• search
  • Live TV
ಮಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಮಂಗಳೂರು: ಬ್ಯಾನರ್‌ನಲ್ಲಿ ಗೋಡ್ಸೆ ಫೋಟೋ ಪ್ರತ್ಯಕ್ಷ, ಮತ್ತೊಂದು ವಿವಾದ

By ಮಂಗಳೂರು ಪ್ರತಿನಿಧಿ
|
Google Oneindia Kannada News

ಮಂಗಳೂರು, ಆಗಸ್ಟ್‌, 18: ರಾಜ್ಯದಲ್ಲಿ ಸಾವರ್ಕರ್ ಬ್ಯಾನರ್ ವಿವಾದ ತೀವ್ರವಾಗಿರುವ ಸಂದರ್ಭದಲ್ಲಿ ಮಂಗಳೂರಿನಲ್ಲಿ ಬ್ಯಾನರ್ ವಿವಾದ ಪ್ರತಿಧ್ವನಿಸಿದೆ. ಅಖಿಲ ಭಾರತ ಹಿಂದೂ ಮಹಾಸಭಾ ಕೃಷ್ಣ ಜನ್ಮಾಷ್ಟಮಿಗೆ ನಾಡಿನ ಜನತೆಗೆ ಶುಭಾಶಯ ಕೋರುವ ನಿಟ್ಟಿನಲ್ಲಿ ಮತ್ತೊಂದು ವಿವಾದವನ್ನು ಸೃಷ್ಟಿಸಿದೆ. ಬ್ಯಾನರ್‌ನಲ್ಲಿ ಸಾವರ್ಕರ್ ಫೋಟೋ ಜೊತೆಗೆ ನಾಥುರಾಮ್ ಗೋಡ್ಸೆಯ ಫೋಟೋ ಹಾಕಿರುವುದು ತೀವ್ರ ವಿವಾದವನ್ನು ಸೃಷ್ಟಿಸಿದೆ.

ಅಖಿಲ ಭಾರತ ಹಿಂದೂ ಮಹಾಸಭಾ ರಾಜ್ಯಾಧ್ಯಕ್ಷ ರಾಜೇಶ್ ಪವಿತ್ರನ್ ಹೆಸರಿನಲ್ಲಿ ಬ್ಯಾನರ್ ಹಾಕಲಾಗಿದೆ. ಮಂಗಳೂರಿನ ಸುರತ್ಕಲ್, ಬೈಕಂಪಾಡಿ, ಕೂಳೂರು ಭಾಗದಲ್ಲಿ ಬ್ಯಾನರ್ ಅಳವಡಿಸಲಾಗಿದೆ. ಶ್ರೀ ಕೃಷ್ಣ ಜನ್ಮಾಷ್ಟಮಿಗೆ ಶುಭಕೋರುವ ನೆಪದಲ್ಲಿ ಬ್ಯಾನರ್ ಹಾಕಲಾಗಿದೆ. ಈ ಬ್ಯಾನರ್‌ನಲ್ಲಿ ವಿನಾಯಕ ದಾಮೋದರ ಸಾವರ್ಕರ್ ಮತ್ತು ನಾಥುರಾಮ್ ಗೋಡ್ಸೆಯ ಫೋಟೋವನ್ನು ಹಾಕಲಾಗಿದೆ. ಅಲ್ಲದೇ ಬ್ಯಾನರ್‌ನಲ್ಲಿ "ರಾಜಕೀಯವನ್ನು ಹಿಂದುತ್ವಗೊಳಿಸಿ, ಹಿಂದೂಗಳನ್ನು ಸೈನಿಕೀಕರಣಗೊಳಿಸಿ" ಎಂಬ ಘೋಷ ವಾಕ್ಯವನ್ನು ನಮೂದಿಸಿದ್ದಾರೆ. ಬ್ಯಾನರ್‌ನಲ್ಲಿ ಹಿಂದೂ ಮಹಾಸಭಾದ ಪದಾಧಿಕಾರಿಗಳ ಫೋಟೋವನ್ನು ಕೂಡ ಹಾಕಲಾಗಿದೆ.

ಇದೀಗ ಈ ಬ್ಯಾನರ್‌ಗೆ ಸಾಕಷ್ಟು ವಿರೋಧ ವ್ಯಕ್ತವಾಗಿದೆ. ಮಹಾತ್ಮ ಗಾಂಧೀಜೀ ಅವರನ್ನು ಹತ್ಯೆ ಮಾಡಿದ ನಾಥುರಾಮ್ ಗೋಡ್ಸೆಯ ಫೋಟೋವನ್ನು ಹಾಕಿದ್ದು, ಉದ್ಧಟತನದ ಪರಮಾವಧಿ ಎನ್ನುವ ಮಾತುಗಳು ಎಲ್ಲೆಡೆ ಕೇಳಿಬರುತ್ತಿವೆ. ಕೂಡಲೇ ಈ ಬ್ಯಾನರ್ ಅನ್ನು ತೆರವುಗೊಳಿಸಿ. ಬ್ಯಾನರ್ ಹಾಕಿದ ಸಂಘಟನೆಯ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ರಾಜ್ಯ ಕಾಂಗ್ರೆಸ್ ಒತ್ತಾಯಿಸಿದೆ.

Mangaluru: Godse photo on banner, again controversy

ಈ ಬ್ಯಾನರ್ ತೀವ್ರ ವಿವಾದ ಸೃಷ್ಠಿಸಿದ ಹಿನ್ನಲೆಯಲ್ಲಿ ಪೊಲೀಸರು, ಮಂಗಳೂರು ಮಹಾನಗರ ಪಾಲಿಕೆಯ ಅಧಿಕಾರಿಗಳು ಸ್ಥಳಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ನಾಥುರಾಮ್ ಗೋಡ್ಸೆಯ ಫೋಟೋ ಹಾಕಿರುವುದು ಮತ್ತಷ್ಟು ಸಂಘರ್ಷಕ್ಕೆ ಆಸ್ಪದ ನೀಡುವ ಹಿನ್ನೆಲೆಯಲ್ಲಿ ಬ್ಯಾನರ್ ತೆರವುಗೊಳಿಸುವಂತೆ ಅಖಿಲ ಭಾರತ ಹಿಂದೂ ಮಹಾಸಭಾಗೆ ಸೂಚನೆ ನೀಡಿದ್ದಾರೆ. ಈ ಬಗ್ಗೆ ಹಿಂದೂಮಹಾಸಭಾ ಪ್ರತಿಕ್ರಿಯೆ ನೀಡಿದ್ದು, ಹಿಂದೂಮಹಾಸಭಾವನ್ನು ಆರಂಭಗೊಳಿಸಿರುವುದು ಸಾವರ್ಕರ್. ಅವರ ಚಿಂತನೆಗಳಿಗೆ ಪ್ರಭಾವಿತರಾದವರು ನಾಥುರಾಮ್ ಗೋಡ್ಸೆ. ಈ ಹಿನ್ನೆಲೆಯಲ್ಲಿ ಫೋಟೋವನ್ನು ಬ್ಯಾನರ್‌ನಲ್ಲಿ ಹಾಕಲಾಗಿದೆ ಎಂದಿದ್ದಾರೆ.

English summary
Another controversy has been created by posting Godse's photo at a flex in Mangalore.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X