ಮಂಗಳೂರು ಬೀಚ್‌ನಲ್ಲಿ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ: 6 ಯುವಕರ ಬಂಧನ
ಮಂಗಳೂರು ನವೆಂಬರ್ 27 :ಕಡಲಕಿನಾರೆಯಲ್ಲಿ ಯುವತಿಯೊಬ್ಬಳ ಮೇಲೆ ದುಷ್ಕರ್ಮಿಗಳ ತಂಡ ಸಾಮೂಹಿಕ ಅತ್ಯಾಚಾರ ನಡೆಸಿದ ಘಟನೆ ಮಂಗಳೂರಿನಲ್ಲಿ ತಡವಾಗಿ ಬೆಳಕಿಗೆ ಬಂದಿದೆ.
ಪ್ರೇಮಿಯೊಂದಿಗೆ ಸುತ್ತಾಡಲು ಬಂದಿದ್ದ ಯುವತಿಯ ಮೇಲೆ ಏಳು ಮಂದಿ ಕಾಮುಕರು ಅತ್ಯಾಚಾರ ನಡೆಸಿದ ಘಟನೆ ಮಂಗಳೂರು ಹೊರವಲಯದ ತೋಟ ಬೆಂಗ್ರೆ ಬೀಚ್ ನಲ್ಲಿ ನಡೆದಿದೆ.
ವಾರದ ಹಿಂದೆ ಬಂಟ್ವಾಳ ಮೂಲದ ಪ್ರೇಮಿಗಳು ಮಂಗಳೂರಿನ ತೋಟ ಬೆಂಗ್ರೆ ಬೀಚ್ ಗೆ ಬಂದಿದ್ದರು ಎಂದು ಹೇಳಲಾಗಿದೆ. ಈ ಇಬ್ಬರು ಪ್ರೇಮಿಗಳು ಬೀಚ್ ನಲ್ಲಿ ಸುತ್ತಾಡುತ್ತಿದ್ದ ಸಂದರ್ಭ ದಲ್ಲಿ ಅಲ್ಲೆ ಮಾದಕ ವಸ್ತು ಸೇವಿಸುತ್ತಿದ್ದ 7 ಮಂದಿ ಯುವಕರ ಗುಂಪೊಂದು ಯುವತಿ ಜೊತೆಗೆ ಇದ್ದ ಯುವಕನ ಮೇಲೆ ದಾಳಿ ನಡೆಸಿದೆ.

ಯುವಕನ ಮೇಲೆ ಹಲ್ಲೆ ನಡೆಸಿದ ನಂತರ ಯುವತಿಯ ಮೇಲೆ 7 ಮಂದಿ ಯುವಕರು ಸೇರಿ ಅತ್ಯಾಚಾರ ಎಸಗಿದ್ದಾರೆ ಎಂದು ಆರೋಪಿಸಲಾಗಿದೆ.
ಈ ಸಾಮೂಹಿಕ ಅತ್ಯಾಚಾರ ಘಟನೆಗೆ ಸಂಬಂಧಿಸಿದಂತೆ ಪಣಂಬೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ತೋಟ ಬೆಂಗ್ರೆಯಲ್ಲಿ ಯುವತಿಯ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಪಣಂಬೂರು ಠಾಣೆಯ ಪೊಲೀಸರು 6 ಮಂದಿಯನ್ನು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇನ್ನಷ್ಟು ಆರೋಪಿಗಳನ್ನು ಬಂಧಿಸಲು ಪೊಲೀಸರು ಬಲೆ ಬೀಸಿದ್ದಾರೆ.
ನವೆಂಬರ್ 18ರಂದು ಸಾಮೂಹಿಕ ಅತ್ಯಾಚಾರ ಘಟನೆ ನಡೆದಿದೆ.
ಆರೋಪಿಗಳ ವಿರುದ್ಧ ಸೆಕ್ಷನ್ 376ಆ, 323, 504, 506ರಡಿ ಪ್ರಕರಣ ದಾಖಲಿಸಲಾಗಿದ್ದು, ಹೆಚ್ಚಿನ ವಿಚಾರಣೆಗೊಳಪಡಿಸಲಾಗಿದೆ.












Click it and Unblock the Notifications