡ್ಕರಿ ವೀಡಿಯೋ ಕಾನ್ಫರೆನ್ಸ್ ಮೂಲಕ ಶಂಕಸ್ಥಾಪನೆ ನೆರವೇರಿಸಿದರು.

ಅಪಸ್ವರದ ನಡುವೆ ಬಂಗಾರಪ್ಪ ಮೂರ್ತಿ ಪ್ರತಿಷ್ಠಾಪನೆಗೆ ಶಂಕುಸ್ಥಾಪನೆಅಪಸ್ವರದ ನಡುವೆ ಬಂಗಾರಪ್ಪ ಮೂರ್ತಿ ಪ್ರತಿಷ್ಠಾಪನೆಗೆ ಶಂಕುಸ್ಥಾಪನೆ

ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ.ಖಾದರ್ ಮಾತನಾಡಿ, ದಕ್ಷಿಣ ಕನ್ನಡ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಸಮರ್ಪಕ ರಸ್ತೆ ಸಂಪರ್ಕ ಅಗತ್ಯ. ಈ ನಿಟ್ಟಿನಲ್ಲಿ ಸಾಗರ ಮಾಲ ಯೋಜನೆಯ ಸೇತುವೆ, ಬೈಪಾಸ್ ರಸ್ತೆ, ಸೇತುವೆ ನಿರ್ಮಾಣ ಮಹತ್ವದ ಪಾತ್ರ ವಹಿಸುವ ಯೋಜನೆಗಳಾಗಿವೆ ಎಂದು ಹೇಳಿದರು.

Foundation stone laid for Kulai Fishing Jetty

ಈ ಸಂದರ್ಭದಲ್ಲಿ ಸಂಸದ ನಳಿನ್ ಕುಮಾರ್ ಕಟೀಲ್ ಅಭಿವೃದ್ಧಿ ಕಾಮಗಾರಿಗಳ ನಾಮಫಲಕ ಅನಾವರಣಗೊಳಿಸಿದರು. ನಂತರ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು ಈ ಯೋಜನೆ ರಾಜ್ಯ ಸರಕಾರದ ಸಹಕಾರದೊಂದಿಗೆ ಕೇಂದ್ರ ಸರಕಾರದ ಸಾಗರ ಮಾಲ ಯೋಜನೆಯ ಮೂಲಕ ಅನುಷ್ಠಾನಗೊಂಡಿದೆ. ಮಂಗಳೂರು ನಗರ ಬೈಪಾಸ್, ಕೂಳೂರು ಸೇತುವೆ, ಸಾಣೂರು-ಬಿಕರ್ನಕಟ್ಟೆಯವರೆಗೆ ಚತುಷ್ಪಥ ರಸ್ತೆ ನಿರ್ಮಾಣ ಹಾಗೂ ಕೂಳೂರು ಮೀನುಗಾರಿಕಾ ಜಟ್ಟಿಗೆ ಶಿಲಾನ್ಯಾಸ ಸೇರಿದಂತೆ ವಿವಿಧ ಯೋಜನೆಗಳಿಗೆ ಅನುದಾನ ಮಂಜೂರಾಗಿದೆ ಎಂದು ತಿಳಿಸಿದರು.

English summary
Foundation stone laid for Kulai Fishing Jetty and other projects under Sagara Mala project by union minister Nithin Gadkari through video conference in Mangaluru.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X