ಮಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಮಂಗಳೂರಿನಲ್ಲಿ ನಾಲ್ವರು ಸಿಸಿಬಿ ಪೊಲೀಸರಿಗೆ ಕೊರೊನಾ ಸೋಂಕು

By ಮಂಗಳೂರು ಪ್ರತಿನಿಧಿ
|
Google Oneindia Kannada News

ಮಂಗಳೂರು, ಜುಲೈ 3: ಕೇಂದ್ರ ಅಪರಾಧ ದಳದ ಮಂಗಳೂರು ವಿಭಾಗದ ನಾಲ್ವರು ಸಿಸಿಬಿ ಪೊಲೀಸರಲ್ಲಿ ಇಂದು ಕೊರೊನಾ ಸೋಂಕು ಇರುವುದು ದೃಢಪಟ್ಟಿದೆ. ಜಿಲ್ಲೆಯಲ್ಲಿ ಇದುವರೆಗೆ 18 ಮಂದಿ ಪೊಲೀಸರಲ್ಲಿ ಕೊರೊನಾ ವೈರಸ್ ಕಾಣಿಸಿಕೊಂಡಿದೆ.

ಜಿಲ್ಲೆಯ ನಾಲ್ವರು ಸಿಸಿಬಿ ಪೊಲೀಸರಲ್ಲಿ ಸೋಂಕು ದೃಢವಾಗಿದ್ದು, ಎಲ್ಲಾ ಪೊಲೀಸರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿರುವುದಾಗಿ ತಿಳಿದುಬಂದಿದೆ. ಆದರೆ ಜಿಲ್ಲಾಡಳಿತ ಈ ಕುರಿತು ಅಧೀಕೃತ ಮಾಹಿತಿ ನೀಡಿಲ್ಲ. ಈಚೆಗೆ ಪೊಲೀಸ್ ಸಿಬ್ಬಂದಿಯಲ್ಲಿ ಕೊರೊನಾ ಸೋಂಕು ಹೆಚ್ಚಾಗಿ ಕಾಣಿಸಿಕೊಳ್ಳುತ್ತಿರುವುದು ಆತಂಕ ಉಂಟು ಮಾಡಿದೆ. ಕೊರೊನಾ ವಾರಿಯರ್ಸ್ ಗಳಾದ ಆರೋಗ್ಯ ಇಲಾಖೆ ಸಿಬ್ಬಂದಿ, ಪೊಲೀಸರು, ವೈದ್ಯರಲ್ಲೇ ಸೋಂಕಿನ ಪ್ರಮಾಣ ಹೆಚ್ಚುತ್ತಿದೆ.

ದ.ಕ. ಜಿಲ್ಲೆಯಲ್ಲಿ ಮತ್ತೂ ಹೆಚ್ಚಾಗಬಹುದು ವೈರಸ್; ಖಾಸಗಿ ಆಸ್ಪತ್ರೆಗಳಲ್ಲಿ ಬೆಡ್ ಕಾದಿರಿಸಲು ನಳಿನ್ ಸೂಚನೆದ.ಕ. ಜಿಲ್ಲೆಯಲ್ಲಿ ಮತ್ತೂ ಹೆಚ್ಚಾಗಬಹುದು ವೈರಸ್; ಖಾಸಗಿ ಆಸ್ಪತ್ರೆಗಳಲ್ಲಿ ಬೆಡ್ ಕಾದಿರಿಸಲು ನಳಿನ್ ಸೂಚನೆ

ಕೊರೊನಾ ಸೋಂಕಿನ ವಿರುದ್ಧ ಹೋರಾಡುತ್ತಿರುವ ಪೊಲೀಸ್ ಸಿಬ್ಬಂದಿಗೆ ಮತ್ತು ಅವರ ಕುಟುಂಬಕ್ಕೆ ರಕ್ಷಣೆ ನೀಡಲಾಗಿದೆ ಎಂದಿದ್ದಾರೆ ನಗರ ಪೊಲೀಸ್ ಆಯುಕ್ತ ವಿಕಾಸ್ ಕುಮಾರ್.

Four CCB Police Tested Coronavirus Positive Today In Mangaluru

ನಿನ್ನೆ ಜಿಲ್ಲೆಯಲ್ಲಿ 90 ಜನರಲ್ಲಿ ಸೋಂಕು ಪತ್ತೆಯಾಗಿತ್ತು. ಜಿಲ್ಲೆಯ ಬಿಜೆಪಿ ಶಾಸಕರೊಬ್ಬರಲ್ಲೂ ಸೋಂಕು ಇರುವುದಾಗಿ ತಿಳಿದುಬಂದಿತ್ತು. ಇದೀಗ ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ 923ಕ್ಕೆ ಏರಿಕೆಯಾಗಿದೆ.

English summary
Four police officers of the Central Criminal Investigation Department of Mangaluru confirmed coronavirus positive today,
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X