ಬಂಟ್ವಾಳ ಟೋಲ್ ಬಳಿ ಕಾರು-ಟ್ಯಾಂಕರ್ ನಡುವೆ ಅಪಘಾತ; ನಾಲ್ವರ ಸಾವು
ಮಂಗಳೂರು, ಜುಲೈ 19: ಬ್ರಹ್ಮರಕೋಟ್ಲು ಟೋಲ್ ಗೇಟ್ ಬಳಿ ಟವೇರಾ ಕಾರ್ ಮತ್ತು ಟ್ಯಾಂಕರ್ ನಡುವೆ ಸಂಭವಿಸಿದ ಅಪಘಾತದಲ್ಲಿ ಕಾರಿನಲ್ಲಿದ್ದ ನಾಲ್ವರು ಮೃತಪಟ್ಟಿದ್ದು, ಮೂವರ ಸ್ಥಿತಿ ಗಂಭೀರವಾಗಿದೆ.
ಬಂಟ್ವಾಳ ಬಳಿ ಇರುವ ರಾಷ್ಟ್ರೀಯ ಹೆದ್ದಾರಿ 75ರ ಬ್ರಹ್ಮರಕೋಟ್ಲು ಟೋಲ್ ಗೇಟ್ ಬಳಿ ಅಪಘಾತ ಸಂಭವಿಸಿದೆ. ಬೆಂಗಳೂರು ಕಡೆಯಿಂದ ಮಂಗಳೂರಿಗೆ ಬರುತ್ತಿದ್ದ ಕಾರು ಹಾಗೂ ಮಂಗಳೂರು ಕಡೆಯಿಂದ ಬರುತ್ತಿದ್ದ ಟ್ಯಾಂಕರ್ ನಡುವೆ ಡಿಕ್ಕಿಯಾಗಿದೆ. ಕಾರಿನಲ್ಲಿ ಭಟ್ಕಳ ಮೂಲದ ಕುಟುಂಬ ಪ್ರಯಾಣಿಸುತ್ತಿತ್ತು.

ಈ ಅಪಘಾತದಿಂದಾಗಿ ಕೆಲಕಾಲ ಸಂಚಾರ ಅಸ್ತವ್ಯಸ್ತವಾಗಿತ್ತು. ಸ್ಥಳಕ್ಕೆ ಬಂಟ್ವಾಳ ಸಂಚಾರಿ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ.












Click it and Unblock the Notifications