ಮಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಬುರ್ಖಾ ಧರಿಸಿ ನೃತ್ಯ: ನಾಲ್ವರು ಮುಸ್ಲಿಂ ವಿದ್ಯಾರ್ಥಿಗಳು ಅಮಾನತು

By ಮಂಗಳೂರು ಪ್ರತಿನಿಧಿ
|
Google Oneindia Kannada News

ಮಂಗಳೂರು ಡಿಸೆಂಬರ್‌ 9: ಬುರ್ಖಾ ಧರಿಸಿ ನೃತ್ಯ ಪ್ರದರ್ಶನ ಮಾಡಿದ ಆರೋಪದ ಮೇಲೆ ನಾಲ್ವರು ಮುಸ್ಲಿಂ ವಿದ್ಯಾರ್ಥಿಗಳನ್ನು ಅಮಾನತು ಮಾಡಿದ ಘಟನೆ ಮಂಗಳೂರಿನಲ್ಲಿ ನಡೆದಿದೆ.

ವಾಮಂಜೂರಿನ ಖಾಸಗಿ ಕಾಲೇಜಿನಲ್ಲಿ ಬುರ್ಖಾ ಧರಿಸಿ ವೇದಿಕೆಯಲ್ಲಿ ನೃತ್ಯ ಮಾಡಿರುವ ವಿಡಿಯೋ ವೈರಲ್ ಆಗಿ ಭಾರಿ ಆಕ್ಷೇಪ ವ್ಯಕ್ತವಾಗಿತ್ತು. ಈ ಹಿನ್ನೆಲೆಯಲ್ಲಿ ನೃತ್ಯ ಮಾಡಿದ ನಾಲ್ವರು ವಿದ್ಯಾರ್ಥಿಗಳನ್ನು ಅಮಾನತು ಮಾಡಲಾಗಿದೆ.

ವಾಮಂಜೂರಿನ ಖಾಸಗಿ ಕಾಲೇಜಿನಲ್ಲಿ ಬುಧವಾರ ಸಂಜೆ ವಿದ್ಯಾರ್ಥಿ ಘಟಕದ ಉದ್ಘಾಟನಾ ಕಾರ್ಯಕ್ರಮ ನಡೆದಿತ್ತು. ಈ ಕಾರ್ಯಕ್ರಮದ ಬಳಿಕ ಬುರ್ಖಾ ಧರಿಸಿ ನಾಲ್ವರು ವೇದಿಕೆಯಲ್ಲಿ ಬಾಲಿವುಡ್ ಹಾಡಿಗೆ ನೃತ್ಯ ಮಾಡಿದ್ದರು. ಇದರ ವಿಡಿಯೋ ಚಿತ್ರೀಕರಣ ಮಾಡಲಾಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು. ಈ ಬಗ್ಗೆ ಭಾರಿ ಆಕ್ಷೇಪ ವ್ಯಕ್ತವಾಗಿತ್ತು. ಇದನ್ನು ಗಂಭೀರವಾಗಿ ಪರಿಗಣಿಸಿರುವ ಕಾಲೇಜು ಆಡಳಿತ ಮಂಡಳಿ ಆಂತರಿಕ ವಿಚಾರಣೆಯ ಬಳಿಕ ನಾಲ್ವರು ವಿದ್ಯಾರ್ಥಿಗಳನ್ನು ಅಮಾನತು ಮಾಡಿದೆ.

Four Students Suspended For Burqa Dance

ಈ ವಿದ್ಯಾರ್ಥಿಗಳು ಕಾಲೇಜಿನ ಅಧಿಕೃತ ಕಾರ್ಯಕ್ರಮದ ಬಳಿಕ ನೃತ್ಯ ಮಾಡಿದ್ದಾರೆ‌. ಕಾಲೇಜು ತನ್ನ ಆವರಣದಲ್ಲಿ ಯಾವುದೇ ರೀತಿಯ ಆಕ್ಷೇಪಾರ್ಹ ಹಾಗೂ ಸಮುದಾಯಗಳ ನಡುವೆ ಸೌಹಾರ್ದತೆಗೆ ಧಕ್ಕೆ ತರುವ ಕಾರ್ಯವನ್ನು ಬೆಂಬಲಿಸುವುದಿಲ್ಲ ಎಂದು ಕಾಲೇಜು ಆಡಳಿತ ಮಂಡಳಿ ತಿಳಿಸಿದೆ.

ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಕಾಲೇಜಿನ ಪ್ರಾಂಶುಪಾಲ ಡಾ.ಸುಧೀರ್," ಕಾಲೇಜಿನ ಅಧೀಕೃತ ಕಾರ್ಯಕ್ರಮದ ಬಳಿಕ ವಿದ್ಯಾರ್ಥಿಗಳು ನೃತ್ಯ ಮಾಡಿದ್ದಾರೆ. ಈ ನೃತ್ಯ ಕಾಲೇಜು ಕಾರ್ಯಕ್ರಮದ ಭಾಗವಾಗಿರಲಿಲ್ಲ. ಕಾಲೇಜು ಆವರಣದೊಳಗೆ ಯಾವ ಸಮುದಾಯಕ್ಕೂ ನೋವುಂಟು ಮಾಡುವ ಚಟುವಟಿಕೆಗಳಿಗೆ ಅವಕಾಶ ಇಲ್ಲ. ವಿದ್ಯಾರ್ಥಿಗಳು ಮಾಡಿದ ಡ್ಯಾನ್ಸ್ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿ ಸಾಕಷ್ಟು ಜನ ವಿರೋಧ ವ್ಯಕ್ತಪಡಿಸಿದ್ದಾರೆ. ಈ ಹಿನ್ನಲೆಯಲ್ಲಿ ಅವರ ವಿರುದ್ಧ ಶಿಸ್ತು ಕ್ರಮ ಕೈಗೊಂಡು ಕಾಲೇಜಿನಿಂದ ಅಮಾನತು ಮಾಡಲಾಗಿದೆ" ಎಂದು ಹೇಳಿದ್ದಾರೆ.

English summary
Mangaluru Vamanjoor private college Four students suspended for burqa dance.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X