ಗ್ಯಾಸ್ ಟ್ಯಾಂಕರ್ ನಿಂದ ಅನಿಲ ಸೋರಿಕೆ; ಹೆದ್ದಾರಿಯಲ್ಲಿ ವಾಹನ ಸಂಚಾರ ಸ್ಥಗಿತ
ಗ್ಯಾಸ್ ಟ್ಯಾಂಕರ್ ನಿಂದ ಅನಿಲ ಸೋರಿಕೆ; ಹೆದ್ದಾರಿಯಲ್ಲಿ ವಾಹನ ಸಂಚಾರ ಸ್ಥಗಿತ
ಮಂಗಳೂರು, ನವೆಂಬರ್ 4: ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಚಲಿಸುತ್ತಿದ್ದ ಗ್ಯಾಸ್ ಟ್ಯಾಂಕರ್ ನಿಂದ ಭಾರೀ ಪ್ರಮಾಣ ಅನಿಲ ಸೋರಿಕೆಯಾಗಿದೆ.
ಉದನೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಉರುಳಿದ ಗ್ಯಾಸ್ ಟ್ಯಾಂಕರ್, ವಾಹನ ಸಂಚಾರ ಸ್ಥಗಿತ
ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಉಪ್ಪಿನಂಗಡಿ ಸಮೀಪದ ಕರವೇಲು ಬಳಿ ಗ್ಯಾಸ್ ಸಿಲಿಂಡರ್ ನ ಕ್ಯಾಪ್ ಏಕಾಏಕಿ ತೆರೆದುಕೊಂಡಿದ್ದರಿಂದ ಅನಿಲ ಸೋರಿಕೆಯಾಗಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ಅಧಿಕಾರಿಗಳು ಹೆದ್ದಾರಿಯಲ್ಲಿ ವಾಹನ ಸಂಚಾರ ಸ್ಥಗಿತಗೊಳಿಸಿದ್ದಾರೆ.
ಸ್ಥಳಕ್ಕೆ ಎಂಆರ್ ಪಿಎಲ್ ತಜ್ಞರು ಆಗಮಿಸಿ ಅನಿಲ ಸೋರಿಕೆ ತಡೆದಿದ್ದಾರೆ. ಗ್ಯಾಸ್ ಟ್ಯಾಂಕರ್ ಮಂಗಳೂರಿನಿಂದ ಬೆಂಗಳೂರಿಗೆ ಹೋಗುತ್ತಿತ್ತು. ಅನಿಲ ಹೇಗೆ ಸೋರಿಕೆ ಆಗಿದೆ ಎಂಬುದರ ಬಗ್ಗೆ ಅಧಿಕಾರಿಗಳು ತನಿಖೆ ನಡೆಸುತ್ತಿದ್ದು, ಚಾಲಕನ ಹೇಳಿಕೆಯನ್ನು ದಾಖಲಿಸಿಕೊಂಡಿದ್ದಾರೆ.