ಸಂತ್ರಸ್ತರ ಮಕ್ಕಳಿಗೆ ಉಚಿತ ಶಿಕ್ಷಣ ನೀಡಲಿದೆ ಪುತ್ತೂರಿನ ವಿದ್ಯಾವರ್ಧಕ ಸಂಘ

ಮಂಗಳೂರು, ಆಗಸ್ಟ್ 24: ಕೊಡಗಿನಲ್ಲಿ ಸಂಭವಿಸಿದ ಜಲಪ್ರಳಯಕ್ಕೆ ಸಿಲುಕಿ ಸಂತ್ರಸ್ತರಾದ ಕುಟುಂಬಗಳ ಮಕ್ಕಳಿಗೆ ಶಿಕ್ಷಣಕ್ಕೆ ತೊಂದರೆಯಾದಲ್ಲಿ ಒಂದು ವರ್ಷ ಉಚಿತ ಶಿಕ್ಷಣ ನೀಡಲು ಪುತ್ತೂರಿನ ವಿವೇಕಾನಂದ ವಿದ್ಯಾವರ್ಧಕ ಸಂಘ ಮುಂದಾಗಿದೆ.

ಸಂಘದ ಕಾರ್ಯದರ್ಶಿ ಕೃಷ್ಣ ಭಟ್ ಈ ಬಗ್ಗೆ ಮಾಹಿತಿ ನೀಡಿದ್ದು ಜಲಪ್ರಳಯದಲ್ಲಿ ಸಂತ್ರಸ್ತರಾದ ಕುಟುಂಬದ ಮಕ್ಕಳಿಗೆ ವಿದ್ಯಾಭ್ಯಾಸವನ್ನು ಮುಂದುವರಿಸಲು ತೊಂದರೆಯಾದಲ್ಲಿ ವಿದ್ಯಾವರ್ಧಕ ಸಂಘವನ್ನು ಸಂಪರ್ಕಿಸಿದರೆ ಅಂಥಹ ಮಕ್ಕಳಿಗೆ ಉಚಿತ ಪ್ರವೇಶದ ಜೊತೆಗೆ ಒಂದು ವರ್ಷದ ಉಚಿತ ಶಿಕ್ಷಣದ ಜೊತೆಗೆ ವಸತಿಯನ್ನೂ ಕಲ್ಪಿಸಲಾಗುವುದು ಎಂದು ತಿಳಿಸಿದ್ದಾರೆ .

Free education to children of Kodagu victims

ವಿದ್ಯಾವರ್ಧಕ ಸಂಘದ ಅಡಿಯಲ್ಲಿ ಎಲ್ ಕೆ ಜಿ ಯಿಂದ ಹಿಡಿದು ಇಂಜಿನಿಯರಿಂಗ್ ವರೆಗಿನ ಶಿಕ್ಷಣ ಸಂಸ್ಥೆಗಳಿವೆ. 5 ನೇ ಕ್ಲಾಸ್ ನಿಂದ ಹಿಡಿದು ಇಂಜಿನಿಯರಿಂಗ್ ವರೆಗಿನ ಶಿಕ್ಷಣಕ್ಕೆ ಅಗತ್ಯವಿರುವ ವಿದ್ಯಾರ್ಥಿಗಳಿಗೆ ಈ ಸೌಲಭ್ಯವನ್ನು ನೀಡಲು ವಿದ್ಯಾವರ್ಧಕ ಸಂಘ ನಿರ್ಧರಿಸಿದೆ.

Free education to children of Kodagu victims

ಸಂತ್ರಸ್ತರ ಮಕ್ಕಳಿಗೆ ಒಂದು ವರ್ಷ ಉಚಿತ ಶಿಕ್ಷಣ ಕೊಡುವ ಜೊತೆಗೆ ವಿದ್ಯಾರ್ಥಿಯ ಆರ್ಥಿಕ ಸ್ಥಿತಿ ಸುಧಾರಿಸದೇ ಹೋದಲ್ಲಿ ಉಚಿತ ಶಿಕ್ಷಣ ಸೌಲಭ್ಯವನ್ನು ಮುಂದುವರಿಸಲೂ ಸಂಘ ನಿರ್ಧರಿಸಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+