ಮಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಮಂಗಳೂರು ಏರ್ ಪೋರ್ಟ್ ನಲ್ಲಿ ಗುದದ್ವಾರದಲ್ಲಿ ಚಿನ್ನ ಸಾಗಿಸುತ್ತಿದ್ದ ಮೂವರ ಬಂಧನ

|
Google Oneindia Kannada News

ಮಂಗಳೂರು, ಏಪ್ರಿಲ್ 24:ಮಂಗಳೂರು ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ಭರ್ಜರಿ ಬೇಟೆಯಾಡಿದ್ದಾರೆ. ನಗರದ ಅಂತಾರಾಷ್ಟ್ರೀಯ ವಿಮಾನ‌ ನಿಲ್ದಾಣದಲ್ಲಿ ಅಕ್ರಮವಾಗಿ ಚಿನ್ನ ಸಾಗಿಸುತ್ತಿದ್ದ ಮೂವರನ್ನು ಮಂಗಳೂರು ಕಸ್ಟಮ್ಸ್ ಅಧಿಕಾರಿಗಳು ಬಂಧಿಸಿದ್ದಾರೆ.

ಚಿನ್ನದ ಪೇಸ್ಟ್ ಗುದದ್ವಾರದಲ್ಲಿ ಅಡಗಿಸಿ ಸಾಗಿಸಲು ಯತ್ನಿಸಿದ ಮೂವರು ಪ್ರಯಾಣಿಕರನ್ನು ಬಂಧಿಸಲಾಗಿದ್ದು, ಅವರಿಂದ 49.50 ಲಕ್ಷ ಮೌಲ್ಯದ ಅಕ್ರಮ ಚಿನ್ನ ವಶಪಡಿಸಿಕೊಳ್ಳಲಾಗಿದೆ. ಈ ಮೂವರನ್ನು ಮೂರು ಪ್ರಕರಣಗಳಲ್ಲಿ ಬಂಧಿಸಲಾಗಿದ್ದು, ಒಟ್ಟು 1550 ಗ್ರಾಂ ಚಿನ್ನ ವಶಪಡಿಸಿಕೊಂಡಿದ್ದಾರೆ.

ಉಡುಪಿ ರೈಲ್ವೆ ಪ್ಲಾಟ್‌ ಫಾರಂನಲ್ಲಿ ಟಿಕ್‌ ಟಾಕ್ ಶೋ:ಇಬ್ಬರ ಬಂಧನಉಡುಪಿ ರೈಲ್ವೆ ಪ್ಲಾಟ್‌ ಫಾರಂನಲ್ಲಿ ಟಿಕ್‌ ಟಾಕ್ ಶೋ:ಇಬ್ಬರ ಬಂಧನ

ಮಂಗಳೂರು ವಿಮಾನ ನಿಲ್ದಾಣಕ್ಕೆ ದುಬೈ ವಿಮಾನದಲ್ಲಿ ಬಂದ ಪ್ರಯಾಣಿಕನ ವರ್ತನೆ ಬಗ್ಗೆ ಸಂದೇಹಗೊಂಡ ಕಸ್ಟಮ್ಸ್ ಅಧಿಕಾರಿಗಳು ಆತನನ್ನು ತಪಾಸಣೆಗೆ ಒಳಪಡಿಸಿದ್ದಾರೆ. ಈ ಸಂದರ್ಭದಲ್ಲಿ ಗುದದ್ವಾರದಲ್ಲಿ ಅಡಗಿಸಿಟ್ಟುಕೊಂಡಿದ್ದ 24 ಕ್ಯಾರೆಟ್ ಶುದ್ಧ 392.260 ಗ್ರಾಂ ಚಿನ್ನದ ಪೇಸ್ಟ್ ಮತ್ತು ಬ್ಯಾಗ್ ನಲ್ಲಿದ್ದ 52.350 ಗ್ರಾಂ ಚಿನ್ನ ಪತ್ತೆ ಹಚ್ಚಿ ವಶಪಡಿಸಿಕೊಂಡಿದ್ದಾರೆ.

Gold worth 49.50 lakh seized in Mangaluru airport

ಹಾಗೆಯೇ ಮಂಗಳೂರು ವಿಮಾನ ನಿಲ್ದಾಣಕ್ಕೆ ದೋಹದಿಂದ ಬಂದ ಇಬ್ಬರು ಪ್ರಯಾಣಿಕರಿಂದ ಗುದದ್ವಾರದಲ್ಲಿ ಅಡಗಿಸಿಟ್ಟುಕೊಂಡಿದ್ದ ಕ್ಯಾರೆಟ್ ಚಿನ್ನದ ಪೇಸ್ಟ್ ವಶಪಡಿಸಿಕೊಳ್ಳಲಾಗಿದೆ. ಓರ್ವ ಪ್ರಯಾಣಿಕನಿಂದ 462.970 ಗ್ರಾಂ ಚಿನ್ನ , ಮತ್ತೋರ್ವ ಪ್ರಯಾಣಿಕನಿಂದ 641 ಗ್ರಾಂ ಗ್ರಾಂ ಚಿನ್ನವನ್ನು ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.

English summary
In Mangaluru international airport customs officials seized 1.5 kg gold that was being smuggled in the country.3 passengers arrested in this case.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X