ಉಪ್ಪಿನಂಗಡಿ ಬಳಿ ಉರುಳಿ ಬಿದ್ದ ಟ್ಯಾಂಕರ್

ಮಂಗಳೂರು, ನ.19 : ಉಪ್ಪಿನಂಗಡಿಯಲ್ಲಿ ಗ್ಯಾಸ್ ಟ್ಯಾಂಕರ್ ಉರುಳಿ ಬಿದ್ದಿದ್ದು, ಅನಿಲ ಸೋರಿಕೆಯಾಗುತ್ತಿದೆ ಎಂಬ ಸುದ್ದಿಯಿಂದ ಸ್ಥಳೀಯರು ಆತಂಕಗೊಂಡಿದ್ದರು. ಅಗ್ನಿಶಾಮಕದಳದ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ, ಗ್ಯಾಸ್ ಸೋರಿಕೆ ತಡೆಯಲು ಕ್ರಮಗಳನ್ನು ಕೈಗೊಂಡಿದ್ದಾರೆ. ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯನ್ನು ಬಂದ್ ಮಾಡಲಾಗಿದೆ.

ಬೆಂಗಳೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿಯ ಮಾಣಿ-ಉಪ್ಪಿನಂಗಡಿ ಮಧ್ಯೆಯ ಕಡಿದಾದ ತಿರುವಿನಲ್ಲಿ ಗ್ಯಾಸ್ ಟ್ಯಾಂಕರ್ ಬುಧವಾರ ಬೆಳಗ್ಗೆ 8 ಗಂಟೆ ಸುಮಾರಿಗೆ ಪಲ್ಟಿ ಹೊಡೆದಿದೆ. ಟ್ಯಾಂಕರ್‌ನಿಂದ ಗ್ಯಾಸ್ ಸೋರಿಕೆಯಾಗುತ್ತಿದೆ ಎಂಬ ಸುದ್ದಿ ಹಬ್ಬಿದ್ದು, ಸ್ಥಳೀಯರು ಆತಂಕಗೊಂಡಿದ್ದರು.

Uppinangady

ಪುತ್ತೂರು , ಬಂಟ್ವಾಳ ಅಗ್ನಿಶಾಮಕ ಸಿಬ್ಬಂದಿಗಳು ಸ್ಥಳಕ್ಕೆ ಭೇಟಿ ನೀಡಿದ್ದು, ಗ್ಯಾಸ್ ಸೋರಿಕೆಯಾಗದಂತೆ ತಡೆಯಲು ಅಗತ್ಯ ಕ್ರಮಗಳನ್ನು ಕೈಗೊಂಡಿದ್ದಾರೆ. ಮುಂಜಾಗ್ರತಾ ಕ್ರಮವಾಗಿ ಹೆದ್ದಾರಿ ಬಂದ್ ಮಾಡಲಾಗಿದ್ದು, ಉಪ್ಪಿನಂಗಡಿಯಿಂದ ಬರುವ ವಾಹನಗಳನ್ನು ಪುತ್ತೂರು-ಮಾಣಿ ಮಾರ್ಗವಾಗಿ ಕಳುಹಿಸಲಾಗುತ್ತಿದೆ.

ಗ್ಯಾಸ್ ಟ್ಯಾಂಕರ್ ಪಲ್ಟಿ ಹೊಡೆದಿದ್ದರಿಂದ ರಸ್ತೆಯಲ್ಲಿ ಕೆಲವು ಗಂಟೆಗಳ ಕಾಲ ಸಂಚಾರ ದಟ್ಟಣೆ ಉಂಟಾಗಿತ್ತು. ಉಪ್ಪಿನಂಗಡಿಯಿಂದ ಮಾಣಿವರೆಗಿನ ರಸ್ತೆ ಕಡಿದಾದ ತಿರುವುಗಳನ್ನು ಹೊಂದಿದ್ದು, ಇಲ್ಲಿನ ಪೆರ್ನೆ ಎಂಬಲ್ಲಿ ಕಳೆದ ವರ್ಷ ಗ್ಯಾಸ್ ಟ್ಯಾಂಕರ್ ಪಲ್ಟಿಯಾಗಿ ಬೆಂಕಿ ಹೊತ್ತಿಕೊಂಡು 6 ಜನರು ಸಾವನ್ನಪ್ಪಿ, ಅನೇಕರು ಗಾಯಗೊಂಡಿದ್ದರು. [ಚಿತ್ರ : ಐಸಾಕ್ ರಿಚರ್ಡ್, ಮಂಗಳೂರು]

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+