ಉದನೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಉರುಳಿದ ಗ್ಯಾಸ್ ಟ್ಯಾಂಕರ್, ವಾಹನ ಸಂಚಾರ ಸ್ಥಗಿತ
ಮಂಗಳೂರು, ಆಗಸ್ಟ್ 2: ರಾಷ್ಟ್ರೀಯ 75ರ ಉದನೆ ಬಳಿ ಗ್ಯಾಸ್ ಟ್ಯಾಂಕರ್ ಪಲ್ಟಿಯಾಗಿದ್ದು, ವಾಹನ ಸಂಚಾರ ಸ್ಥಗಿತಗೊಂಡ ಘಟನೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆದಿದೆ.
ಸಿದ್ಧಾರ್ಥ್ ಪ್ರಕರಣದ ತನಿಖೆ 4 ದಿನಗಳಲ್ಲಿ ಪೂರ್ಣಗೊಳಿಸುವಂತೆ ಸೂಚನೆ
ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಉದನೆ ಸಮೀಪದ ಎಂಚಿರಾ ಎಂಬಲ್ಲಿ ಗ್ಯಾಸ್ ಟ್ಯಾಂಕರ್ ಪಲ್ಟಿಯಾಗಿದೆ. ಗ್ಯಾಸ್ ಪಲ್ಟಿಯಾದ ರಭಸಕ್ಕೆ ಟ್ಯಾಂಕರ್ ನಿಂದ ಅಲ್ಪ ಪ್ರಮಾಣದ ಅನಿಲ ಸೋರಿಕೆಯಾಗಿದೆ.
ಸ್ಥಳಕ್ಕೆ ಉಪ್ಪಿನಂಗಡಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಗ್ಯಾಸ್ ಟ್ಯಾಂಕರ್ ನಿಂದ ಗ್ಯಾಸ್ ಸೋರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಆಸುಪಾಸಿನ ಪ್ರದೇಶಗಳಲ್ಲಿ ಸುರಕ್ಷತಾ ಕ್ರಮಗಳನ್ನ ಕೈಗೊಳ್ಳಲಾಗುತ್ತಿದೆ. ಹೆದ್ದಾರಿಯಲ್ಲಿ ವಾಹನ ಸಂಚಾರ ಸ್ಥಗಿತಗೊಳಿಸಿದ್ದು, ಈ ರಸ್ತೆಯಲ್ಲಿ ಸಂಚರಿಸುವ ವಾಹನಗಳಿಗೆ ಪರ್ಯಾಯ ವ್ಯವಸ್ಥೆಯನ್ನು ಕಲ್ಪಿಸಲಾಗಿದೆ.