• search
  • Live TV
ಮಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಮಂಗಳೂರು ಗೋಲಿಬಾರ್; ಮೃತಪಟ್ಟವರಿಗೆ ಪರಿಹಾರ ಘೋಷಿಸಿದ ದೀದಿ!

|

ಮಂಗಳೂರು, ಡಿಸೆಂಬರ್ 26 : ಮಂಗಳೂರಿನಲ್ಲಿ ನಡೆದ ಪೊಲೀಸ್ ಗೋಲಿಬಾರ್‌ನಲ್ಲಿ ಇಬ್ಬರು ಯುವಕರು ಮೃತಪಟ್ಟಿದ್ದರು. ಕರ್ನಾಟಕ ಸರ್ಕಾರ ಮೃತಪಟ್ಟವರಿಗೆ ಘೋಷಣೆ ಮಾಡಿದ್ದ ಪರಿಹಾರ ನೀಡುವುದನ್ನು ತಡೆ ಹಿಡಿದಿದೆ.

ಗುರುವಾರ ಪಶ್ವಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮೃತಪಟ್ಟವರ ಕುಟುಂಬಕ್ಕೆ ತಲಾ 5 ಲಕ್ಷ ರೂ. ಪರಿಹಾರವನ್ನು ಘೋಷಣೆ ಮಾಡಿದ್ದಾರೆ. ಮಮತಾ ಬ್ಯಾನರ್ಜಿ ಅವರ ನಡೆ ಈಗ ಭಾರಿ ಚರ್ಚೆಗೆ ಕಾರಣವಾಗಿದೆ.

ಮಂಗಳೂರು ಗೋಲಿಬಾರ್‌ ಗೆ ಆದೇಶಿಸಿದ್ದು ಯಡಿಯೂರಪ್ಪ: ಸಿದ್ದರಾಮಯ್ಯ

ಡಿಸೆಂಬರ್ 19ರಂದು ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಮಂಗಳೂರಿನಲ್ಲಿ ನಡೆದ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದಾಗ ಪೊಲೀಸರು ಗೋಲಿಬಾರ್ ನಡೆಸಿದ್ದರು. ನೌಶೀನ್ ಕುದ್ರೋಳಿ ಹಾಗೂ ಅಬ್ದುಲ್ ಜಲೀಲ್ ಮೃತಪಟ್ಟಿದ್ದರು.

ಮಂಗಳೂರು ಗಲಭೆ ವಿಡಿಯೋ; ಸಿದ್ದರಾಮಯ್ಯ ಹೇಳಿದ್ದೇನು?

ಕರ್ನಾಟಕ ಸರ್ಕಾರ ಮೃತರಿಗೆ 10 ಲಕ್ಷ ರೂ. ಪರಿಹಾರ ಘೋಷಣೆ ಮಾಡಿತ್ತು. ಬಳಿಕ ಪೂರ್ವ ನಿಯೋಜಿತ ಕೃತ್ಯವಾದ್ದರಿಂದ. ಆರೋಪಿಗಳಿಗೆ ಪರಿಹಾರ ನೀಡುವುದಿಲ್ಲ ಎಂದು ಸರ್ಕಾರ ಹೇಳಿತ್ತು. ಈಗ ಪಶ್ಚಿಮ ಬಂಗಾಳ ಸರ್ಕಾರ ಪರಿಹಾರ ಘೋಷಣೆ ಮಾಡಿದೆ.

ಮಂಗಳೂರು ಗೋಲಿಬಾರ್‌ ಬಗ್ಗೆ ಮ್ಯಾಜಿಸ್ಟೀರಿಯಲ್ ತನಿಖೆ

ಕರ್ನಾಟಕ ಸರ್ಕಾರ ಗೋಲಿಬಾರ್ ಬಗ್ಗೆ ಮ್ಯಾಜಿಸ್ಟೀರಿಯಲ್ ತನಿಖೆಗೆ ಆದೇಶ ನೀಡಿದೆ. ಆದರೆ, ಮೃತಪಟ್ಟವರ ಕುಟುಂಬಕ್ಕೆ ಪರಿಹಾರ ನೀಡುವ ವಿಚಾರದಲ್ಲಿ ಇನ್ನೂ ಅಂತಿಮ ತೀರ್ಮಾನವನ್ನು ಕೈಗೊಂಡಿಲ್ಲ.

ಹಲವು ಬಿಜೆಪಿ ನಾಯಕರು ಮಮತಾ ಬ್ಯಾನರ್ಜಿ ಪರಿಹಾರ ವಿತರಣೆ ಮಾಡಿದ್ದನ್ನು ಪ್ರಶ್ನೆ ಮಾಡಿದ್ದಾರೆ. ಮಮತಾ ಬ್ಯಾನರ್ಜಿಗೂ ಮಂಗಳೂರಿಗೂ ಏನು ಸಂಬಂಧ? ಎಂದು ಹೇಳಿದ್ದಾರೆ.

English summary
West Bengal Chief Minister Mamata Banerjee announced Rs. 5 lakh for the families who killed in December 19 police golibar at Mangaluru in the time of protests against the controversial Citizenship Amendment Act (CAA).
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X