ಪುತ್ತೂರು: ಕಾಲುವೆಗೆ ಉರುಳಿಬಿದ್ದ ಗ್ಯಾಸ್ ಟ್ಯಾಂಕರ್
ಪುತ್ತೂರು, ಅಕ್ಟೋಬರ್, 18: ಪುತ್ತೂರು ತಾಲೂಕಿನ ಉಪ್ಪಿನಂಗಡಿ ಗ್ರಾಮದ ನೀರಕಟ್ಟೆ ಸಮೀಪ ಖಾಲಿ ಗ್ಯಾಸ್ ಟ್ಯಾಂಕರೊಂದು ಮೋರಿಗೆ ಉರುಳಿ ಬಿದ್ದ ಘಟನೆ ಇಂದು ನಡೆದಿದೆ.
ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಕಾರಣದಿಂದ ಈ ಘಟನೆ ಸಂಭವಿಸಿದೆ ಎಂದು ತಿಳಿದು ಬಂದಿದೆ. ಗ್ಯಾಸ್ ಟ್ಯಾಂಕರ್ ಖಾಲಿ ಇದ್ದ ಕಾರಣದಿಂದ ಯಾವುದೇ ರೀತಿಯ ಪ್ರಾಣ ಹಾನಿ ಸಂಭವಿಸಿಲ್ಲ.

ಈ ಗ್ಯಾಸ್ ಟ್ಯಾಂಕರ್ ಬೆಂಗಳೂರಿನಿಂದ ಮಂಗಳೂರಿಗೆ ಬರುತ್ತಿದ್ದಾಗ ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಈ ಅವಘಡ ಸಂಭವಿಸಿದೆ.
ಟ್ಯಾಂಕರ್ ಚಾಲಕ ಹಾಗೂ ಕ್ಲೀನರ್ ಗೆ ಕಿರು ಗಾಯಗಳಾಗಿದ್ದು , ಪ್ರಾಣಾಪಾಯದಿಂದ ಪಾರಾಗಿದ್ದಾರೆ . ಈ ಟ್ಯಾಂಕರ್ ಭಾರತ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್ (ಬಿಪಿಸಿಎಲ್)ಗೆ ಸೇರಿದೆ ಎಂದು ತಿಳಿದುಬಂದಿದೆ.
ಉಪ್ಪಿನಂಗಡಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.












Click it and Unblock the Notifications