ಮಂಗಳೂರು; ನ್ಯಾಪ್ ಕಿನ್‌ನಲ್ಲಿ ಚಿನ್ನ, ಇಬ್ಬರು ಮಹಿಳೆಯರ ಬಂಧನ
ಮಂಗಳೂರು, ಫೆಬ್ರವರಿ 18; ಮಂಗಳೂರು ವಿಮಾನ ನಿಲ್ದಾಣದಲ್ಲಿ ಅಕ್ರಮವಾಗಿ ಚಿನ್ನ ಸಾಗಣೆ ಮಾಡುತ್ತಿದ್ದ ಇಬ್ಬರು ಮಹಿಳೆಯರನ್ನು ಬಂಧಿಸಲಾಗಿದೆ. 53.50 ಲಕ್ಷ ರೂ. ಮೌಲ್ಯದ ಚಿನ್ನವನ್ನು ವಶಕ್ಕೆ ಪಡೆಯಲಾಗಿದೆ.
ಗುರುವಾರ ಮಂಗಳೂರು ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳ ಪರಿಶೀಳನೆ ವೇಳೆ ಇಬ್ಬರು ಮಹಿಳೆಯರು ಅಕ್ರಮವಾಗಿ ಚಿನ್ನ ಸಾಗಣೆ ಮಾಡುವುದು ಪತ್ತೆಯಾಗಿದೆ. ಸ್ಯಾನಿಟರಿ ನ್ಯಾಪ್ ಕಿನ್‌ನಲ್ಲಿ ಚಿನ್ನವನ್ನು ಇಡಲಾಗಿತ್ತು.
ಇಬ್ಬರು ಪ್ರಯಾಣಿಕರನ್ನು ಕಸ್ಟಮ್ಸ್ ಅಧಿಕಾರಿಗಳು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ. ಬಂಧಿತರಿಂದ ವಶಪಡಿಸಿಕೊಂಡ ಚಿನ್ನದ ಮೌಲ್ಯ 53.50 ಲಕ್ಷವಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಮುಂದುವರೆದ ಐಟಿ ದಾಳಿ; ಮಂಗಳೂರು ನಗರದಲ್ಲಿ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳ ದಾಳಿ ಗುರುವಾರವೂ ಮುಂದುವರೆದಿದೆ. ಕೋಟ್ಯಾಂತರ ರೂಪಾಯಿ ನಗದು, ಅಪಾರ ಪ್ರಮಾಣ ಚಿನ್ನ ಪತ್ತೆಯಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.
ನಾಲ್ವರು ಉದ್ಯಮಿಗಳಿಗೆ ಸೇರಿದ ಆಸ್ಪತ್ರೆ, ಮೆಡಿಕಲ್ ಕಾಲೇಜು ಸೇರಿದಂತೆ ಇತರ ಕಡೆಗಳಲ್ಲಿ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಪರಿಶೀಲನೆ ಮುಂದುವರೆಸಿದ್ದಾರೆ. 260ಕ್ಕೂ ಹೆಚ್ಚು ಅಧಿಕಾರಿಗಳು ಈ ದಾಳಿಯಲ್ಲಿ ಪಾಲ್ಗೊಂಡಿದ್ದಾರೆ.












Click it and Unblock the Notifications