ಮಂಗಳೂರಿನಲ್ಲಿ ನಾಲ್ವರು ಸಿಸಿಬಿ ಪೊಲೀಸರಿಗೆ ಕೊರೊನಾ ಸೋಂಕು

ಮಂಗಳೂರು, ಜುಲೈ 3: ಕೇಂದ್ರ ಅಪರಾಧ ದಳದ ಮಂಗಳೂರು ವಿಭಾಗದ ನಾಲ್ವರು ಸಿಸಿಬಿ ಪೊಲೀಸರಲ್ಲಿ ಇಂದು ಕೊರೊನಾ ಸೋಂಕು ಇರುವುದು ದೃಢಪಟ್ಟಿದೆ. ಜಿಲ್ಲೆಯಲ್ಲಿ ಇದುವರೆಗೆ 18 ಮಂದಿ ಪೊಲೀಸರಲ್ಲಿ ಕೊರೊನಾ ವೈರಸ್ ಕಾಣಿಸಿಕೊಂಡಿದೆ.

ಜಿಲ್ಲೆಯ ನಾಲ್ವರು ಸಿಸಿಬಿ ಪೊಲೀಸರಲ್ಲಿ ಸೋಂಕು ದೃಢವಾಗಿದ್ದು, ಎಲ್ಲಾ ಪೊಲೀಸರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿರುವುದಾಗಿ ತಿಳಿದುಬಂದಿದೆ. ಆದರೆ ಜಿಲ್ಲಾಡಳಿತ ಈ ಕುರಿತು ಅಧೀಕೃತ ಮಾಹಿತಿ ನೀಡಿಲ್ಲ. ಈಚೆಗೆ ಪೊಲೀಸ್ ಸಿಬ್ಬಂದಿಯಲ್ಲಿ ಕೊರೊನಾ ಸೋಂಕು ಹೆಚ್ಚಾಗಿ ಕಾಣಿಸಿಕೊಳ್ಳುತ್ತಿರುವುದು ಆತಂಕ ಉಂಟು ಮಾಡಿದೆ. ಕೊರೊನಾ ವಾರಿಯರ್ಸ್ ಗಳಾದ ಆರೋಗ್ಯ ಇಲಾಖೆ ಸಿಬ್ಬಂದಿ, ಪೊಲೀಸರು, ವೈದ್ಯರಲ್ಲೇ ಸೋಂಕಿನ ಪ್ರಮಾಣ ಹೆಚ್ಚುತ್ತಿದೆ.

ಕೊರೊನಾ ಸೋಂಕಿನ ವಿರುದ್ಧ ಹೋರಾಡುತ್ತಿರುವ ಪೊಲೀಸ್ ಸಿಬ್ಬಂದಿಗೆ ಮತ್ತು ಅವರ ಕುಟುಂಬಕ್ಕೆ ರಕ್ಷಣೆ ನೀಡಲಾಗಿದೆ ಎಂದಿದ್ದಾರೆ ನಗರ ಪೊಲೀಸ್ ಆಯುಕ್ತ ವಿಕಾಸ್ ಕುಮಾರ್.

Four CCB Police Tested Coronavirus Positive Today In Mangaluru

ನಿನ್ನೆ ಜಿಲ್ಲೆಯಲ್ಲಿ 90 ಜನರಲ್ಲಿ ಸೋಂಕು ಪತ್ತೆಯಾಗಿತ್ತು. ಜಿಲ್ಲೆಯ ಬಿಜೆಪಿ ಶಾಸಕರೊಬ್ಬರಲ್ಲೂ ಸೋಂಕು ಇರುವುದಾಗಿ ತಿಳಿದುಬಂದಿತ್ತು. ಇದೀಗ ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ 923ಕ್ಕೆ ಏರಿಕೆಯಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+