ಮಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಮಂಗಳೂರು ರಾಷ್ಟ್ರೀಯ ಹೆದ್ದಾರಿ ಬಳಿ ಗ್ಯಾಸ್ ಟ್ಯಾಂಕರ್ ಪಲ್ಟಿ , ರಸ್ತೆ ಬಂದ್

|
Google Oneindia Kannada News

ಮಂಗಳೂರು ಜನವರಿ 19 : ಗ್ಯಾಸ್ ಸಾಗಿಸುತ್ತಿದ್ದ ಟ್ಯಾಂಕರ್ ಒಂದು ರಾಷ್ಟ್ರೀಯ ಹೆದ್ದಾರಿಯಲ್ಲಿ ಉರುಳಿ ಬಿದ್ದ ಘಟನೆ ಮಂಗಳೂರಿನಲ್ಲಿ ನಡೆದಿದೆ. ನಗರದ ಹೊರವಲಯದ ಪಟೀಲ್ ಎಂಬಲ್ಲಿ ಈ ಘಟನೆ ನಡೆದಿದೆ. ಮಂಗಳೂರು -ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಪಡೀಲ್ ನ ಮರೋಳಿಯಲ್ಲಿ ಗ್ಯಾಸ್ ಟ್ಯಾಂಕರ್ ಪಲ್ಟಿಯಾಗಿದೆ.

ಮಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಉರುಳಿ ಬಿದ್ದ ಗ್ಯಾಸ್ ಟ್ಯಾಂಕರ್, ತಪ್ಪಿದ ಅನಾಹುತಮಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಉರುಳಿ ಬಿದ್ದ ಗ್ಯಾಸ್ ಟ್ಯಾಂಕರ್, ತಪ್ಪಿದ ಅನಾಹುತ

ಮಂಗಳೂರಿನಿಂದ ಬಿಸಿರೋಡ್ ಮುಲಕ ಬೆಂಗಳೂರಿನ ಕಡೆಗೆ ಹೋಗುತ್ತಿದ್ದ ಗ್ಯಾಸ್ ಟ್ಯಾಂಕರ್ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಟ್ಯಾಂಕರ್ ನಲ್ಲಿದ್ದ ಗ್ಯಾಸ್ ಸೋರಿಕೆಯಾದ ಹಿನ್ನೆಲೆಯಲ್ಲಿ ಆತಂಕ ಸೃಷ್ಟಿಯಾಗಿತ್ತು. ಗ್ಯಾಸ್ ಸೋರಿಕೆ ಆತಂಕದ ಹಿನ್ನೆಲೆಯಲ್ಲಿ ಪೊಲೀಸರು ಮರೋಳಿ ಯಿಂದ ಪಡೀಲ್ ವರೆಗೆ ರಸ್ತೆ ಬಂದ್ ಮಾಡಿದ್ದಾರೆ.

Gas tanker over turned near Mangaluru

ಮುನ್ನೆಚ್ಚರಿಕೆ ಕ್ರಮವಾಗಿ ಮರೋಳಿ ಹಾಗು ಪಡೀಲ್ ಪ್ರದೇಶದ ಸ್ಥಳೀಯರಿಗೆ ಮನೆಗಳಿಲ್ಲಿ ಬೆಂಕಿ ಉರಿಸದಂತೆ ಸೂಚನೆ ನೀಡಲಾಗಿತ್ತು. ಟ್ಯಾಂಕರ್ ಪಲ್ಟಿಯಾದ ಭಾಗದಲ್ಲಿ ವಿದ್ಯುತ್ ಸಂಪರ್ಕ ಕಡಿತಗೊಳಿಸಲಾಗಿದೆ. ಟ್ಯಾಂಕರ್ ಉರುಳಿ ಬಿದ್ದ ಸ್ಥಳಕ್ಕೆ ಅಗ್ನಿಶಾಮಕ ದಳ ಸಿಬ್ಬಂದಿಗಳು ತೆರಳಿ ಪರಿಶೀಲನೆ ನಡೆಸಿದ್ದು ಗ್ಯಾಸ್ ಸೋರಿಕೆಯನ್ನು ತಡೆಗಟ್ಟಲಾಗಿದೆ.

English summary
Gas tanker overturned on National highway in Maroli near Mangaluru. As there is suspicion that the gas is been leaked the police officials closed the road,
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X