ಮಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಪೀಟರ್ ಸಾಲ್ಡಾನಾ ಮಂಗಳೂರು ಧರ್ಮಪ್ರಾಂತ್ಯದ ನೂತನ ಬಿಷಪ್

|
Google Oneindia Kannada News

ಮಂಗಳೂರು ಜುಲೈ 4: ಮಂಗಳೂರು ಕ್ರೈಸ್ತ ಧರ್ಮಪ್ರಾಂತ್ಯದ 14 ನೇ ಧರ್ಮಾದ್ಯಕ್ಷರಾಗಿ ಪೀಟರ್ ಪಾವ್ಲ್ ಸಾಲ್ಡಾನಾ ಅವರನ್ನು ನೇಮಕಗೊಳಿಸಲಾಗಿದೆ. ಈ ಕುರಿತು ವ್ಯಾಟಿಕನ್ ನಿಂದ ಕ್ರೈಸ್ತರ ಜಗದ್ಗುರು ಪೋಪ್ ಫ್ರಾನ್ಸಿಸ್ ಅವರು ಆದೇಶ ಹೊರಡಿಸಿದ್ದಾರೆ.

ಪೋಪ್ ಅವರ ಆದೇಶವನ್ನು ಪ್ರಸ್ತುತ ಮಂಗಳೂರು ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷರಾದ ಡಾ. ಅಲೋಶಿಯಸ್ ಪಾವ್ಲ್ ಡಿಸೋಜಾ ಮಂಗಳೂರಿನಲ್ಲಿ ಮಂಗಳವಾರ ಅಧಿಕೃತವಾಗಿ ಘೋಷಣೆ ಮಾಡಿದ್ದಾರೆ.

ಮಂಗಳೂರು ಬಿಷಪ್‌ ವಿರುದ್ಧ ನೂರಾರು ಎಕರೆ ಭೂ ಒತ್ತುವರಿ ಆರೋಪ ಮಂಗಳೂರು ಬಿಷಪ್‌ ವಿರುದ್ಧ ನೂರಾರು ಎಕರೆ ಭೂ ಒತ್ತುವರಿ ಆರೋಪ

ಡಾ. ಪೀಟರ್ ಪಾವ್ಲ್ ಸಾಲ್ಡಾನಾ ಅವರು ಮಂಗಳೂರು ಧರ್ಮಪ್ರಾಂತ್ಯದ 14ನೇ ನೂತನ ಧರ್ಮಾಧ್ಯಕ್ಷರಾಗಿ ನೇಮಕಗೊಂಡಿದ್ದಾರೆ. ಮಂಗಳೂರು ಧರ್ಮಪ್ರಾಂತ್ಯದ ವ್ಯಾಪ್ತಿಯಲ್ಲಿ 124 ಚರ್ಚ್ ಗಳಿದ್ದು, ಸುಮಾರು 2,48,860 ಕ್ಯಾಥೋಲಿಕ್ ಕ್ರೈಸ್ತರನ್ನು ಧರ್ಮಪ್ರಾಂತ್ಯ ಹೊಂದಿದೆ.

Fr. Peter Paul Saldanha new Bishop of Mangaluru Diocese

ನೂತನ ಮಂಗಳೂರು ಬಿಷಪ್ ಪೀಟರ್ ಪಾವ್ಲ್ ಸಾಲ್ಡಾನಾ ಮೂಲತಃ ಮಂಗಳೂರು ಹೊರವಲಯದ ಕಿರೆಂನವರು. ಅವರು ಪ್ರಸ್ತುತ ರೋಮ್ ನ ಫೊಂತಿಫಿಕಾಲ್ ಉರ್ಬನ್ ವಿಶ್ವವಿದ್ಯಾನಿಲಯದಲ್ಲಿ ದೇವತಾಶಾಸ್ತ್ರದಲ್ಲಿ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ.

ಪಾದ್ರಿಗಳಿಂದ ಅತ್ಯಾಚಾರಕ್ಕೊಳಗಾದ ಮಹಿಳೆಯ ಕರುಣಾಜನಕ ಕಥೆಪಾದ್ರಿಗಳಿಂದ ಅತ್ಯಾಚಾರಕ್ಕೊಳಗಾದ ಮಹಿಳೆಯ ಕರುಣಾಜನಕ ಕಥೆ

1991ರ ಮೇ 06ರಂದು ಗುರು ದೀಕ್ಷೆ ಪಡೆದ ಪೀಟರ್ ಪಾವ್ಲ್ ಸಾಲ್ಡಾನಾ ಅವರು ನಂತರ ಉಡುಪಿ ಜಿಲ್ಲೆಯ ಮೂಡುಬೆಳ್ಳೆ ಹಾಗೂ ಮಂಗಳೂರಿನ ಮಿಲಾಗ್ರಿಸ್ ಹಾಗೂ ವಿಟ್ಲ ಚರ್ಚ್‌ಗಳಲ್ಲಿ ಧಾರ್ಮಿಕ ಗುರುಗಳಾಗಿ ಸೇವೆ ಸಲ್ಲಿಸಿದ್ದರು. ಬಳಿಕ ಉನ್ನತ ವ್ಯಾಸಂಗಕ್ಕಾಗಿ ರೋಮ್‌ಗೆ ತೆರಳಿದ ಇವರು ಫೊಂತಿಫಿಕಾಲ್ ಉರ್ಬನ್ ವಿಶ್ವವಿದ್ಯಾನಿಲಯದಿಂದ ಡಾಕ್ಟರೇಟ್ ಪದವಿ ಪಡೆದರು. ನಂತರ ಅಲ್ಲಿಯೇ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ.

ಚರ್ಚ್ ಲೈಂಗಿಕ ಹಗರಣದಲ್ಲಿ ನಾಲ್ವರು ಪಾದ್ರಿಗಳ ವಿರುದ್ಧ ಪ್ರಕರಣ ದಾಖಲುಚರ್ಚ್ ಲೈಂಗಿಕ ಹಗರಣದಲ್ಲಿ ನಾಲ್ವರು ಪಾದ್ರಿಗಳ ವಿರುದ್ಧ ಪ್ರಕರಣ ದಾಖಲು

ಡಾ. ಅಲೋಶಿಯಸ್ ಪಾವ್ಲ್ ಡಿಸೋಜ ಇವರು 22 ವರ್ಷ ಸೇವೆ ಸಲ್ಲಿಸಿ ಎರಡು ವರ್ಷಗಳ ಮೊದಲು ನಿವೃತ್ತರಾಗಿದ್ದರು. ನೂತನ ಬಿಷಪ್ ಪೀಟರ್ ಪವ್ಲ್ ಸಾಲ್ಡಾನಾ ಅವರು ಅಧಿಕಾರ ಸ್ವೀಕರಿಸುವವರೆಗೆ ಡಾ. ಅಲೋಶಿಯಸ್ ಪಾವ್ಲ್ ಡಿಸೋಜ ಬಿಷಪ್ ಹುದ್ದೆಯಲ್ಲಿ ಮುಂದುವರಿಯಲಿದ್ದಾರೆ.

English summary
Pope Francis has appointed Fr. Peter Paul Saldanha as Bishop of Mangaluru Diocese. This announcement was made on Tuesday at Mangaluru Bishop's house.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X