ಮಂಗಳೂರು: ಬ್ಯಾನರ್ನಲ್ಲಿ ಗೋಡ್ಸೆ ಫೋಟೋ ಪ್ರತ್ಯಕ್ಷ, ಮತ್ತೊಂದು ವಿವಾದ
ಮಂಗಳೂರು, ಆಗಸ್ಟ್, 18: ರಾಜ್ಯದಲ್ಲಿ ಸಾವರ್ಕರ್ ಬ್ಯಾನರ್ ವಿವಾದ ತೀವ್ರವಾಗಿರುವ ಸಂದರ್ಭದಲ್ಲಿ ಮಂಗಳೂರಿನಲ್ಲಿ ಬ್ಯಾನರ್ ವಿವಾದ ಪ್ರತಿಧ್ವನಿಸಿದೆ. ಅಖಿಲ ಭಾರತ ಹಿಂದೂ ಮಹಾಸಭಾ ಕೃಷ್ಣ ಜನ್ಮಾಷ್ಟಮಿಗೆ ನಾಡಿನ ಜನತೆಗೆ ಶುಭಾಶಯ ಕೋರುವ ನಿಟ್ಟಿನಲ್ಲಿ ಮತ್ತೊಂದು ವಿವಾದವನ್ನು ಸೃಷ್ಟಿಸಿದೆ. ಬ್ಯಾನರ್ನಲ್ಲಿ ಸಾವರ್ಕರ್ ಫೋಟೋ ಜೊತೆಗೆ ನಾಥುರಾಮ್ ಗೋಡ್ಸೆಯ ಫೋಟೋ ಹಾಕಿರುವುದು ತೀವ್ರ ವಿವಾದವನ್ನು ಸೃಷ್ಟಿಸಿದೆ.
ಅಖಿಲ ಭಾರತ ಹಿಂದೂ ಮಹಾಸಭಾ ರಾಜ್ಯಾಧ್ಯಕ್ಷ ರಾಜೇಶ್ ಪವಿತ್ರನ್ ಹೆಸರಿನಲ್ಲಿ ಬ್ಯಾನರ್ ಹಾಕಲಾಗಿದೆ. ಮಂಗಳೂರಿನ ಸುರತ್ಕಲ್, ಬೈಕಂಪಾಡಿ, ಕೂಳೂರು ಭಾಗದಲ್ಲಿ ಬ್ಯಾನರ್ ಅಳವಡಿಸಲಾಗಿದೆ. ಶ್ರೀ ಕೃಷ್ಣ ಜನ್ಮಾಷ್ಟಮಿಗೆ ಶುಭಕೋರುವ ನೆಪದಲ್ಲಿ ಬ್ಯಾನರ್ ಹಾಕಲಾಗಿದೆ. ಈ ಬ್ಯಾನರ್ನಲ್ಲಿ ವಿನಾಯಕ ದಾಮೋದರ ಸಾವರ್ಕರ್ ಮತ್ತು ನಾಥುರಾಮ್ ಗೋಡ್ಸೆಯ ಫೋಟೋವನ್ನು ಹಾಕಲಾಗಿದೆ. ಅಲ್ಲದೇ ಬ್ಯಾನರ್ನಲ್ಲಿ "ರಾಜಕೀಯವನ್ನು ಹಿಂದುತ್ವಗೊಳಿಸಿ, ಹಿಂದೂಗಳನ್ನು ಸೈನಿಕೀಕರಣಗೊಳಿಸಿ" ಎಂಬ ಘೋಷ ವಾಕ್ಯವನ್ನು ನಮೂದಿಸಿದ್ದಾರೆ. ಬ್ಯಾನರ್ನಲ್ಲಿ ಹಿಂದೂ ಮಹಾಸಭಾದ ಪದಾಧಿಕಾರಿಗಳ ಫೋಟೋವನ್ನು ಕೂಡ ಹಾಕಲಾಗಿದೆ.

ಇದೀಗ ಈ ಬ್ಯಾನರ್ಗೆ ಸಾಕಷ್ಟು ವಿರೋಧ ವ್ಯಕ್ತವಾಗಿದೆ. ಮಹಾತ್ಮ ಗಾಂಧೀಜೀ ಅವರನ್ನು ಹತ್ಯೆ ಮಾಡಿದ ನಾಥುರಾಮ್ ಗೋಡ್ಸೆಯ ಫೋಟೋವನ್ನು ಹಾಕಿದ್ದು, ಉದ್ಧಟತನದ ಪರಮಾವಧಿ ಎನ್ನುವ ಮಾತುಗಳು ಎಲ್ಲೆಡೆ ಕೇಳಿಬರುತ್ತಿವೆ. ಕೂಡಲೇ ಈ ಬ್ಯಾನರ್ ಅನ್ನು ತೆರವುಗೊಳಿಸಿ. ಬ್ಯಾನರ್ ಹಾಕಿದ ಸಂಘಟನೆಯ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ರಾಜ್ಯ ಕಾಂಗ್ರೆಸ್ ಒತ್ತಾಯಿಸಿದೆ.

ಈ ಬ್ಯಾನರ್ ತೀವ್ರ ವಿವಾದ ಸೃಷ್ಠಿಸಿದ ಹಿನ್ನಲೆಯಲ್ಲಿ ಪೊಲೀಸರು, ಮಂಗಳೂರು ಮಹಾನಗರ ಪಾಲಿಕೆಯ ಅಧಿಕಾರಿಗಳು ಸ್ಥಳಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ನಾಥುರಾಮ್ ಗೋಡ್ಸೆಯ ಫೋಟೋ ಹಾಕಿರುವುದು ಮತ್ತಷ್ಟು ಸಂಘರ್ಷಕ್ಕೆ ಆಸ್ಪದ ನೀಡುವ ಹಿನ್ನೆಲೆಯಲ್ಲಿ ಬ್ಯಾನರ್ ತೆರವುಗೊಳಿಸುವಂತೆ ಅಖಿಲ ಭಾರತ ಹಿಂದೂ ಮಹಾಸಭಾಗೆ ಸೂಚನೆ ನೀಡಿದ್ದಾರೆ. ಈ ಬಗ್ಗೆ ಹಿಂದೂಮಹಾಸಭಾ ಪ್ರತಿಕ್ರಿಯೆ ನೀಡಿದ್ದು, ಹಿಂದೂಮಹಾಸಭಾವನ್ನು ಆರಂಭಗೊಳಿಸಿರುವುದು ಸಾವರ್ಕರ್. ಅವರ ಚಿಂತನೆಗಳಿಗೆ ಪ್ರಭಾವಿತರಾದವರು ನಾಥುರಾಮ್ ಗೋಡ್ಸೆ. ಈ ಹಿನ್ನೆಲೆಯಲ್ಲಿ ಫೋಟೋವನ್ನು ಬ್ಯಾನರ್ನಲ್ಲಿ ಹಾಕಲಾಗಿದೆ ಎಂದಿದ್ದಾರೆ.
-
Gas Bill: ಇಡ್ಲಿ-ವಡೆ ಜೊತೆಗೆ ಗ್ಯಾಸ್ ಶುಲ್ಕ ವಿಧಿಸಿದ ರೆಸ್ಟೋರೆಂಟ್!: ದಂಗಾದ ಗ್ರಾಹಕರು, ಇಲ್ಲಿವೆ ನೋಡಿ ದರಗಳು -
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ಇರಾನ್ ಪರಮಾಣು ವಿಜ್ಞಾನಿ ಕಥೆ ಮುಗಿಸಿದ ಇಸ್ರೇಲ್, ಮತ್ತಷ್ಟು ತಿಕ್ಕಾಟ ಶುರು | Operation Roaring Lion -
ಹೊಸೂರು ವಿಮಾನ ನಿಲ್ದಾಣ: ಬೆಂಗಳೂರು ಸಮೀಪ 2,979 ಎಕರೆ ಭೂಮಿ ಸ್ವಾಧೀನ; ಕನ್ನಡದಲ್ಲೇ ಮಾತನಾಡಿದ ತಮಿಳುನಾಡು ಶಾಸಕ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ -
ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ -
Rashmika Mandanna: ಆ ಆಡಿಯೋ, ವಿಷಯವನ್ನ 24 ಗಂಟೆಯೊಳಗೆ ಡಿಲೀಟ್ ಮಾಡದಿದ್ದರೆ ಕಾನೂನು ಕ್ರಮ ಎಂದ ರಶ್ಮಿಕಾ ಮಂದಣ್ಣ -
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ












Click it and Unblock the Notifications