ಮಂಗಳೂರಿಗೆ ಗಾಂಜಾ ಸಾಗಾಟ ಮಾಡುತ್ತಿದ್ದ ಮೂವರ ಬಂಧನ; 4 ಕೆ.ಜಿ ಗಾಂಜಾ ವಶ
ಮಂಗಳೂರು, ಜುಲೈ 27: ಮಂಗಳೂರು ನಗರಕ್ಕೆ ಗಾಂಜಾ ಸಾಗಾಟ ಮಾಡುತ್ತಿದ್ದ ಮೂವರು ಆರೋಪಿಗಳನ್ನು ಮಂಗಳೂರು ದಕ್ಷಿಣ ರೌಡಿ ನಿಗ್ರಹ ದಳದ ಪೊಲೀಸರು ನಗರ ಹೊರವಲಯದ ತೊಕ್ಕೊಟ್ಟು ಬಳಿ ಬಂಧಿಸಿದ್ದಾರೆ.
ಬಂಧಿತರನ್ನು ವಾಮಂಜೂರು ನಿವಾಸಿ ಮುಹಮ್ಮದ್ ಮುಸ್ತಫಾ (21), ಉಳಾಯಿಬೆಟ್ಟು ನಿವಾಸಿ ಹಸನ್ (20), ಮೂಡುಶೆಡ್ಡೆ ಶಿವನಗರ ನಿವಾಸಿ ಫೈಝಲ್ (36) ಎಂದು ಗುರುತಿಸಲಾಗಿದೆ. ಗಾಂಜಾ ಮಾರಾಟ ಮಾಡುತ್ತಿರುವ ಬಗ್ಗೆ ಬಂದ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಪೊಲೀಸರ ತಂಡ ಆರೋಪಿಗಳನ್ನು ಬಂಧಿಸಿ ಅವರಿಂದ 4 ಕೆ.ಜಿ. ಗಾಂಜಾ, ದ್ವಿಚಕ್ರ ವಾಹನವನ್ನು ವಶಪಡಿಸಿಕೊಂಡಿದ್ದಾರೆ.

ಬಂಧಿತ ಆರೋಪಿಗಳ ಪೈಕಿ ಮುಸ್ತಫಾ ವಿರುದ್ಧ ಮಂಗಳೂರು ಗ್ರಾಮಾಂತರ ಠಾಣೆಯಲ್ಲಿ ಕೊಲೆ, ಕೊಲೆ ಯತ್ನ ಪ್ರಕರಣ ಸೇರಿದಂತೆ ಮೂರು ಪ್ರಕರಣಗಳು ದಾಖಲಾಗಿವೆ. ಆರೋಪಿ ಫೈಝಲ್ ವಿರುದ್ಧ ಕೊಲೆ, ಕಳ್ಳತನ ಮತ್ತು ಗಾಂಜಾ ಮಾರಾಟ ಪ್ರಕರಣ ದಾಖಲಾಗಿದೆ. ಗಾಂಜಾ ಸರಬರಾಜು ಮಾಡುವ ತಂಡದಲ್ಲಿ ಇನ್ನೂ ಕೆಲವರು ಶಾಮೀಲಾಗಿದ್ದು, ಅವರ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ.












Click it and Unblock the Notifications