ಮಂಗಳೂರು: ಕೆಲಸಕ್ಕೆಂದು ಬಂದಿದ್ದ ಉತ್ತರ ಕನ್ನಡ ಯುವತಿ ನಾಪತ್ತೆ
ಇನ್ನು ನಾಲ್ವರು ಯುವತಿಯರು ನಾಪತ್ತೆಯಾಗಿದ್ದು, ಹುಡುಗಿಯರ ಮಾರಾಟ ನಡೆದಿರಬಹುದೇ ಎನ್ನುವ ಶಂಕೆ ವ್ಯಕ್ತವಾಗಿದೆ. ಈ ಹಿನ್ನಲೆಯಲ್ಲಿ ಉತ್ತರ ಕನ್ನಡ ಮೂಲದ 5 ಯುವತಿಯರು ನಿಗೂಢವಾಗಿ ನಾಪತ್ತೆಯಾಗಿರುವ ಪ್ರಕರಣಕ್ಕೆ ಸಂಬಂಧಿಸಿ ಪ್ರಕರಣ ದಾಖಲಾಗಿದೆ.
ಮಂಗಳೂರು: ಉಳ್ಳಾಲದ ಮೀನು ಉತ್ಪನ್ನ ಕಂಪೆನಿಯೊಂದರಲ್ಲಿ ಎಂಟು ತಿಂಗಳ ಹಿಂದೆ ಕೆಲಸಕ್ಕೆಂದು ಸೇರಿದ್ದ ಉತ್ತರ ಕನ್ನಡ ಜಿಲ್ಲೆಯ ಯುವತಿ ನಾಪತ್ತೆಯಾಗಿದ್ದಾಳೆ. ಆಕೆಯನ್ನು ಕರೆತಂದ ಯುವತಿಯು ಸಂಪರ್ಕಕ್ಕೆ ಲಭ್ಯವಾಗುತ್ತಿಲ್ಲ.
ಉತ್ತರ ಕನ್ನಡ ಜಿಲ್ಲೆಯ ರಾಯಪಟ್ಟಣ, ಹಳಿಯಾಳ ತಾಲೂಕಿನ ದೊಂಡಿಬಾಯಿ ಚಿಮನು ಬಾಜಾರಿ (೨೦) ಎಂಬ ಯುವತಿ ಉಳ್ಳಾಲಕ್ಕೆ ಕೆಲಸಕ್ಕೆಂದು ಬಂದಿದ್ದ ಯುವತಿ. ದೊಂ

ಡಿಬಾಯಿಯನ್ನು ಮಂಗಳೂರಿನಲ್ಲಿ ಕೆಲಸಕ್ಕಿದ್ದ ಮೂಲತಃ ಯಲ್ಲಾಪುರದ ಸುನಿತಾ ದುಳು ಬಿಚ್ಚಕಲೆ (೨೪) ಎಂಬವಳು ಕಳೆದ ಎಂಟು ತಿಂಗಳ ಹಿಂದೆ ತಾನು ಮಂಗಳೂರಿನ ಉಳ್ಳಾಲದ ಮೀನಿನ ಫ್ಯಾಕ್ಚಟರಿಯ ಏಜೇಂಟ್ ಎಂದು ಪರಿಚಯಿಸಿಕೊಂಡು ಫ್ಯಾಕ್ಟಾರಿಗೆ ಕೆಲಸಕ್ಕೆ ಸೇರಿಸಿದ್ದಳು ಎನ್ನಲಾಗಿದೆ.
ಇದೇ ಊರಿನ ಇನ್ನು ನಾಲ್ವರು ಯುವತಿಯರು ನಾಪತ್ತೆಯಾಗಿದ್ದು, ಹುಡುಗಿಯರ ಮಾರಾಟ ನಡೆದಿರಬಹುದೇ ಎನ್ನುವ ಶಂಕೆ ವ್ಯಕ್ತವಾಗಿದೆ. ಈ ಹಿನ್ನಲೆಯಲ್ಲಿ ಉತ್ತರ ಕನ್ನಡ ಮೂಲದ ಐವರು ಯುವತಿಯರು ನಿಗೂಢವಾಗಿ ನಾಪತ್ತೆಯಾಗಿರುವ ಪ್ರಕರಣಕ್ಕೆ ಸಂಬಂಧಿಸಿ ಹೆತ್ತವರು, ಪೋಷಕರು ಉಳ್ಳಾಲ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಈ ಸಂದರ್ಭ ಠಾಣೆಗೆ ಬಂದಿದ್ದ ಹೆಣ್ಮಕ್ಕಳ ಪೋಷಕರು ಯುವತಿಯರ ನಾಪತ್ತೆ ಹಿಂದೆ ಉಳ್ಳಾಲ ಮೂಲದ ಕಾಣದ ಕೈಗಳ ಕೈವಾಡವಿದೆ ಎಂದು ಆರೋಪಿಸಿದ್ದಾರೆ.
ಉಳ್ಳಾಲ ಸುತ್ತಮುತ್ತ ಹೆಣ್ಮಕ್ಕಳ ಮಾರಾಟ ಜಾಲ ಕಾರ್ಯಾಚರಿಸುತ್ತಿದೆಯೇ ಎಂಬ ಶಂಕೆ ಎದ್ದಿದ್ದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications