ಜಾರ್ಜ್ ಫರ್ನಾಂಡಿಸ್ ಬಗ್ಗೆ ಧರ್ಮಸ್ಥಳದ ಧರ್ಮಾಧಿಕಾರಿ ಹೇಳಿದ್ದೇನು?
ಮಂಗಳೂರು, ಜನವರಿ 29: ಕೇಂದ್ರದ ಮಾಜಿ ರಕ್ಷಣಾ ಸಚಿವ ಜಾರ್ಜ್ ಫರ್ನಾಂಡಿಸ್ ನಿಧನಕ್ಕೆ ಧರ್ಮಸ್ಥಳ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಸಂತಾಪ ಸೂಚಿಸಿದ್ದಾರೆ. ಧರ್ಮಸ್ಥಳದಲ್ಲಿ ಮಾತನಾಡಿದ ಅವರು, ಜಾರ್ಜ್ ಹಾಗೂ ತಮ್ಮ ನಡುವಿನ ಬಾಂಧವ್ಯವನ್ನು ಮೆಲುಕು ಹಾಕಿದರು.
ಜಾರ್ಜ್ ಫರ್ನಾಂಡಿಸ್ ನಿಧನದಿಂದ ದೇಶವು ಓರ್ವ ಅಪ್ರತಿಮ ದೇಶಭಕ್ತನನ್ನು ಕಳೆದುಕೊಂಡಿದೆ. ದೇಶದ ತುರ್ತು ಪರಿಸ್ಥಿತಿ ಸಂದರ್ಭದಲ್ಲಿ ದಿಢೀರನೆ ಧರ್ಮಸ್ಥಳಕ್ಕೆ ಆಗಮಿಸಿದ್ದ ಅವರು, ನನ್ನ ಮುಂದೆ ಬಂದು, ಐ ಯಾಮ್ ಜಾರ್ಜ್ ಫರ್ನಾಂಡಿಸ್ ಎಂದು ಪರಿಚಯಿಸಿಕೊಂಡಿದ್ದರು. ನನ್ನೊಂದಿಗೆ ಮಾತುಕತೆ ನಡೆಸಿದ ಬಳಿಕ ಧರ್ಮಸ್ಥಳದಿಂದ ವಾಪಸು ಹೋಗಿದ್ದರು.

ಕೇಂದ್ರದಲ್ಲಿ ಮಂತ್ರಿಯಾದ ಬಳಿಕ ಮತ್ತೆ ನನಗೆ ಫೋನ್ ಮಾಡಿ, ನಾನು ಧರ್ಮಸ್ಥಳಕ್ಕೆ ಬರುತ್ತಿದ್ದೇನೆ ಎಂದು ಹೇಳಿದ್ದರು ಎಂದು ಹೆಗ್ಗಡೆ ಅವರು ನೆನಪಿಸಿಕೊಂಡರು. ದಿಢೀರನೆ ಬರುವ ಸಾಧಾರಣ ವ್ಯಕ್ತಿತ್ವದ ಮನುಷ್ಯ ಜಾರ್ಜ್ ಎಂದು ಹೇಳಿದ ಅವರು, ಕಾರ್ಮಿಕರಿಗಾಗಿ, ದೇಶಕ್ಕಾಗಿ ದುಡಿದ ಅಪ್ರತಿಮ ದೇಶಭಕ್ತ ಜಾರ್ಜ್ ಫರ್ನಾಂಡೀಸ್. ಅವರ ನಿಧನದಿಂದ ದೇಶಕ್ಕೆ ತುಂಬಲಾರದ ನಷ್ಟವಾಗಿದೆ ಎಂದು ಅವರು ಅಭಿಪ್ರಾಯಪಟ್ಟರು.
-
Bengaluru Rent: ಬೆಂಗಳೂರು ಬಾಡಿಗೆ ಮನೆ ಸಮಸ್ಯೆ: 10 ತಿಂಗಳ ಮುಂಗಡ ಹಣ,ಮಾಲೀಕರ ಕಿರಿಕಿರಿ; 2026ರ ಹೊಸ ಬಾಡಿಗೆ ನಿಯಮವೇನು -
ಪಿಯು ಮೌಲ್ಯಮಾಪನ ಬಹಿಷ್ಕಾರಕ್ಕೆ ಮುಂದಾದ ಉಪನ್ಯಾಸಕರು: ಫಲಿತಾಂಶ ವಿಳಂಬದ ಆತಂಕದಲ್ಲಿ ದ್ವಿತೀಯ ಪಿಯು ವಿದ್ಯಾರ್ಥಿಗಳು -
Anil Kumble: ನಟ ಶಾರುಖ್ ಖಾನ್ ಮಾಲೀಕತ್ವದ ಕೆಕೆಆರ್ ತಂಡ ದಾರಿತಪ್ಪಿದ ಬಗ್ಗೆ ಅನಿಲ್ ಕುಂಬ್ಳೆ ಮಹತ್ವದ ಮಾಹಿತಿ -
ಹೆಣ್ಣುಬಾಕ ಕಾಮಪೀಠಿ ವೈರಮುತ್ತು ರಾಮಸ್ವಾಮಿ ಜ್ಞಾನಪೀಠಕ್ಕೆ ಕಳಂಕ: ಲೇಖಕ ಅರುಣ್ ಜೋಳದಕೂಡ್ಲಿಗಿ -
Piped Gas: ಬೆಂಗಳೂರಿಗರಿಗೆ ತಲುಪದ ಪೈಪ್ಡ್ ಗ್ಯಾಸ್: ಮಹತ್ವಾಕಾಂಕ್ಷಿ ಯೋಜನೆಗೆ ವಿಘ್ನಗಳ ಸರಮಾಲೆ -
Gold Rate Today: ಬಂಗಾರ ಪ್ರಿಯರಿಗೆ ಸಿಹಿಸುದ್ದಿ: ಇಂದೂ ಇಳಿಕೆ ಕಂಡ ಚಿನ್ನದ ಬೆಲೆ, ಬೆಂಗಳೂರಿನಲ್ಲಿ ದರಗಳು ಹೀಗಿವೆ -
ಎಲೆಕ್ಷನ್ ಇವತ್ತೇ ನಡೆದರೆ ತಮಿಳುನಾಡು, ಕೇರಳಂ, ಪಶ್ಚಿಮ ಬಂಗಾಳದಲ್ಲಿ ಯಾರಿಗೆ ಗೆಲುವು? ಸಮೀಕ್ಷೆ ನೀಡಿದ ಮಾಹಿತಿ ಇಲ್ಲಿದೆ -
ಟೀಂ ಇಂಡಿಯಾ ಕ್ರಿಕೆಟರ್ ಕುಲದೀಪ್ ಯಾದವ್ ಕೈಹಿಡಿದ ವಂಶಿಕಾ ಚಡ್ಡಾ ಯಾರು? -
Bengaluru: 1 ತಿಂಗಳು ಬದುಕೋಕೆ ಇಷ್ಟೊಂದು ಖರ್ಚಾಗುತ್ತಾ? ಯುವತಿಯ ಪೋಸ್ಟ್ ಕಂಡು ಬೆಚ್ಚಿಬಿದ್ದ ನೆಟ್ಟಿಗರು -
Amala Paul: ಡೇಟಿಂಗ್ನಲ್ಲೇ ಗರ್ಭಿಣಿಯಾದೆ, ಆತುರದಲ್ಲಿ ಎರಡನೇ ಮದುವೆ ಆಯ್ತು: ಹೆಬ್ಬುಲಿ ನಟಿ ಅಮಲಾ ಪೌಲ್ -
Oscars 2026: ಮೈಕಲ್ ಜೋರ್ಡಾನ್ ಅತ್ಯುತ್ತಮ ನಟ, ಜೆಸ್ಸಿ ಬಕ್ಲಿ ಅತ್ಯುತ್ತಮ ನಟಿ: ಪ್ರಶಸ್ತಿ ವಿಜೇತರ ಪಟ್ಟಿ ಇಲ್ಲಿದೆ -
SSLC ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಹಾಲ್ ಟಿಕೆಟ್ ತೋರಿಸಿದ್ರೆ KSRTC ಬಸ್ಸುಗಳಲ್ಲಿ ಉಚಿತ ಪ್ರಯಾಣ












Click it and Unblock the Notifications